ಸುಬ್ರಹ್ಮಣ್ಯ: ಗುಡುಗು ಸಹಿತ ಗಾಳಿಮಳೆಗೆ ಅಪಾರ ಹಾನಿ
Team Udayavani, Apr 16, 2021, 4:00 AM IST
ಸುಬ್ರಹ್ಮಣ್ಯ: ಕಡಬ ತಾಲೂಕಿ ನಾದ್ಯಂತ ಬುಧವಾರ ಸಂಜೆಯ ಗುಡುಗು ಸಹಿತ ಬಾರೀ ಗಾಳಿ ಮಳೆಗೆ ಮನೆ, ವಿದ್ಯುತ್ ಕಂಬ, ಕೃಷಿಗೆ ಹಾನಿಯಾಗಿದ್ದು, ಘಟನ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿದರು.
ಸುಬ್ರಹ್ಮಣ್ಯ ಹಾಗೂ ಪಂಜ ಪರಿಸರದಲ್ಲಿ ಗಾಳಿ ಮಳೆಗೆ ಅಪಾರ ಹಾನಿ ಉಂಟಾಗಿದೆ. ಐನೆಕಿದು ಗ್ರಾಮದ ಕೋಟೆ ವಿಜಯ ಎಂಬವರ ಮನೆ ಮೇಲೆ ಮರ ಬಿದ್ದು ಹಾನಿಯುಂಟಾಗಿದೆ. ಏನೆಕಲ್ಲು ಗ್ರಾಮದಲ್ಲಿ ಅಂಗಡಿ ಶೀಟು ಗಾಳಿಗೆ ಹಾರಿ ಹೋಗಿವೆ. ಗ್ರಾ.ಪಂ. ಸಂಜೀವಿನಿ ಕಟ್ಟಡದ ಎದುರಿನ ತಾತ್ಕಾಲಿಕ ತರಕಾರಿ ಅಂಗಡಿ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ.
ಪಂಜದ ಕೃಷ್ಣನಗರ ಕೂತ್ಕುಂಜ ಗ್ರಾಮದ ದಾಮೋದರ ಬೆಳ್ಚಪಾಡ ಎಂಬವರ ಮನೆ ಮೇಲೆ ಹಲಸಿನ ಮರದ ರೆಂಬೆ ಬಿದ್ದು ಮನೆ ಜಖಂಗೊಂಡಿದೆ. ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ. ಪಂಬೆತ್ತಾಡಿ ಗ್ರಾಮದ ಚಿದಾನಂದ ಅವರ ಮನೆ ಮೇಲೆ ರಬ್ಬರ್ ಮರಗಳು ಬಿದ್ದು ಹಾನಿಯಾಗಿದೆ. ಪಂಜ ದೇವಸ್ಥಾನದ ಗರಡಿಬೈಲು ನಾಗನಕಟ್ಟೆಗೆ ಮರ ಬಿದ್ದಿದೆ.
ಪರಿಶೀಲನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ತಂಡ ಹಲವೆಡೆ ಮರಗಳನ್ನು ತೆರವುಗೊಳಿಸಲು ಸಹಕರಿಸಿತು. ಪಂಬೆತ್ತಾಡಿ ಗ್ರಾ.ಪಂ. ಉಪಾಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ, ರಜೀತಾ ಭಟ್ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯರ ಸಹಕಾರದೊಂದಿಗೆ ಮರಗಳ ತೆರವಿಗೆ ನೆರವಾದರು. ವಿದ್ಯುತ್ ಕಂಬಗಳಿಗೆ ಹಾನಿಯಾದಲ್ಲಿ ಮೆಸ್ಕಾಂ ಲೈನ್‌ಮೆನ್, ಸಿಬಂದಿ ಅವಿರತ ಶ್ರಮದಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜನ ಪ್ರತಿನಿಧಿಗಳು, ಗ್ರಾ.ಪಂ. ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಕಂದಾಯ ಇಲಾಖೆಯವರು ಹಾನಿಯ ಲೆಕ್ಕ ಹಾಕುತ್ತಿದ್ದಾರೆ.
ರೆಂಜಿಲಾಡಿಯಲ್ಲಿ ತುಂಡಾದ ವಿದ್ಯುತ್ ಕಂಬಗಳು
ರೆಂಜಿಲಾಡಿ ಗ್ರಾಮದ ಸಾಕೋಟೆ ಜಾಲು ತಲೆಕ್ಕಿ ಎಂಬಲ್ಲಿ ಮರಗಳು ಬಿದ್ದು ನಾಲ್ಕು ವಿದ್ಯುತ್ ಕಂಗಳು ತುಂಡಾಗಿದ್ದು ವಿದ್ಯುತ್ ಸಂಪರ್ಕ ಕಡಿಗೊಂಡಿತ್ತು. ಸ್ಥಳೀಯರ ಸಹಕಾರದಿಂದ ಮರ ತೆರವು ಗೊಳಿಸಲಾಗಿದೆ. ವಿದ್ಯುತ್ ಲೈನ್ ದುರಸ್ತಿಗೆ ಮೆಸ್ಕಾಂ ಇಲಾಖೆ ಸಿಬಂದಿ ಶ್ರಮಿಸಿದರು. ಕಲ್ಲುಗುಡ್ಡೆ ಸಂಪರ್ಕದ ವಿದ್ಯುತ್ ಲೈನ್ ಮೇಲೆ ಕಡಬ ಭಾಗದ ಹಲವೆಡೆ ಮರಗಳು ಬಿದ್ದು ಹಾನಿ ಸಂಭವಿಸಿದೆ. ಗುರುವಾರ ಸಂಜೆವರೆಗೂ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Bantwal: ಬಿ.ಸಿ.ರೋಡ್‌ನ ರೈಲ್ವೇ ಇಲಾಖೆಯ ಜಾಗದಲ್ಲಿ ಕೊಳೆತ ತ್ಯಾಜ್ಯ
Puttur: ಸಂಚಾರ ದಟ್ಟಣೆ ತಡೆಗೆ ಮಾಸ್ಟರ್ ಪ್ಲ್ಯಾನ್
Bettampady: ಶಾಲಾ ಮಕ್ಕಳಿಂದ ಮನೆಯಲ್ಲಿ ಭತ್ತದ ಕೃಷಿ ಅಭಿಯಾನ ಯಶಸ್ವಿ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.