BJP ವಿರೋಧಿ ನಾಯಕರಿಂದ ಒಗ್ಗಟ್ಟು ಪ್ರದರ್ಶನ

ಲೋಕಸಭೆ ಚುನಾವಣೆ ಹೋರಾಟದ ಸಂದೇಶ ರವಾನೆ ಸಿದ್ದು-ಡಿಕೆಶಿ ಪ್ರಮಾಣಕ್ಕೆ ಸಾಕ್ಷಿಯಾದ ದಿಗ್ಗಜರು

Team Udayavani, May 21, 2023, 7:02 AM IST

KAR ANT

ಬೆಂಗಳೂರು: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಕಾರ್ಯಕ್ರಮದಲ್ಲಿ ಬಿಜೆಪಿಯೇತರ ವಿಪಕ್ಷಗಳ ಮುಖ್ಯಸ್ಥರು ಭಾಗಿಯಾಗಿ ಒಗ್ಗಟ್ಟು ಪ್ರದರ್ಶಿಸುವ ಮೂಲಕ ಮುಂದಿನ ಲೋಕಸಭೆ ಚುನಾವಣೆಗೆ ಜತೆಗೂಡಿ ಹೋರಾಡುವ ಸಂದೇಶ ರವಾನಿಸಿದರು.

ರಾಹುಲ್‌ಗಾಂಧಿ-ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌, ಬಿಹಾರ ಸಿಎಂ ನಿತೀಶ್‌ ಕುಮಾರ್‌, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌, ಎನ್‌ಸಿ ಮುಖ್ಯಸ್ಥ ಫಾರೂಕ್‌ ಅಬ್ದುಲ್ಲಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ, ಮಕ್ಕಳ ನಿಧಿ ಮೈಮ್‌ನ ಕಮಲಹಾಸನ್‌ ಸಹಿತ ವಿಪಕ್ಷಗಳ ನಾಯಕರು ಭಾಗಿಯಾಗಿದ್ದು ರಾಜಕೀಯ ಸಂದೇಶ ಕಳುಹಿಸಿದಂತಾಗಿದೆ.

ಇದೇ ಉದ್ದೇಶದಿಂದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್‌ ಸಮಾರಂಭ ಆಯೋಜಿಸಿದ್ದ ಕಾಂಗ್ರೆಸ್‌ ಎಲ್ಲ ನಾಯಕರನ್ನೂ ವೇದಿಕೆಯಲ್ಲಿ ಒಟ್ಟಿಗೆ ಸೇರಿಸಿ ಒಗ್ಗಟ್ಟು ಪ್ರದರ್ಶನ ಮಾಡಿಸುವಲ್ಲಿ ಯಶಸ್ವಿಯಾಯಿತು.

ದೇಶವ್ಯಾಪಿ ವಿಸ್ತರಣೆ
ಪ್ರಮಾಣ ವಚನದ ಅನಂತರ ಮಾತನಾಡಿದ ರಾಹುಲ್‌ಗಾಂಧಿ, ಕರ್ನಾಟಕದಲ್ಲಿ ಇಂದಿನಿಂದ ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದ್ದೇವೆ. ಇದು ದೇಶವ್ಯಾಪಿ ವಿಸ್ತರಿಸಲಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ನ ಗೆಲುವು ದೇಶದ ಬಡವರ ಗೆಲುವು. ಇದು ಮುಂದಿನ ಹೋರಾಟಕ್ಕೆ ಸ್ಫೂರ್ತಿ ತುಂಬಿದೆ ಎಂದು ತಿಳಿಸಿದರು.
ಕರ್ನಾಟಕದ ಬದಲಾವಣೆ ದೇಶದಲ್ಲೂ ವಿಸ್ತರಿಸಲಿದೆ. ಇಲ್ಲಿನ ಫ‌ಲಿತಾಂಶ ರಾಷ್ಟ್ರಕ್ಕೆ ಹೊಸ ಸಂದೇಶ ರವಾನಿಸಿದೆ. ಈ ಸಮಾರಂಭಕ್ಕೆ ದೇಶದ ಹಲವಾರು ವಿಪಕ್ಷ ನಾಯಕರು ಸಾಕ್ಷಿಯಾಗಿದ್ದು, ಹೋರಾಟ ಆರಂಭವಾಗಿದೆ ಎಂದು ಹೇಳಿದರು.

