ವಿದ್ಯಾರ್ಥಿಗಳ ಮನಸ್ಸಲ್ಲಿ ಮತೀಯ ಭಾವನೆಗಳು ತುಂಬಬಾರದು:ಆರಗ ಜ್ಞಾನೇಂದ್ರ
ಹೀಗೆ ಮಾಡಿದರೆ ಕಾಂಗ್ರೆಸ್ ಪಕ್ಷವನ್ನ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ..
Team Udayavani, Feb 9, 2022, 11:25 AM IST
ಬೆಂಗಳೂರು: ವಿದ್ಯಾರ್ಥಿಗಳ ಮನಸ್ಸಲ್ಲಿ ಮತೀಯ ಭಾವನೆಗಳು ತುಂಬಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬುಧವಾರ ಹೇಳಿಕೆ ನೀಡಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯ ಅಹಿತಕರ ಘಟನೆಯ ಕುರಿತು ಸಿಎಂಗೆ ಸ್ಪಷ್ಟ ಮಾಹಿತಿ ನೀಡಿದ್ದೇವೆ. ನಾನು, ಪೊಲೀಸ್ ಅಧಿಕಾರಿಗಳು ಸೇರಿ ನಿನ್ನೆ ಮಾಹಿತಿ ನೀಡಿದ್ದೇವೆ. ಅಂತಹ ಘಟನೆಗಳನ್ನು ಕಂಟ್ರೋಲ್ ಮಾಡುವುದಕ್ಕೆ ರಜೆ ಸಹ ಘೋಷಣೆ ಮಾಡಿದ್ದೇವೆ ಎಂದರು.
ಪ್ರಕರಣ ಕೋರ್ಟ್ ನಲ್ಲಿ ಇದೆ. ಘಟನೆ ಹಿಂದೆ ಯಾರಿದ್ದಾರೆ ಅನ್ನೋದನ್ನ ತನಿಖೆ ಆಗುತ್ತಿದೆ. ಈ ಆಟವನ್ನ ನಿಲಿಸುತ್ತೇವೆ. ನಿನ್ನೆ ಪೊಲೀಸರು ಬಹಳ ಸಂಯಮದಿಂದ ವರ್ತಿಸಿದ್ದಾರೆ. ದೇಶ ಒಡೆಯುವ ಕೆಲಸ ಆಗಬಾರದು.ಸ್ವಾತಂತ್ರ ಪೂರ್ವ ಘಟನೆ ಮರುಕಳಿಸಬಾರದು. ಆಟದ ಹಿಂದೆ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಇವೆ ಎಂದರು.
ಇದನ್ನೂ ಓದಿ :ರಾಷ್ಟ್ರಧ್ವಜ ಇಳಿಸಿಲ್ಲ,ಗೊಂದಲ ಮೂಡಿಸಬೇಡಿ: ಸಚಿವ ಬಿ.ಸಿ.ನಾಗೇಶ್
ಡಿ.ಕೆ. ಶಿವಕುಮಾರ್ ಮಾಹಿತಿ ಇಲ್ಲದೇ,ಬೇಜವಾಬ್ದಾರಿಯಿಂದ ಮಾತನಾಡಿದ್ದಾರೆ, ಕಾಲೇಜು ಆವರಣದಲ್ಲಿ ಧ್ವಜ ಹಾರುತ್ತಿರಲಿಲ್ಲ.ಅದು ಪುರಸಭೆ,ಕೋರ್ಟ್ ಮತ್ತು ವಿಧಾನ ಸೌಧದಲ್ಲಿ ಮಾತ್ರ ರಾಷ್ಟ್ರಧ್ವಜ ಹಾರುತ್ತದೆ. ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡ್ತಿದ್ದಾರೆ ಎಂದರು.
ಘಟನೆ ಹಿಂದೆ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳಿವೆ. ನಿನ್ನೆ ಘಟನೆಯ ಕುರಿತು ತನಿಖೆ ಆಗುತ್ತಿದೆ. 144 ಅವಶ್ಯಕತೆ ಇರುವ ಕಡೆ ಹಾಕಿದ್ದೇವೆ. ಕಾಂಗ್ರೆಸ್ ಪಕ್ಷ ದೇಶದಲ್ಲಿ ಬೆಂಕಿ ಹಚ್ಚಲು ಹೋಗಿ ಕಳೆದು ಹೋಗುತ್ತಿದೆ. ರಾಜ್ಯದಲ್ಲಿ ವಿಪಕ್ಷ ಸ್ಥಾನ ಮಾತ್ರ ಇದೆ, ಹೀಗೆ ಮಾಡಿದರೆ ಇವರ ಪಕ್ಷವನ್ನ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.