ಉತ್ತರ ಪ್ರದೇಶ: ಬಿಜೆಪಿ ಮತ್ತು ಎಸ್ ಪಿ ಕಾರ್ಯಕರ್ತರ ಮಾರಾಮಾರಿ
ರಾಜಕೀಯ ವಾದ ಘರ್ಷಣೆಯಾಗಿ ವಿಕೋಪಕ್ಕೆ
Team Udayavani, Mar 13, 2022, 7:17 PM IST
ಬದೌನ್: ಚುನಾವಣಾ ಫಲಿತಾಂಶ ಪ್ರಕಟವಾದ ಮೂರು ದಿನಗಳ ಬಳಿಕ ಸಮಾಜವಾದಿ ಪಕ್ಷ ಮತ್ತು ಬಿಜೆಪಿ ಬೆಂಬಲಿಗರ ನಡುವಿನ ರಾಜಕೀಯ ವಾದವು ಭಾನುವಾರ ಘರ್ಷಣೆಯಾಗಿ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟಕ್ಕೆ ಕಾರಣವಾಗಿದೆ.
ಆಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಕರಾಲಾ ಪ್ರದೇಶದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ 10 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಅವರಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಬೆಂಬಲಿಗರೊಂದಿಗೆ ರಾಜಕೀಯ ವಾದದಲ್ಲಿ ಭಾಗಿಯಾಗಿದ್ದು ಅದು ಹಿಂಸಾಚಾರಕ್ಕೆ ತಿರುಗಿ ಬೆಂಬಲಿಗರು ಪರಸ್ಪರ ಕಲ್ಲು ತೂರಾಟ ನಡೆಸಿದರು. ಪರಿಸ್ಥಿತಿ ಹತೋಟಿಗೆ ತರಲು ನಾಲ್ಕು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ಪೊಲೀಸ್ ತಂಡಗಳು ಅಲ್ಲಿಗೆ ತಲುಪುತ್ತಿದ್ದಂತೆ ಘರ್ಷಣೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಬಿಜೆಪಿಯ ಬೆಂಬಲಿಗ ಎನ್ನಲಾದ ರುಸ್ತಮ್ ಮತ್ತು ಸಮಾಜವಾದಿ ಪಕ್ಷದ ನಿಕಟವರ್ತಿ ಅಸ್ರಾರ್ ಎನ್ನುವವರೇ ಘರ್ಷಣೆಗೆ ಕಾರಣವಾಗಿದ್ದು, ಇಬ್ಬರೂ ಅಪರಾಧ ಹಿನ್ನೆಲೆಯನ್ನು ಹೊಂದಿದ್ದು, ಇನ್ನೂ ಬಂಧನಕ್ಕೊಳಗಾಗಿಲ್ಲ. ಪೊಲೀಸರು ಮೂವರು ಶಂಕಿತರನ್ನು ವಶಕ್ಕೆ ಪಡೆದಿದ್ದು, ಅವರನ್ನು ಆಲಾಪುರ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಚೌಹಾಣ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.