Heavy Rains: ಹಿಮಾಚಲ, ದೆಹಲಿ ಬಳಿಕ ಮುಂಬೈನಲ್ಲಿ ಮೇಘಸ್ಫೋಟ
ದಕ್ಷಿಣ ಗುಜರಾತ್ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ
Team Udayavani, Jul 19, 2023, 1:50 PM IST
ಗುಜರಾತ್/ಮಹಾರಾಷ್ಟ್ರ: ದೆಹಲಿ, ಹಿಮಾಚಲ ಪ್ರದೇಶ, ಉತ್ತರಾಖಂಡ್ ನಲ್ಲಿ ಧಾರಾಕಾರ ಮಳೆ, ಪ್ರವಾಹ ಮುಂದುವರಿದಿರುವ ನಡುವೆಯೇ ಇದೀಗ ಗುಜರಾತ್ ಮತ್ತು ಮುಂಬೈ ವರ್ಷಧಾರೆಗೆ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Free tomatoes: ಇವರ ಆಟೋದಲ್ಲಿ ಪ್ರಯಾಣಿಸಿದರೆ ಟೊಮ್ಯಾಟೋ ಫ್ರೀ.. ಕಂಡಿಷನ್ ಅಪ್ಲೈ
ಗುಜರಾತ್ ರಾಜ್ಯದಲ್ಲಿ ಕಳೆದ ಕೆಲವು ಗಂಟೆಗಳಲ್ಲಿ ಸುರಿದ ಧಾರಾಕಾರ (300 ಮಿಲಿ ಮೀಟರ್) ಮಳೆಗೆ ರಾಜ್ ಕೋಟ್, ಸೂರತ್ ಮತ್ತು ಗಿರ್ ಸೋಮನಾಥ್ ಜಿಲ್ಲೆಗಳು ಜಲಾವೃತಗೊಂಡಿದ್ದು, ನೂರಾರು ಕಾರುಗಳು ನೀರಿನಲ್ಲಿ ತೇಲುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ರಾಜ್ ಕೋಟ್, ಸೂರತ್, ಗಿರ್ ಸೋಮನಾಥ್ ಜಿಲ್ಲೆಗಳಲ್ಲಿ ಜಲಾವೃತಗೊಂಡ ಪ್ರದೇಶದಲ್ಲಿ ಕಾರುಗಳು ನೀರಿನಲ್ಲಿ ತೇಲುತ್ತಿದ್ದು, ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
#WATCH | Gujarat | Severe waterlogging in Dhoraji city of Rajkot district due to incessant rainfall. (18.07)
Around 300 mm of rainfall has been recorded in the last few hours. 70 people have been shifted to safer places. pic.twitter.com/oaf5Z03q5R
— ANI (@ANI) July 18, 2023
ಮುಂದಿನ ಕೆಲವು ದಿನಗಳ ಕಾಲ ಸೌರಾಷ್ಟ್ರದ ಕೆಲವು ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಗುಜರಾತ್ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಂಗಳವಾರ (ಜು.18) ಬೆಳಗ್ಗೆ 6ಗಂಟೆಯಿಂದ ಕೇವಲ 14 ಗಂಟೆಗಳ ಅವಧಿಯಲ್ಲಿ ಗಿರ್ ಸೋಮನಾಥ್ ಜಿಲ್ಲೆಯ ಸೂತ್ರಪಾಡಾ ತಾಲೂಕಿನಲ್ಲಿ 345 ಮಿಲಿ ಮೀಟರ್ ದಾಖಲೆಯ ಮಳೆಯಾಗಿದೆ. ರಾಜ್ ಕೋಟ್ ಜಿಲ್ಲೆಯ ಧೋರಾಜಿ ತಾಲೂಕಿನಲ್ಲಿ 250 ಮಿಲಿ ಮೀಟರ್ ಮಳೆಯಾಗಿರುವುದಾಗಿ ವರದಿ ತಿಳಿಸಿದೆ.
ಮುಂಬೈನಲ್ಲೂ ಭಾರೀ ಮಳೆ:
ಕಳೆದ 24 ಗಂಟೆಯಲ್ಲಿ ಸುರಿದ ಭಾರೀ ಮಳೆಗೆ ವಾಣಿಜ್ಯ ನಗರಿ ಮುಂಬೈ ತತ್ತರಿಸಿ ಹೋಗಿದೆ. 24ಗಂಟೆಯಲ್ಲಿ 100 ಮಿಲಿ ಮೀಟರ್ ಮಳೆಯಾಗಿದ್ದು, ಮುಂಬೈ ಮತ್ತು ಥಾಣೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ರಾಯ್ ಗಢ್, ಪುಣೆ ಮತ್ತು ಪಾಲ್ಘಾಟ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಾಖಲೆಯ ಮಳೆ, ಗಾಳಿಗೆ 26 ಮರದ ಕೊಂಬೆಗಳು ಮುರಿದು ಬಿದ್ದಿದ್ದು, ನಾಲ್ಕು ಆವರಣದ ಗೋಡೆಗಳು ಕುಸಿದು ಬಿದ್ದಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.