ರಾಜ್ಯಕ್ಕೆ ಡಬಲ್‌ ಎಂಜಿನ್‌ ಸರಕಾರ ಅಗತ್ಯ: ಮೋದಿ

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದರೆ ಕರ್ನಾಟಕ ದೇಶದ ನಂಬರ್‌ ಒನ್‌ ರಾಜ್ಯವಾಗಲು ಸಾಧ್ಯ

Team Udayavani, Apr 30, 2023, 6:49 AM IST

MODI IMP

ಬೀದರ್‌: ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಬಿಜೆಪಿಯ ಡಬಲ್‌ ಎಂಜಿನ್‌ ಸರಕಾರ ಅಗತ್ಯ ಮತ್ತು ಅನಿವಾರ್ಯವಾಗಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದರೆ ಕರ್ನಾಟಕ ದೇಶದ ನಂಬರ್‌ ಒನ್‌ ರಾಜ್ಯ ಆಗಲು ಸಾಧ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಹುಮನಾಬಾದ್‌ ತಾಲೂಕಿನ ಚಿನಕೇರಾ ಕ್ರಾಸ್‌ ಬಳಿ ಶನಿವಾರ ಆಯೋಜಿಸಿದ್ದ ಬಿಜೆಪಿಯ ಬೃಹತ್‌ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಬಲ್‌ ಎಂಜಿನ್‌ ಆಡಳಿತದಿಂದ ಪ್ರಗತಿಯ ವೇಗ ಹೆಚ್ಚುತ್ತದೆ. ಬಿಜೆಪಿ ಸರಕಾರದಿಂದ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಇದು ನಿಲ್ಲಬಾರದು. ಅದಕ್ಕಾಗಿ ಕರುನಾಡಿನ ಜನ ಬಿಜೆಪಿಗೆ ಪೂರ್ಣ ಬಹುಮತದ ಅ ಧಿಕಾರ ನೀಡಬೇಕು ಎಂದರು.

ಬಿಜೆಪಿ ಸರಕಾರದ ಆಡಳಿತದಿಂದಾಗಿ ರಾಜ್ಯದಲ್ಲಿ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಸಾಕಷ್ಟು ಪ್ರಗತಿಯಾಗಿದೆ. ಈ ಹಿಂದೆ ಪ್ರತಿ ವರ್ಷ 30 ಸಾವಿರ ಕೋಟಿ ರೂ. ಬರುತ್ತಿದ್ದ ಬಂಡವಾಳ ಈಗ 90 ಸಾವಿರ ಕೋಟಿ ರೂ.ಆಗಿದೆ. ಇದು ಕಾಂಗ್ರೆಸ್‌ ಸರಕಾರದ ಅವ ಧಿಗಿಂತ ಮೂರು ಪಟ್ಟು ಹೆಚ್ಚಾಗಿದೆ. ಕೋವಿಡ್‌ ಸಂಕಷ್ಟ, ಯುದ್ಧಗಳ ನಡುವೆಯೂ ಸಾಧನೆ ಆಗಿದೆ ಎಂದು ತಿಳಿಸಿದರು.

ಬಿಜೆಪಿ ಸರಕಾರ ಬಂದ ಮೇಲೆ ಲಕ್ಷಾಂತರ ರೈತರು ಕಿಸಾನ್‌ ಸಮ್ಮಾನ್‌ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರದ 6 ಸಾವಿರ ರೂ.ಗಳ ಜತೆಗೆ ರಾಜ್ಯ ಸರಕಾರ 4 ಸಾವಿರ ರೂ. ಪ್ರೋತ್ಸಾಹಧನ ನೀಡುತ್ತಿರುವುದು ಖುಷಿಯ ಸಂಗತಿ. ಡಬಲ್‌ ಎಂಜಿನ್‌ ಸರಕಾರದಿಂದಾಗಿ ರಾಜ್ಯದಲ್ಲಿ ಇಂದು ಆಶ್ರಯ ಮನೆಗಳ ನಿರ್ಮಾಣದ ವೇಗವೂ ಹೆಚ್ಚಾಗಿದೆ. ಕುಡಿಯುವ ನೀರಿಗಾಗಿ ಮಹಿಳೆಯರು ಪಡುತ್ತಿದ್ದ ಕಷ್ಟಕ್ಕೆ ಇಂದು “ಹರ್‌ ಘರ್‌ ನಳ್‌’ ಕಾರ್ಯಕ್ರಮದಿಂದ ಮುಕ್ತಿ ಸಿಕ್ಕಿದೆ. ಕರ್ನಾಟಕದ 40 ಲಕ್ಷ ಒಳಗೊಂಡು ದೇಶದ 9 ಕೋಟಿ ಕುಟುಂಬಗಳಿಗೆ ಇಂದು ನಳ್ಳಿ ಮೂಲಕ ನೀರು ಸಿಗುವಂತಾಗಿದೆ ಎಂದರು.

