ಜೂನ್. 21 ರಿಂದ ಜುಲೈ. 5ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಸಚಿವ ಸುರೇಶ್ ಕುಮಾರ್
Team Udayavani, Mar 1, 2021, 7:00 PM IST
ಧಾರವಾಡ : 2020-21 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಸ್‌ಎಲ್ ಪರೀಕ್ಷೆ ಜೂ.21 ರಿಂದ ಜು.5 ವರೆಗೂ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ್ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿತ್ತು. ಇದೀಗ ಜೂ.21ರಿಂದ ಅಧಿಕೃತವಾಗಿ ಪರೀಕ್ಷೆ ಆರಂಭಗೊಳ್ಳಲಿವೆ. ಪ್ರತಿಯೊಂದು ವಿಷಯದ ಪರೀಕ್ಷೆ ಮುಗಿದ ನಂತರ ಸೂಕ್ತ ಅಂತರವಿಟ್ಟು ಪರೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಜೂನ್ 21- ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ,
ಜೂ. 24 -ಗಣಿತ, ಜೂ. 28 -ವಿಜ್ಞಾನ, ಜೂ. 30-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಜು. 2 – ದ್ವಿತೀಯ ಭಾಷೆ ಇಂಗ್ಲಿಷ್/ ಕನ್ನಡ, ಜು.5 – ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದರು.
ಇದನ್ನೂ ಓದಿ:ಆಧುನಿಕ ಶೈಲಿಯ ಆಹಾರ ಪದಾರ್ಥ; ಸ್ಥೂಲಕಾಯ ನಿವಾರಣೆಗೆ ಸರಳ ಮನೆಮದ್ದು
ಮಕ್ಕಳ ಮಾನಸಿಕ ಒತ್ತಡವನ್ನು ಹೆಚ್ಚಿಸದಂತೆ ಮತ್ತು ಆತಂಕಗೊಳ್ಳದಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಹೊಣೆ ಸರ್ಕಾರ ಮತ್ತು ಅಧಿಕಾರಿಗಳ ಮೇಲಿದೆ. ಜೊತೆಗೆ ಕೋವಿಡ್-19 ನಿಂದಾಗಿ ಕಲಿಕೆಯಲ್ಲಿ ಉಳಿಕೆಯಾಯಿತು ಎನ್ನುವ ಭಾವ ಮಕ್ಕಳಲ್ಲಿ ಬರದಂತೆ ಅವರಿಗೆ ವಿಷಯವನ್ನು ಬೋಧಿಸಲಾಗುವುದು ಎಂದು ಸಚಿವ ಸುರೇಶಕುಮಾರ್ ಹೇಳಿದರು.
ಕಳೆದ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡದೇ ಇರುವ ಜಿಲ್ಲೆಗಳಿಗೆ ಒತ್ತು ಕೊಟ್ಟು ಈ ಬಾರಿ ಸುಧಾರಿಸಲು ಎಲ್ಲಾ ಶಾಲಾ ಮುಖ್ಯೋಪಾಧ್ಯಯರಿಗೆ ತರಬೇತಿ ನೀಡಲಾಗುವುದು. ಅಷ್ಟೇಯಲ್ಲ ಉತ್ತಮ ಫಲಿತಾಂಶ ದಾಖಲಿಸಿರುವ ಜಿಲ್ಲೆಗಳಲ್ಲಿನ ಉತ್ತಮ ಅಂಶಗಳನ್ನು ಹೆಕ್ಕಿ ತೆಗೆದು ಅದನ್ನು ಇತರ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು. ಇನ್ನು ಅಧಿಕಾರಿಗಳೇ ನೇರವಾಗಿ ಕೆಲವಷ್ಟು ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಪಡೆಸಬೇಕು. ಈ ಸಂಬಂಧ ನಾನು ಏಪ್ರಿಲ್ 2 ರಿಂದ ರಾಜ್ಯಾಧ್ಯಂತ ಪ್ರವಾಸ ಆರಂಭಿಸುತ್ತೇನೆ ಎಂದು ಸಚಿವ ಸುರೇಶಕುಮಾರ್ ಹೇಳಿದರು.
ಮಾ.1 ರಿಂದ ಆರಂಭಗೊಳ್ಳಬೇಕಿದ್ದ ಕಿರಿಯ ಪ್ರಾಥಮಿಕ ಶಾಲೆಗಳನ್ನು ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇನ್ನು ಒಂದು ವಾರ ಕಾದು ನೋಡಿ ಆರಂಭಿಸಲಾಗುವುದು. ಕೇಂದ್ರದ ಒಪ್ಪಿಗೆ ಸಿಕ್ಕ ನಂತರ ಮಧ್ಯಾಹ್ನದ ಬಿಸಿಯೂಟ ಆರಂಭಿಸಲಾಗುವುದು.
-ಸುರೇಶಕುಮಾರ್,ಪ್ರಾಥಮಿಕ ಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.