ತೀವ್ರಗೊಳ್ಳಲಿದೆ “ಮೋಚಾ” ಚಂಡಮಾರುತ
Team Udayavani, May 7, 2023, 7:14 AM IST
ಹೊಸದಿಲ್ಲಿ: ಬಂಗಾಲ ಕೊಲ್ಲಿಯ ಆಗ್ನೇಯ ಭಾಗ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಧಾನವಾಗಿ ಮೋಚಾ ಚಂಡಮಾರುತ ರೂಪುಗೊಳ್ಳುತ್ತಿದೆ. ಮೇ 8ರಂದು ಅದು ಆರಂಭವಾಗಲಿದ್ದು, ಮೇ 9ರ ಅನಂತರ ತೀವ್ರತೆ ಪಡೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.
ಆಗ್ನೇಯ ಬಂಗಾಲ ಕೊಲ್ಲಿಯಲ್ಲಿ ಮೇ 9ರ ವೇಳೆಗೆ ಮೋಚಾ ಚಂಡಮಾರುತ ತೀವ್ರತೆ ಪಡೆಯಲಿದೆ. ರವಿವಾರದ ಅನಂತರ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಚಂಡಮಾರುತ ಕೇಂದ್ರ ಬಂಗಾಲ ಕೊಲ್ಲಿಯ ಉತ್ತರ ದಿಕ್ಕಿಗೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಪ್ರಧಾನ ನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ ತಿಳಿಸಿದ್ದಾರೆ.
ಒಡಿಶಾ ಕರಾವಳಿ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮೀನುಗಾರಿಕೆಯಲ್ಲಿ ತೊಡಗದಂತೆ ಮೀನುಗಾರರಿಗೆ ಎಚ್ಚರಿಕೆ ರವಾನಿಸಲಾಗಿದೆ. ಮೇ 8ರಿಂದ 12ರ ವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಪ್ರವಾಸೋದ್ಯಮ ಮತ್ತು ಕಡಲ ಚಟುವಟಿಕೆಗಳು ಹಾಗೂ ಹಡಗುಗಳ ಸಂಚಾರವನ್ನು ನಿಯಂತ್ರಿಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.