ಮೋದಿ ಅವರನ್ನು ಪಕ್ಷದ ಜಿಲ್ಲಾ ಘಟಕದ ವತಿಯಿಂದ ಕಮಲದ ಹೂವುಗಳ ಹಾರ ಹಾಕಿ, ಬಿದ್ರಿ ಕಲೆಯ ಬಸವಣ್ಣನ ಭಾವಚಿತ್ರವನ್ನು ನೀಡಿ ಸಮ್ಮಾನಿಸಲಾಯಿತು. ಬೃಹತ್‌ ಸಭೆಯಲ್ಲಿ ಒಂದೂವರೆ ಲಕ್ಷಕ್ಕೂ ಅಧಿ ಕ ಜನರು ಭಾಗವಹಿಸಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಭಗವಂತ ಖೂಬ, ರಾಜ್ಯ ಸಚಿವ ಪ್ರಭು ಚೌವ್ಹಾಣ್‌, ವಿಧಾನಪರಿಷತ್‌ ಸದಸ್ಯ ರಘುನಾಥ ರಾವ್‌ ಮಲ್ಕಾಪುರೆ, ಬಿಜೆಪಿ ರಾಜ್ಯ ಕಾರ್ಯದರ್ಶಿ ಎನ್‌. ರವಿಕುಮಾರ್‌, ಪಕ್ಷದ ಅಭ್ಯರ್ಥಿಗಳಾದ ಶರಣು ಸಲಗರ, ಸಿದ್ದು ಪಾಟೀಲ್‌, ಈಶ್ವರ ಸಿಂಗ್‌ ಠಾಕೂರ್‌, ಡಾ| ಶೈಲೇಂದ್ರ ಬೆಲ್ದಾಳೆ ಮತ್ತು ಪ್ರಕಾಶ ಖಂಡ್ರೆ ಭಾಗವಹಿಸಿದ್ದರು.

ಶಿವಾಜಿ ಪ್ರತಿಮೆ ವಿವಾದ ಪ್ರಸ್ತಾವಿಸಿದ ಮೋದಿ
ಕುಡುಚಿ: ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ರಾಜಹಂಸಗಡ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಪ್ರತಿಮೆ ನಿರ್ಮಾಣ ವಿವಾದ ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೂ ತಲುಪಿದ್ದು, ಕುಡಚಿಯಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮೋದಿ ಈ ವಿಷಯವನ್ನು ಪ್ರಸ್ತಾವಿಸಿದರು. ರಾಜಹಂಸಗಡದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಪ್ರತಿಮೆ ನಿರ್ಮಾಣಕ್ಕೆ ನಮಗೆ ಅವಕಾಶ ಸಿಕ್ಕಿದ್ದು ಹೆಮ್ಮೆಯ ವಿಷಯ ಎಂದು ಮೋದಿ ಹೇಳಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಟಾಳ್ಕರ್‌ ಅವರು ಪ್ರತಿಷ್ಠೆಯ ವಿಷಯವಾಗಿ ತೆಗೆದುಕೊಂಡು ಎರಡೆರಡು ಬಾರಿ ಉದ್ಘಾಟಿಸಿದ್ದ ಈ ಪ್ರತಿಮೆಯ ವಿಷಯವನ್ನು ಮೋದಿ ಚುನಾವಣ ಪ್ರಚಾರದಲ್ಲಿ ಬಳಸಿಕೊಂಡರು.

