Mumbai To Bengaluru: ವಿಮಾನದ ಶೌಚಾಲಯದಲ್ಲಿ 2 ತಾಸು ಸಿಲುಕಿ ಫಜೀತಿಗೀಡಾದ ಪ್ರಯಾಣಿಕ!
Team Udayavani, Jan 17, 2024, 5:38 PM IST
ಮುಂಬೈ: ಸ್ಪೈಸ್ ಜೆಟ್ ವಿಮಾನದಲ್ಲಿ ಮುಂಬೈನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಪ್ರಯಾಣಿಕರೊಬ್ಬರು ವಿಮಾನದ ಶೌಚಾಲಯದೊಳಗೆ ಎರಡು ಗಂಟೆಯೊಳಗೆ ಸಿಲುಕಿಕೊಂಡಿದ್ದ ಘಟನೆ ಮಂಗಳವಾರ(ಜನವರಿ 15) ನಡೆದಿತ್ತು.
ಇದನ್ನೂ ಓದಿ:ಲೋ.ಸ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿದರೆ ಸಿದ್ದರಾಮಯ್ಯ 5 ವರ್ಷ ಅಡೆತಡೆ ಇಲ್ಲದೇ ಸಿಎಂ
ಪ್ರಯಾಣಿಕ ಟಾಯ್ಲೆಟ್ ನಲ್ಲಿ ಸಿಲುಕಿಕೊಂಡಿರುವುದು ಸಿಬಂದಿ ಗಮನಕ್ಕೆ ಬಂದಿತ್ತು. ಈ ವೇಳೆಯಲ್ಲಿ ಬಾಗಿಲು ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಗಮನಕ್ಕೆ ಬಂದಿತ್ತು. ಆದರೂ ಪ್ರಯಾಣಿಕರನ್ನು ರಕ್ಷಿಸಲು ಹಲವು ಬಾರಿ ಪ್ರಯತ್ನಿಸಿದ್ದರೂ ಅದು ವಿಫಲವಾಗಿತ್ತು ಎಂದು ವರದಿ ವಿವರಿಸಿದೆ.
ಒಳಗಡೆ ಸಿಲುಕಿಕೊಂಡಿದ್ದ ಪ್ರಯಾಣಿಕ ಕೂಡಾ ಬಾಗಿಲು ತೆಗೆಯಲು ಪ್ರಯತ್ನಿಸಿ ಫಜೀತಿಪಡುವಂತಾಗಿತ್ತು. “ಸರ್ ನಾವು ಬಾಗಿಲು ತೆರೆಯಲು ಪ್ರಯತ್ನಿಸುತ್ತಿದ್ದೇವೆ. ಆದರೆ ಬಾಗಿಲು ತೆರೆಯುತ್ತಿಲ್ಲ. ನೀವು ಗಾಬರಿಯಾಗಬೇಡಿ. ನಾವು ಕೆಲವೇ ನಿಮಿಷಗಳಲ್ಲಿ ಲ್ಯಾಂಡ್ ಆಗುತ್ತೇವೆ. ಹಾಗಾಗಿ ದಯವಿಟ್ಟು ಕಮೋಡ್ ಕವರ್(ಲಿಡ್) ಮುಚ್ಚಿ, ಅದರ ಮೇಲೆ ಕುಳಿತುಕೊಳ್ಳಿ. ಕೆಲವೇ ಸಮಯದಲ್ಲಿ ಮುಖ್ಯ ಬಾಗಿಲು ಓಪನ್ ಆಗಲಿದೆ. ಆಗ ಇಂಜಿನಿಯರ್ ಬಂದು ನಿಮ್ಮನ್ನು ರಕ್ಷಿಸಲಿದ್ದಾರೆ” ಎಂದು ಚಿಕ್ಕ ಪೇಪರ್ ನಲ್ಲಿ ಬರೆದು ಅದನ್ನು ಟಾಯ್ಲೆಟ್ ಬಾಗಿಲಿನ ಸಂದಿಯಲ್ಲಿ ತೂರಿಸಿ, ಪ್ರಯಾಣಿಕನಿಗೆ ಧೈರ್ಯ ತುಂಬಿದ್ದು, ಈ ನೋಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್ ಆದ ನಂತರ ಇಂಜಿನಿಯರ್ ಅವರು ಟಾಯ್ಲೆಟ್ ಬಾಗಿಲನ್ನು ತೆರೆದು, ಪ್ರಯಾಣಿಕರನ್ನು ರಕ್ಷಿಸಿದ್ದು, ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ವಿಷಾದ ವ್ಯಕ್ತಪಡಿಸಿರುವ ಸ್ಪೈಸ್ ಜೆಟ್, ಪ್ರಯಾಣಿಕರಾದ ತೊಂದರೆಗಾಗಿ ಕ್ಷಮೆಯಾಚಿಸಿದ್ದು, ಅವರ ಟಿಕೆಟ್ ಹಣವನ್ನು ಪೂರ್ಣ ಪ್ರಮಾಣದಲ್ಲಿ ಮರಳಿಸುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.