ಭ್ರೂಣ ಪತ್ತೆ ಮಾಡುವವರ ವಿರುದ್ಧ ಕಠಿಣ ಕ್ರಮ: ಸಚಿವ ಡಾ.ಕೆ.ಸುಧಾಕರ್ ವಾರ್ನಿಂಗ್
Team Udayavani, Jan 24, 2022, 1:48 PM IST
ಬೆಂಗಳೂರು: ಭ್ರೂಣ ಪತ್ತೆಗೆ ರಾಜ್ಯದಲ್ಲಿ ಅವಕಾಶವಿಲ್ಲ, ಭ್ರೂಣ ಪತ್ತೆ ಮಾಡುವ ತಜ್ಞರು, ತಾಂತ್ರಿಕ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಮತ್ತು ಪರವಾನಗಿಯನ್ನು ರದ್ದು ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೋಮವಾರ ಹೇಳಿದ್ದಾರೆ.
ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಹಿನ್ನೆಲೆಯಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಹಿಳೆಯರಿಗೆ ಸಮಾನತೆ ನೀಡುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯವಾಗಿದೆ. ಭ್ರೂಣ ಹತ್ಯೆ ವಿರುದ್ಧ ಜಾಗೃತಿ ಹಾಗೂ ಲಿಂಗ ಸಮಾನತೆ ತರಲು ಪ್ರಯತ್ನಿಸಬೇಕಿದೆ. ಕೆಲ ವರ್ಷಗಳಿಂದ ಲಿಂಗಾನುಪಾತವೂ ಹೆಚ್ಚಾಗಿದೆ. 2001 ರಲ್ಲಿ 946 ಇದ್ದ ಲಿಂಗಾನುಪಾತ, 2018 ರಲ್ಲಿ 957 ಕ್ಕೇರಿದೆ. ಅಂದರೆ, ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚಾಗಿರುವುದು ಆಶಾದಾಯಕವಾಗಿದೆ. ಅವರ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ರಾಜ್ಯದಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ ನಲ್ಲಿ 100% ಹಾಗೂ ಎರಡನೇ ಡೋಸ್ ನಲ್ಲಿ 85.3% ಪ್ರಗತಿಯಾಗಿದೆ. 15-17 ವರ್ಷದ ಮಕ್ಕಳಲ್ಲಿ ಶೇ.67.5% ಮೊದಲ ಡೋಸ್ ಆಗಿದೆ. 4,85,818 ಬೂಸ್ಟರ್ ಡೋಸ್ ನೀಡಲಾಗಿದೆ. ಒಟ್ಟು 9,33,92,626 ಡೋಸ್ ಗಳನ್ನು ಈವರೆಗೆ ನೀಡಲಾಗಿದೆ. ಲಸಿಕಾಕರಣದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು, ಉತ್ತಮ ಪ್ರಗತಿ ಇದೆ ಎಂದು ತಿಳಿಸಿದರು.
ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಏರುತ್ತಿದೆ. ಮತ್ತೆ ಎರಡು ಮೂರು ವಾರಗಳಲ್ಲಿ ಕಡಿಮೆಯಾಗಲಿದೆ. ಆಸ್ಪತ್ರೆ ದಾಖಲಾತಿಗೆ ಹೆಚ್ಚು ಗಮನ ನೀಡಲಾಗಿದೆ. ಹೆಚ್ಚು ಆಸ್ಪತ್ರೆ ದಾಖಲಾತಿ ಕಂಡುಬರುವಲ್ಲಿ ಕ್ರಮ ವಹಿಸಲಾಗುತ್ತದೆ. ಆದರೆ ಅಂತಹ ಪರಿಸ್ಥಿತಿ ಇನ್ನೂ ಬಂದಿಲ್ಲ. ಕಳೆದ ಮೂರು ದಿನದಲ್ಲಿ ರೋಗ ಲಕ್ಷಣ ಇಲ್ಲದವರಿಗೆ ಪರೀಕ್ಷೆ ಮಾಡುವ ಅವಶ್ಯಕತೆಯೂ ಇಲ್ಲ ಎಂದು ಐಸಿಎಂಆರ್ ಹೇಳಿದೆ. ಅದರನ್ವಯ ಕ್ರಮ ವಹಿಸಲಾಗುತ್ತಿದೆ ಎಂದರು.
ಜನವರಿಯಲ್ಲಿ 32 ಲಕ್ಷ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಯಾವ ರಾಜ್ಯವೂ ಇಷ್ಟು ಅಧಿಕ ಸಂಖ್ಯೆಯಲ್ಲಿ ಪರೀಕ್ಷೆ ಮಾಡಿಲ್ಲ. ಒಟ್ಟು 6 ಕೋಟಿ ಪರೀಕ್ಷೆಗಳನ್ನು ಮಾಡಿದ್ದು, ಇದು ಬೇರೆ ರಾಜ್ಯಗಳಿಗೆ ಮಾದರಿಯಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.