ಸಮಾಜ ವಿಭಜನೆ-ತುಷ್ಟೀಕರಣ
ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್‌ ಕೇವಲ ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆದಾಳುವ ಕೆಲಸ ಮಾಡಿದ್ದು, ಆಡಳಿತದ ಹೆಸರಿನಲ್ಲಿ ತುಷ್ಟೀಕರಣ ಮಾಡುತ್ತಾ ಬಂದಿದೆ. ಇದಕ್ಕೆ ದಶಕಗಳಿಂದ ಕಲಾ ಸೇವೆ ಮಾಡುತ್ತಿದ್ದ ಬೀದರ್‌ನ ಬಿದ್ರಿ ಕಲಾವಿದ ರಶೀದ್‌ ಅಹ್ಮದ್‌ ಖಾದ್ರಿ ಉದಾಹರಣೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.ಬಿಜೆಪಿ ಸರಕಾರ ಇತ್ತೀಚೆಗೆ ಅವರನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಿದೆ. ಆದರೆ ಕಾಂಗ್ರೆಸ್‌ ಸರಕಾರ ಅವರಿಗೆ ನಿರಾಶೆ ಮಾಡುತ್ತ ಬಂದಿತ್ತು. ಬೀದರ್‌ನ ಗೋರ್ಟಾ ಹತ್ಯಾಕಾಂಡದಲ್ಲಿ ಬಲಿದಾನಗೈದ ವೀರರನ್ನೂ ಮರೆತಿತ್ತು. ಅಲ್ಲಿನ ಹುತಾತ್ಮರ ಸ್ಮಾರಕದ ಕಲ್ಲಿನ ಮೇಲಿನ ಧೂಳನ್ನು ಒರೆಸಿದ್ದ ಬಿಜೆಪಿ, ಈಗ ಭವ್ಯ ಸ್ಮಾರಕವನ್ನು ನಿರ್ಮಾಣ ಮಾಡಿದೆ ಎಂದರು.

ಪ್ರತಿ ಮನೆಗೂ ನನ್ನ ನಮಸ್ಕಾರ ತಿಳಿಸಿ
ಮತದಾನಕ್ಕೂ ಮೊದಲು ಎಲ್ಲ ಮತದಾರರು ನಾನು ಹೇಳಿದ ಕೆಲಸ ಮಾಡಬೇಕು. ನನ್ನ ಹೃದಯದ ಹಾಗೂ ಭಾವನೆಯ ಕೆಲಸವನ್ನು ನಿಮಗೆ ಒಪ್ಪಿಸುತ್ತೇನೆ. ಕರ್ನಾಟಕದ ಸಹೋದರ-ಸಹೋದರಿಯರು ಮೇ 10ಕ್ಕೂ ಮೊದಲು ಪ್ರತಿಯೊಬ್ಬ ಮತದಾರರ ಬಳಿ ಹೋಗಬೇಕು. ಕುಡುಚಿಗೆ ದಿಲ್ಲಿಯಿಂದ ನಿಮ್ಮ ಸೇವಕ ಮೋದಿ ಬಂದಿದ್ದರು. ನಿಮಗೆ ನಮಸ್ಕಾರ ಹೇಳಿದ್ದಾರೆ ಅಂತ ತಿಳಿಸಬೇಕು. ನಮಸ್ಕಾರವನ್ನು ಮನೆ ಮನೆಗೆ ತಲುಪಿಸಿದರೆ ಕೆಲಸ ಮಾಡಲು ನನಗೆ ಮತ್ತಷ್ಟು ಶಕ್ತಿ ಸಿಗುತ್ತದೆ ಎಂದು ಹೇಳುವ ಮೂಲಕ ಮೋದಿ ಭಾವನಾತ್ಮಕವಾಗಿ ಜನರನ್ನು ಸೆಳೆದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.