ಸುಬ್ರಹ್ಮಣ್ಯ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು
Team Udayavani, Jun 3, 2023, 5:34 AM IST
ಸುಬ್ರಹ್ಮಣ್ಯ: ಅನಾರೋಗ್ಯದಿಂದ ಹಠಾತ್ ಕುಸಿದು ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ, ರೆಂಜಿಲಾಡಿ ಗ್ರಾಮದ ನಿಡೆ¾àರು ರವೀಂದ್ರ ಅವರ ಪುತ್ರಿ ರಶ್ಮಿತಾ ಎನ್. (19) ಮೃತಪಟ್ಟ ಘಟನೆ ರೆಂಜಿಲಾಡಿಯಲ್ಲಿ ಸಂಭವಿಸಿದೆ.
ರಶ್ಮಿತಾ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ನರ್ಸಿಂಗ್ ಓದುತ್ತಿದ್ದು, ಕೆಲವು ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ವೈದ್ಯಕೀಯ ಪರೀಕ್ಷೆ ವೇಳೆ ಯಾವುದೇ ಸಮಸ್ಯೆ ಕಂಡುಬಂದಿರಲಿಲ್ಲ ಎನ್ನಲಾಗಿದೆ. ಆದರೆ ಜೂ.1ರ ರಾತ್ರಿ ಮನೆಯಲ್ಲಿ ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ನೆಟ್ಟಣ: ನಿರ್ಮಾಣ ಹಂತದ ಮನೆಯಿಂದ ಬಿದ್ದು ಯುವಕ ಸಾವು
ಕಡಬ: ನಿರ್ಮಾಣ ಹಂತದ ಮನೆಯ ಮೇಲ್ಛಾವಣಿ ಯಿಂದ ಬಿದ್ದು ಕಾರ್ಮಿಕ ನೋರ್ವ ಮೃತಪಟ್ಟ ಘಟನೆ ಬಿಳಿನೆಲೆ ಗ್ರಾಮದ ನೆಟ್ಟಣದಲ್ಲಿ ಶುಕ್ರವಾರ ಸಂಭವಿಸಿದೆ.
ಆಲಂಕಾರು ಗ್ರಾಮದ ಶರವೂರು ನಗ್ರಿ ನಿವಾಸಿ ಪದ್ಮನಾಭ ಅವರ ಪುತ್ರ ಹರಿಪ್ರಸಾದ್ (28) ಮೃತಪಟ್ಟವರು. ನೆಟ್ಟಣದ ಮೇರೊಂಜಿ ಎಂಬಲ್ಲಿ ಮನೆಯ ಮೇಲ್ಛಾವಣಿಯ ಕೆಲಸದಲ್ಲಿ ನಿರತರಾಗಿದ್ದಾಗ ಆಯತಪ್ಪಿ ಕೆಳಗೆ ಬಿದ್ದ ಹರಿಪ್ರಸಾದ್ ಅವರ ತಲೆಗೆ ಗಂಭೀರ ಗಾಯ ವಾಗಿತ್ತು. ಕೂಡಲೇ ಅವರನ್ನು ನೆಟ್ಟಣದ ಪ್ರಕಾಶ್ ಅವರ ಜೀಪಿನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆ ವೇಳೆಗಾಗಲೇ ಅವರ ಮೃತಪಟ್ಟಿದ್ದರು.
ಪದ್ಮನಾಭ ಅವರ ಏಕೈಕ ಪುತ್ರರಾಗಿದ್ದ ಹರಿಪ್ರಸಾದ್ ದುಡಿಮೆಯೇ ಮನೆಗೆ ಆಧಾರವಾಗಿತ್ತು. ಅವರಿಗೆ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದು, ತಂದೆ, ಪತ್ನಿ, ಸಹೋದರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.