ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 477 ಅಂಕ ಏರಿಕೆ, 17ಸಾವಿರ ಗಡಿದಾಟಿದ ನಿಫ್ಟಿ
ನಿಫ್ಟಿ 147.20 ಅಂಕಗಳಷ್ಟು ಏರಿಕೆಯೊಂದಿಗೆ 17,233.45 ಅಂಕಗಳ ಮಟ್ಟದಲ್ಲಿ ವಹಿವಾಟು ಅಂತ್ಯಗೊಂಡಿದೆ.
Team Udayavani, Dec 28, 2021, 4:43 PM IST
ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಪಾಸಿಟಿವ್ ಟ್ರೆಂಡ್ ಹಿನ್ನೆಲೆಯಲ್ಲಿ ಮಂಗಳವಾರ (ಡಿಸೆಂಬರ್ 28) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 477 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:ಕೋವಿಡ್ ಎಫೆಕ್ಟ್: ದೆಹಲಿಯಲ್ಲಿ ಯೆಲ್ಲೋ ಅಲರ್ಟ್-ಸಿನಿಮಾ ಥಿಯೇಟರ್, ಮಲ್ಟಿಫ್ಲೆಕ್ಸ್ ಬಂದ್
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 477.24 ಅಂಕ ಏರಿಕೆಯಾಗಿದ್ದು, 57,897.48 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 147.20 ಅಂಕಗಳಷ್ಟು ಏರಿಕೆಯೊಂದಿಗೆ 17,233.45 ಅಂಕಗಳ ಮಟ್ಟದಲ್ಲಿ ವಹಿವಾಟು ಅಂತ್ಯಗೊಂಡಿದೆ.
ಏಷ್ಯನ್ ಪೇಂಟ್ಸ್, ಸನ್ ಫಾರ್ಮಾ, ಮಹೀಂದ್ರ ಆ್ಯಂಡ್ ಮಹೀಂದ್ರ, ಎನ್ ಟಿಪಿಸಿ, ಆಲ್ಟ್ರಾ ಟೆಕ್ ಸಿಮೆಂಟ್, ಟೈಟಾನ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಇಂಡಸ್ ಇಂಡ್ ಬ್ಯಾಂಕ್, ಪವರ್ ಗ್ರಿಡ್ ಷೇರುಗಳು ನಷ್ಟ ಕಂಡಿದೆ.
ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 320.31 ಅಂಕಗಳಷ್ಟು ಏರಿಕೆಯೊಂದಿಗೆ 57,740.55 ಅಂಕಗಳಲ್ಲಿ ವಹಿವಾಟು ನಡೆಸಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 94.70 ಅಂಕಗಳಷ್ಟು ಏರಿಕೆಯಾಗಿದ್ದು, 17,180.95 ಅಂಕಗಳ ಮಟ್ಟ ತಲುಪಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.