ಸುದೀಪ್ ರೋಡ್ ಶೋಗೆ ಅಡ್ಡಿ
Team Udayavani, May 5, 2023, 7:39 AM IST
ಸಿಂಧನೂರು: ತಾಲೂಕಿನ ತುರುವಿಹಾಳ ಪಟ್ಟಣದಲ್ಲಿ ಗುರುವಾರ ಸಂಜೆ 4.30ರ ಬಳಿಕ ನಡೆಸಲು ಮುಂದಾಗಿದ್ದ ಚಿತ್ರನಟ ಸುದೀಪ್ ರೋಡ್ ಶೋ ಅರ್ಧಕ್ಕೆ ಮೊಟಕುಗೊಳಿಸಲಾಯಿತು.
ಭಾರೀ ಸಂಖ್ಯೆಯಲ್ಲಿ ಸೇರಿದ್ದ ಜನರನ್ನು ನಿಯಂತ್ರಿಸಲು ಪೊಲೀಸ್ ವ್ಯವಸ್ಥೆ ಇಲ್ಲದಿದ್ದರಿಂದ ಸಮಸ್ಯೆ ಉಂಟಾಯಿತು. ನಗರದ ಸರ್ಕ್ನೂಟ್ ಹೌಸ್‌ನಲ್ಲಿ ಹೆಲಿಪ್ಯಾಡ್‌ನಿಂದ ಕಾರಿನ ಮೂಲಕ ಪ್ರಯಾಣ ಬೆಳೆಸಿದ ಸುದೀಪ್ ಸಕಾಲಕ್ಕೆ ತುರುವಿಹಾಳ ತಲುಪಿದರು. ಅವರಿಗಾಗಿ ಸಿದ್ಧವಾಗಿದ್ದ ವಾಹನ ಏರಿ ರೋಡ್ ಶೋಗೆ ಮುಂದಾದರು. ಈ ವೇಳೆ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ರೋಡ್ ಶೋಗೆ ಏರಿದ ವಾಹವನ್ನು ಮುತ್ತಿಗೆ ಹಾಕಿ, ಅದನ್ನು ಮುಂದಕ್ಕೆ ಬಿಡದ ರೀತಿಯಲ್ಲಿ ಗದ್ದಲ ಎಬ್ಬಿಸಿದ್ದರಿಂದ ಸುದೀಪ್ ಅಲ್ಲಿಂದ ಕೆಳಗಿಳಿದರು. ಈ ನಡುವೆ ಸರ್ಕ್ನೂಟ್ ಹೌಸ್‌ನ ಹೆಲಿಪ್ಯಾಡ್‌ಗೆ ಸುದೀಪ್ ಬರುತ್ತಾರೆಂಬ ಮಾಹಿತಿ ಆಧರಿಸಿ ಭಾರೀ ಸಂಖ್ಯೆಯಲ್ಲಿ ಜನ ನೆರೆದಿದ್ದರು. ಜನರತ್ತ ಕೈ ಬೀಸಿ ಸುದೀಪ್ ಪ್ರಯಾಣ ಬೆಳೆಸಿದರು.
ಜೆಡಿಎಸ್ ಬ್ಯಾನರ್ ಹರಿದ ಬಿಜೆಪಿ ಕಾರ್ಯಕರ್ತರು
ದೇವದುರ್ಗ: ನಟ ಸುದೀಪ್ ರೋಡ್ ಶೋ ವೇಳೆ ಜೆಡಿಎಸ್ ಪ್ರಚಾರ ವಾಹನ ತೆರಳುತ್ತಿದ್ದ ಸಂದರ್ಭ ಬಿಜೆಪಿ ಕಾರ್ಯಕರ್ತರು ಬ್ಯಾನರ್ ಹರಿದು ಮೈಕಿಗೆ ಕಲ್ಲೆಸೆದು, ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಗುರುವಾರ ಪಟ್ಟಣದಲ್ಲಿ ನಡೆದಿದೆ.
ಈ ಕುರಿತು ಜೆಡಿಎಸ್ ಪಕ್ಷದ ಕಾರ್ಯದರ್ಶಿ ಶಾಲಂ ಉದ್ದಾರ ನೀಡಿದ ದೂರಿನ ಹಿನ್ನೆಲೆ ಪ್ರಕರಣ ದಾಖಲಾಗಿದೆ. ಸುದೀಪ್ ರೋಡ್ ಶೋ ವೇಳೆ ಜಮಾಯಿಸಿದ ನೂರಾರು ಕಾರ್ಯಕರ್ತರು ಬ್ಯಾನರ್ ಹರಿದವರ ಮಾಹಿತಿ ಕಲೆ ಹಾಕಲು ಜೆಪಿ ವೃತ್ತದಲ್ಲಿರುವ ಸಿಸಿ ಕೆಮರಾ ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಎಸೆದ ಕಲ್ಲಿನಿಂದ ಪ್ರಚಾರದ ವಾಹನದಲ್ಲಿದ್ದ ಮೈಕ್ ಜಖಂಗೊಂಡಿದೆ. ಸೋಲಿನ ಭೀತಿಯಿಂದ ಬಿಜೆಪಿ ಶಾಸಕರು ಕಾರ್ಯಕರ್ತರನ್ನು ಬಿಟ್ಟು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಎರಡೂ¾ರು ಬಾರಿ ಹಲ್ಲೆ ನಡೆಸಿದ್ದಾರೆ. ಜನರ ಆಶೀರ್ವಾದಿಂದ ಚುನಾವಣೆ ಎದುರಿಸುತ್ತಿದ್ದೇವೆ ಎಂದು ಜೆಡಿಎಸ್ ಅಭ್ಯರ್ಥಿ ಕರೆಮ್ಮ ಗೋಪಾಲಕೃಷ್ಣ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.