NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ...
Team Udayavani, Jan 9, 2025, 7:22 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾದ ಆರು ನಕ್ಸಲರನ್ನು ಗುರುವಾರ(ಜ9) ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಶೇಷ ಎನ್‌ಐಎ ನ್ಯಾಯಾಲಯ ಜನವರಿ 31ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ನ್ಯಾಯಾಲಯದ ವಿಚಾರಣೆಗೂ ಮುನ್ನ ಅವರನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು.ಚಿಕ್ಕಮಗಳೂರು ಪೊಲೀಸರು ಶರಣಾದ ನಕ್ಸಲರನ್ನು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಕರೆದೊಯ್ದರು.
ಡೈರಿ ಸರ್ಕಲ್ ಬಳಿಯ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಮೂವರು ಮಹಿಳೆಯರನ್ನು ಇರಿಸಲಾಗಿದ್ದು, ಮೂವರು ಪುರುಷರನ್ನು ಮಡಿವಾಳದ ಎಫ್‌ಎಸ್‌ಎಲ್ ವಿಶೇಷ ಸೆಲ್‌ನಲ್ಲಿ ಇರಿಸಲಾಗಿತ್ತು.
ಶರಣಾದವರಲ್ಲಿ ಚಿಕ್ಕಮಗಳೂರಿನ ಮುಂಡಗಾರು ಲತಾ ಮತ್ತು ವನಜಾಕ್ಷಿ, ದಕ್ಷಿಣ ಕನ್ನಡದ ಕೋಟ್ಲೂರಿನ ಸುಂದರಿ, ಕೇರಳದ ಜಿಶಾ, ತಮಿಳುನಾಡಿನ ವಸಂತ.ಕೆ, ರಾಯಚೂರಿನ ಮಾರಪ್ಪ ಅರೋಲಿ ಸೇರಿದ್ದಾರೆ.
ನಕ್ಸಲರು ಶರಣಾಗುವ ವೇಳೆ ಸಮವಸ್ತ್ರಗಳನ್ನು ಮತ್ತು ಔಪಚಾರಿಕ ಶರಣಾಗತಿ ಪತ್ರವನ್ನು ಸಿಎಂಗೆ ಹಸ್ತಾಂತರಿಸಿದರು, ಇದು ಮುಖ್ಯವಾಹಿನಿಯ ಸಮಾಜದಲ್ಲಿ ಏಕೀಕರಣದ ಕಡೆಗೆ ಬಂಡಾಯದಿಂದ ದೂರ ಸರಿಯುವುದನ್ನು ಸೂಚಿಸುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಾಜ್ಯ ಸರಕಾರದ ಪುನರ್ವಸತಿ ಪ್ರಯತ್ನಗಳ ಭಾಗವಾಗಿ, ಆರು ಮಂದಿಗೂ ತಲಾ 3 ಲಕ್ಷ ರೂ. ಮತ್ತು ಇತರ ಬೆಂಬಲಗಳನ್ನೂ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.