ಕೋವಿಡ್ ವಾರ್ ರೂಂಗೆ ಸಚಿವರಾದ ಎಸ್.ಟಿ. ಸೋಮಶೇಖರ್, ಅಶೋಕ್ ದಿಡೀರ್ ಭೇಟಿ

ಬಿಬಿಎಂಪಿ ಸಿಬ್ಬಂದಿ ಕಾರ್ಯವೈಖರಿ ಪರಿವೀಕ್ಷಣೆ

Team Udayavani, May 9, 2021, 8:50 PM IST

ಕೋವಿಡ್ ವಾರ್ ರೂಂಗೆ ಸಚಿವರಾದ ಎಸ್.ಟಿ. ಸೋಮಶೇಖರ್, ಅಶೋಕ್ ದಿಡೀರ್ ಭೇಟಿ

ಬೆಂಗಳೂರು: ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳಗೊಳ್ಳುತ್ತಿರುವುದರ ಜೊತೆಗೆ ಬಿಬಿಎಂಪಿ ಕಾರ್ಯನಿರ್ವಹಣೆ ಬಗ್ಗೆ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಹಾಗೂ ಕಂದಾಯ ಸಚಿವರಾದ ಆರ್.ಅಶೋಕ್ ಅವರು, ರಾಜರಾಜೇಶ್ವರಿ ನಗರ ವಲಯದ ಕೋವಿಡ್ ವಾರ್ ರೂಂಗೆ ದಿಡೀರ್ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು.

ಯಾವುದೇ ಕಾರಣಕ್ಕೂ ನಾಗರಿಕರಿಗೆ ಸಮಸ್ಯೆಯಾಗಕೂಡದು. ಅವರು ಸಹಾಯಕ್ಕಾಗಿ ಕರೆ ಮಾಡಿದಾಗ ಸಮಾಧಾನವಾಗಿ ಸ್ಪಂದಿಸಿ, ಬೆಡ್ ವ್ಯವಸ್ಥೆ ಬೇಕಿರುವವರಿಗೆ ತಕ್ಷಣ ಅವಕಾಶ ಮಾಡಿಕೊಡಿ ಎಂದು ಸಚಿವದ್ವಯರು ವಾರ್ ರೂಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಸೂಚಿಸಿದರು.

ಬೆಡ್ ಬುಕ್ಕಿಂಗ್ ದಂಧೆಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡಬೇಡಿ. ಅಗತ್ಯ ಇರುವವರಿಗೆ ಬೆಡ್ ಸಿಗುವಂತೆ ಮಾಡಿ, ಒಂದು ವೇಳೆ ನಿಮ್ಮನ್ನು ಈ ದಂಧೆಗಾಗಿ ಯಾರಾದರೂ ಸಂಪರ್ಕಿಸಿದರೆ ನಮ್ಮ ಗಮನಕ್ಕೆ ತನ್ನಿ ಎಂದು ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಆರ್.ಅಶೋಕ್ ಅವರುಗಳು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಸೂಚಿಸಿದರು.

ಇದನ್ನೂ ಓದಿ :250 ಯೂನಿಟ್ ಗಳ ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕ್ ಗೆ ಚಾಲನೆ ನೀಡಿದ ಸಂಸದ ತೇಜಸ್ವೀ ಸೂರ್ಯ

ಹೋಂ ಐಸೋಲೇಶನ್ ನಲ್ಲಿದ್ದವರಿಗೆ ಮೆಡಿಕಲ್ ಕಿಟ್
ರಾಜರಾಜೇಶ್ವರಿ ನಗರ ವಲಯದ ವಲಯ ಆಯುಕ್ತರು ರೆಡ್ಡಿ ಶಂಕರ ಬಾಬು, ದಕ್ಷಿಣ ಉಪವಿಭಾಗಾಧಿಕಾರಿ ಶಿವಣ್ಣ ಸೇರಿ ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವದ್ವಯರಾದ ಎಸ್.ಟಿ.ಸೋಮಶೇಖರ್ ಹಾಗೂ ಆರ್.ಅಶೋಕ್ ಅವರು, ಕೊರೋನಾ ಸೋಂಕು ದೃಢಪಟ್ಟು ಹೋಂ ಐಸೋಲೇಶನ್ ನಲ್ಲಿರುವ ರಾಜರಾಜೇಶ್ವರಿ ವಲಯ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವ್ಯಾಪ್ತಿಯ ಎಲ್ಲರ ಮನೆಗಳಿಗೂ ಮೆಡಿಕಲ್ ಕಿಟ್ ಅನ್ನು ಕೊಡಬೇಕು. ಕೂಡಲೇ ಮೆಡಿಕಲ್ ಕಿಟ್ ತಯಾರಿಸಿ ತುರ್ತಾಗಿ ಕೊಡಲು ಸೂಚಿಸಿದರು.

