Stock Market: ಷೇರುಪೇಟೆ ಸಂವೇದಿ ಸೂಚ್ಯಂಕ ಜಿಗಿತ; ನಿಫ್ಟಿ ಸಾರ್ವಕಾಲಿಕ ದಾಖಲೆ ಏರಿಕೆ
ಧನಾತ್ಮಕ ಪರಿಣಾಮ ಬೀರಿರುವುದಾಗಿ ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
Team Udayavani, Aug 30, 2024, 2:38 PM IST
ಮುಂಬೈ: ಸತತ ಐದು ದಿನಗಳಿಂದ ಏರುಗತಿಯಲ್ಲಿ ಬಾಂಬೆ ಷೇರುಪೇಟೆ ವಹಿವಾಟು ನಡೆಯುತ್ತಿದ್ದು, ಶುಕ್ರವಾರವೂ(ಆ.30) ಷೇರುಪೇಟೆ ಸಂವೇದಿ ಸೂಚ್ಯಂಕ 300.87 ಅಂಕಗಳಷ್ಟು ಏರಿಕೆಯೊಂದಿಗೆ ವಹಿವಾಟು ಮುಂದುವರಿದಿದೆ.
ಷೇರುಪೇಟೆ ಸಂವೇದಿ ಸೂಚ್ಯಂಕ ಮಧ್ಯಾಹ್ನ 326.23 ಅಂಕಗಳಷ್ಟು ಏರಿಕೆಯೊಂದಿಗೆ 82,470.82 ಅಂಕಗಳ ಮಟ್ಟದಲ್ಲಿ ವಹಿವಾಟು ನಡೆದಿದೆ. ಅದೇ ರೀತಿ ನಿಫ್ಟಿ 85.80 ಅಂಕ ಜಿಗಿತದೊಂದಿಗೆ 25.237.80 ಅಂಕಗಳ ಗಡಿಯಲ್ಲಿದೆ.
ಬಿಎಸ್ ಇ, ನಿಫ್ಟಿ ಏರಿಕೆಯಿಂದ ಪವರ್ ಗ್ರಿಡ್ ಕಾರ್ಪ್, ಭಾರ್ತಿ ಏರ್ ಟೆಲ್, ಮಹೀಂದ್ರ & ಮಹೀಂದ್ರ, ಬಜಾಜ್ ಫೈನಾನ್ಸ್, ಸನ್ ಫಾರ್ಮಾ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಟಾಟಾ ಮೋಟಾರ್ಸ್, ರಿಲಯನ್ಸ್ ಇಂಡಸ್ಟ್ರಿಸ್, ಐಟಿಸಿ, ವಿಪ್ರೋ ಮತ್ತು ಮಾರುತಿ ಸುಝುಕಿ ಷೇರು ನಷ್ಟ ಕಂಡಿದೆ.
ನಿಫ್ಟಿ 25,237 ಅಂಕಗಳ ಗಡಿ ದಾಟುವ ಮೂಲಕ ಸಾರ್ವಕಾಲಿಕ ಗರಿಷ್ಠ ಮಟ್ಟ ದಾಟಿದೆ. ಜಿಡಿಪಿ(GDP) ಮೊದಲ ತ್ರೈಮಾಸಿಕದ ಅಂಕಿ ಅಂಶ ಇಂದು ಸಂಜೆ ಬಿಡುಗಡೆಯಾಗಲಿದ್ದು, ಈ ನಿಟ್ಟಿನಲ್ಲಿ ಷೇರುಪೇಟೆ ವಹಿವಾಟು ನಿರೀಕ್ಷೆಯೊಂದಿಗೆ ಧನಾತ್ಮಕ ಪರಿಣಾಮ ಬೀರಿರುವುದಾಗಿ ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.