World Cup ಅರ್ಹತಾ ಕ್ರಿಕೆಟ್‌ ಪಂದ್ಯಾವಳಿ: ಒಮಾನ್‌ ಮೇಲೆ ಶ್ರೀಲಂಕಾ ಸವಾರಿ

Team Udayavani, Jun 24, 2023, 6:31 AM IST

HASARANGA SHREELANKA

ಬುಲವಾಯೊ: ವಿಶ್ವಕಪ್‌ ಅರ್ಹತಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಶ್ರೀಲಂಕಾ 10 ವಿಕೆಟ್‌ಗಳಿಂದ ಒಮಾನ್‌ಗೆ ಸೋಲುಣಿಸಿ ಅಜೇಯ ಓಟ ಕಾಯ್ದುಕೊಂಡಿದೆ.

ಶುಕ್ರವಾರದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಒಮಾನ್‌ 30.2 ಓವರ್‌ಗಳಲ್ಲಿ ಕೇವಲ 98 ರನ್ನಿಗೆ ಆಲೌಟ್‌ ಆಯಿತು. ಜವಾಬಿತ್ತ ಶ್ರೀಲಂಕಾ 15 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 100 ರನ್‌ ಬಾರಿಸಿತು. ಇದು ಲಂಕೆಗೆ ಒಲಿದ ಸತತ 2ನೇ ಜಯ. ಮೊದಲ ಪಂದ್ಯದಲ್ಲಿ ಅದು ಯುಎಇಯನ್ನು 175 ರನ್ನುಗಳಿಂದ ಕೆಡವಿತ್ತು. ದಸುನ್‌ ಶಣಕ ಪಡೆಯೀಗ 4.220 ರನ್‌ರೇಟ್‌ನೊಂದಿಗೆ “ಬಿ’ ವಿಭಾಗದ ಅಗ್ರಸ್ಥಾನಿಯಾಗಿದೆ.

ಇನ್ನೊಂದೆಡೆ ಒಮಾನ್‌ 3 ಪಂದ್ಯಗಳಲ್ಲಿ ಎರಡನ್ನು ಗೆದ್ದು 4 ಅಂಕ ಹೊಂದಿದೆ. ಆದರೆ ರನ್‌ರೇಟ್‌ನಲ್ಲಿ ಬಹಳ ಹಿಂದಿದೆ (-1.049). ಅದು ಮೊದಲೆರಡು ಪಂದ್ಯಗಳಲ್ಲಿ ಐರ್ಲೆಂಡ್‌ ಮತ್ತು ಯುಎಇಯನ್ನು 5 ವಿಕೆಟ್‌ಗಳಿಂದ ಸೋಲಿಸಿತ್ತು.

ಮತ್ತೆ ಹಸರಂಗ ದಾಳಿ
ವನಿಂದು ಹಸರಂಗ ಮತ್ತೂಮ್ಮೆ ಘಾತಕವಾಗಿ ಪರಿಣಮಿಸಿ 13 ರನ್ನಿಗೆ 5 ವಿಕೆಟ್‌ ಉಡಾಯಿಸಿದರು. ಯುಎಇ ವಿರುದ್ಧ ಅವರು 6 ವಿಕೆಟ್‌ ಕೆಡವಿ ಜೀವನಶ್ರೇಷ್ಠ ಬೌಲಿಂಗ್‌ ಪ್ರದರ್ಶಿಸಿದ್ದರು. ಲಹಿರು ಕುಮಾರ 3 ವಿಕೆಟ್‌ ಕಿತ್ತರು. ಒಮಾನ್‌ ಸರದಿಯಲ್ಲಿ ಅಯಾನ್‌ ಖಾನ್‌ 41, ಜತಿಂದರ್‌ ಸಿಂಗ್‌ 21 ರನ್‌ ಮಾಡಿದರು.
ಚೇಸಿಂಗ್‌ ವೇಳೆ ದಿಮುತ್‌ ಕರುಣಾರತ್ನೆ (ಅಜೇಯ 61) ಮತ್ತು ಪಥುಮ್‌ ನಿಸ್ಸಂಕ (ಅಜೇಯ 37) ಇಬ್ಬರೇ ಸೇರಿಕೊಂಡು ಲಂಕೆಯನ್ನು ಗುರಿ ಮುಟ್ಟಿಸಿದರು.

ಬೆರ್ರಿಂಗ್ಟನ್‌ ಶತಕ
ಬುಲವಾಯೊ: “ಬಿ’ ವಿಭಾಗದ ಇನ್ನೊಂದು ಪಂದ್ಯದಲ್ಲಿ ಸ್ಕಾಟ್ಲೆಂಡ್‌ 111 ರನ್ನುಗಳ ಬೃಹತ್‌ ಅಂತರದಿಂದ ಯುಎಇಯನ್ನು ಕೆಡವಿತು. ಮಧ್ಯಮ ಕ್ರಮಾಂಕದ ಆಟಗಾರ, ನಾಯಕ ರಿಚೀ ಬೆರ್ರಿಂಗ್ಟನ್‌ ಅವರ ಶತಕ ಸಾಹಸದಿಂದ ಸ್ಕಾಟ್ಲೆಂಡ್‌ 8 ವಿಕೆಟಿಗೆ 282 ರನ್‌ ರಾಶಿ ಹಾಕಿತು. ಯುಎಇ 35.3 ಓವರ್‌ಗಳಲ್ಲಿ 171ಕ್ಕೆ ಉರುಳಿತು.
ಇದರೊಂದಿಗೆ ಸ್ಕಾಟ್ಲೆಂಡ್‌ ಎರಡೂ ಪಂದ್ಯಗಳನ್ನು ಗೆದ್ದು “ಬಿ’ ವಿಭಾಗದ ದ್ವಿತೀಯ ಸ್ಥಾನಿಯಾಯಿತು. ಸ್ಕಾಟ್ಲೆಂಡ್‌ ಮೊದಲ ಮುಖಾಮುಖೀಯಲ್ಲಿ ಐರ್ಲೆಂಡ್‌ ಎದುರು ಒಂದು ವಿಕೆಟ್‌ ಅಂತರದ ರೋಚಕ ಗೆಲುವು ಸಾಧಿಸಿತ್ತು. ರನ್‌ರೇಟ್‌ನಲ್ಲಿ ಮುಂದಿರುವ ಶ್ರೀಲಂಕಾ ಅಗ್ರಸ್ಥಾನದಲ್ಲಿದೆ. ಮೂರೂ ಪಂದ್ಯಗಳನ್ನು ಸೋತ ಯುಎಇ ಕೂಟದಿಂದ ಹೊರಬಿತ್ತು.

ಟಾಪ್ ನ್ಯೂಸ್

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.