![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jun 29, 2022, 10:32 AM IST
ಚೆನ್ನೈ: ದಕ್ಷಿಣ ಭಾರತದ ಬಹುಭಾಷಾ ನಟಿ ಮೀನಾ ಪತಿ ವಿದ್ಯಾಸಾಗರ್ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ (ಜೂನ್ 29) ಬೆಳಗ್ಗೆ ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ:Update: ರಾಜಸ್ಥಾನ ಶಿರಚ್ಛೇದ ಪ್ರಕರಣ-ಕರ್ಫ್ಯೂ ಜಾರಿ, ಆರೋಪಿಗಳ ಬಂಧನ; ಎನ್ ಐಎ ತನಿಖೆ
ವರದಿಯ ಪ್ರಕಾರ, ವಿದ್ಯಾಸಾಗರ್ ಅವರು ಶ್ವಾಸಕೋಶದ ಸೋಂಕಿನಿಂದ ತೀವ್ರವಾಗಿ ಬಳಲುತ್ತಿದ್ದು, ಕಳೆದ ಕೆಲವು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಟಿ ಮೀನಾ ಮತ್ತು ಉದ್ಯಮಿ ವಿದ್ಯಾಸಾಗರ್ 2009ರಲ್ಲಿ ಬೆಂಗಳೂರಿನಲ್ಲಿ ವಿವಾಹವಾಗಿದ್ದರು.
ಮೀನಾ ಪತಿ ವಿದ್ಯಾಸಾಗರ್ ನಿಧನಕ್ಕೆ ಹಲವಾರು ನಟರು, ಸಿನಿಮಾರಂಗದ ಗೆಳೆಯರು, ಆಪ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಖುಷ್ಬು ಸುಂದರ್, ಲಕ್ಷ್ಮೀ ಮಂಜು, ಶರತ್ ಕುಮಾರ್ ಸೇರಿದಂತೆ ಹಲವು ನಟರು ಸಂತಾಪ ಸೂಚಿಸಿದ್ದಾರೆ.
ಮೀನಾ ಬಾಲ ನಟಿಯಾಗಿ ಬೆಳ್ಳಿ ಪರದೆ ಪ್ರವೇಶಿಸಿದ್ದರು. 1990ರ ದಶಕದಲ್ಲಿ ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ಜನಪ್ರಿಯ ನಟಿಯಾಗಿ ಖ್ಯಾತಿ ಪಡೆದಿದ್ದರು. ಇತ್ತೀಚೆಗಷ್ಟೇ ತೆರೆಕಂಡಿದ್ದ ಸನ್ ಆಫ್ ಇಂಡಿಯಾ ಸಿನಿಮಾದಲ್ಲಿ ಮೀನಾ ನಟಿಸಿದ್ದರು. ಈ ಮೊದಲು ದೃಶ್ಯಂ ಮತ್ತು ದೃಶ್ಯಂ 2 ಚಿತ್ರದಲ್ಲೂ ಅಭಿನಯಿಸಿದ್ದರು.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.