ನೂತನ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ
ಚೆನ್ನೇನಹಳ್ಳಿಯಲ್ಲಿ ನೂತನ ಪ್ರಾರಂಭವಾಗಿರುವ ಜನಸೇವಾ ಕೇಂದ್ರದ ಕೋವಿಡ್ ಕೇರ್ ಸೆಂಟರ್ ಗೆ ಕಂದಾಯ ಸಚಿವರಾದ ಅಶೋಕ್ ಹಾಗೂ ಸಹಕಾರ ಸಚಿವರಾದ ಸೋಮಶೇಖರ್ ಅವರು ಭೇಟಿ ನೀಡಿ, ವ್ಯವಸ್ಥೆಯನ್ನು ಪರಿಶೀಲಿಸಿದರು. ಅಲ್ಲದೆ, ಸರ್ಕಾರದಿಂದ ಬೇಕಾದ ಎಲ್ಲ ಸೌಲಭ್ಯ ಹಾಗೂ ಸಹಕಾರವನ್ನು ಒದಗಿಸುವ ಭರವಸೆಯನ್ನೂ ಈ ಸಂದರ್ಭದಲ್ಲಿ ನೀಡಲಾಯಿತು. ಈ ವೇಳೆ ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್ ಇದ್ದರು.

ಚಿತಾಗಾರಕ್ಕೆ ಭೇಟಿ
ತಾವರೇಕೆರೆ ಚಿತಾಗಾರದಲ್ಲಿ ಶವಗಳ ಸಂಖ್ಯೆ ಹೆಚ್ಚಳಗೊಂಡು ಒತ್ತಡ ಆಗುತ್ತಿರವ ಕಾರಣ, ಬೆಂಗಳೂರು ಉತ್ತರ ತಾಲೂಕಿನ ಗಿಡೇನಹಳ್ಳಿ ಚಿತಾಗಾರಕ್ಕೆ ಸಚಿವರಾದ ಸೋಮಶೇಖರ್ ಹಾಗೂ ಅಶೋಕ್ ಅವರು ಭೇಟಿ ನೀಡಿ, ಹೆಚ್ಚಿನ ಜಾಗ, ಸೌಲಭ್ಯಗಳನ್ನು ಒದಗಿಸಲು ಸ್ಥಳ ವೀಕ್ಷಣೆ ಮಾಡಿದರು.

ತಲಾ 1 ಲಕ್ಷ ರೂ. ವೈಯುಕ್ತಿಕ ಸಹಾಯಧನ ವಿತರಣೆ

ಕೋವಿಡ್ ನಿಂದ ಮೃತಪಟ್ಟ ಯಶವಂತಪುರ ಮತಕ್ಷೇತ್ರದ ನಾಗರಿಕರಿಗೆ ಸಹಾಯಧನ ನೀಡುವ ಪ್ರಕ್ರಿಯೆಗೆ ಶನಿವಾರವಷ್ಟೇ ಚಾಲನೆ ನೀಡಿರುವ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು, ಭಾನುವಾರ ಕೆಂಗೇರಿ ಹೋಬಳಿ ರಾಮೋಹಳ್ಳಿ ಗ್ರಾಮ ಪಂಚಾಯಿತಿ ಮತ್ತು ತಾವರೆಕೆರೆ ಹೋಬಳಿ ಚುಂಚನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರಿಗೆ ತಲಾ 1 ಲಕ್ಷ ರೂಪಾಯಿ ವೈಯಕ್ತಿಕ ಸಹಯಾಧನ ವಿತರಣೆ ಮಾಡಿದರು.

ಟಾಪ್ ನ್ಯೂಸ್

liqer-wine

Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

52528

Delhi: ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

liqer-wine

Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

robin

EPF ನಿಧಿ ವಂಚನೆ: ರಾಬಿನ್‌ ಉತಪ್ಪ ವಿರುದ್ದದ ವಾರಂಟ್‌ಗೆ ಹೈಕೋರ್ಟ್‌ ತಡೆ

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8(1

Mangaluru: ನೊಂದವರ ಹಸಿವು ತಣಿಸುವ ಸೇವೆ

7

Belman ಪೇಟೆಯಲ್ಲಿ ಬಾಯ್ದೆರೆದ ಚರಂಡಿಗಳು!

liqer-wine

Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

6

Karkala ಪೇಟೆ ಸುತ್ತಮುತ್ತ ಬೀದಿನಾಯಿಗಳ ಹಾವಳಿ

5

Kundapura: ಜೀವರಕ್ಷಣೆಗೆ ಊರ ಜನರ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.