ಕಾಂಗ್ರೆಸ್‌ ಬಡವರು, ದೀನ ದಲಿತರು, ಯುವ ಸಮೂಹದ ಪರ ಸದಾ ಇರಲಿದೆ. ಭ್ರಷ್ಟಾಚಾರ ರಹಿತ, ದಕ್ಷ ಆಡಳಿತದ ವಾಗ್ಧಾನ ನಮ್ಮದು ಎಂದು ಪ್ರತಿಪಾದಿಸಿದರು. ರಾಜ್ಯದ ಜನತೆಗೆ ಮಾತು ಕೊಟ್ಟಂತೆ ನಾವು ನುಡಿದಂತೆ ನಡೆಯುತ್ತೇವೆ. ನಿಮ್ಮ ವಿಶ್ವಾಸ ಉಳಿಸಿಕೊಳ್ಳುತ್ತೇವೆ ಎಂದು ವಾಗ್ಧಾನ ನೀಡಿದರು.

ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವು ರಾಜ್ಯದ ಬಡವರು-ಮಧ್ಯಮ ವರ್ಗದವರು ಸೇರಿ ಕನ್ನಡಿಗರ ಗೆಲುವು. ಇದಕ್ಕಾಗಿ ನಾನು ನಾಡಿನ ಜನತೆಗೆ ಧನ್ಯವಾದ ಸಮರ್ಪಿಸುತ್ತೇನೆ. ನೀವು ಕೊಟ್ಟ ಪ್ರೀತಿ, ಶಕ್ತಿಯನ್ನು ನಾವು ಎಂದೂ ಮರೆಯುವುದಿಲ್ಲ. ಪೊಳ್ಳು ಭರವಸೆ ನೀಡಿಲ್ಲ, ಕೊಟ್ಟ ಭರವಸೆ ಈಡೇರಿಸಿಯೇ ತೀರುತ್ತೇವೆ. ನಾವು ಕೊಟ್ಟ ಮಾತಿನಂತೆ ಮೊದಲ ಸಂಪುಟದಲ್ಲೇ ತೀರ್ಮಾನ ಹೊರಬೀಳಲಿದೆ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಕರ್ನಾಟಕದ ಜನತೆ ರಾಜಕೀಯವಾಗಿ ಒಂದು ಸಂದೇಶ ರವಾನಿಸಿದ್ದು, ಇದು ಇಡೀ ದೇಶಕ್ಕೆ ತಲುಪಿದೆ ಎಂದು ಹೇಳಿದರು.
ರಾಜ್ಯದ ಜನತೆ ಕೊಟ್ಟ ಗೆಲುವಿಗೆ ನಾವು ಋಣಿಯಾಗಿರುತ್ತೇವೆ. ಭ್ರಷ್ಟಾಚಾರ ರಹಿತ, ದಕ್ಷ ಆಡಳಿತ ನೀಡುತ್ತೇವೆ. ಈ ಮೂಲಕ ದೇಶಕ್ಕೆ ಮಾದರಿಯಾಗುತ್ತೇವೆ ಎಂದು ತಿಳಿಸಿದರು.

ಹಾಜರಿದ್ದ ಗಣ್ಯರು
ಝಾರ್ಖಂಡ್‌ ಸಿಎಂ ಹೇಮಂತ್‌ ಸೊರೇನ್‌, ಛತ್ತೀಸ್‌ಗಢ ಸಿಎಂ ಭೂಪೇಶ್‌ ಬಗೇಲ್‌, ರಾಜಸ್ಥಾನ ಸಿಎಂ ಅಶೋಕ್‌ ಗೆಹೊÉàತ್‌, ಬಿಹಾರ ಡಿಸಿಎಂ ತೇಜಸ್ವಿ ಯಾದವ್‌, ಸಿಪಿಎಂ ಮುಖಂಡ ಸೀತಾರಾಂ ಯೆಚೂರಿ, ಸಿಪಿಐ ಮುಖಂಡ ಡಿ.ರಾಜಾ, ನಟ ಕಮಲಹಾಸನ್‌, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ, ಹಲವು ರಾಜ್ಯಗಳ ಪಿಸಿಸಿ ಅಧ್ಯಕ್ಷರು ಹಾಜರಿದ್ದರು.

ಟಾಪ್ ನ್ಯೂಸ್

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ

12

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

12

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

5

Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.