ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ
Team Udayavani, Apr 17, 2023, 6:37 AM IST
ಕಾನ್ಪುರ: ತನ್ನ ಪತ್ನಿಗೆ ಇನ್ನೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಇದೆ ಎಂದು ಫೇಸ್ಬುಕ್ ಲೈವ್ನಲ್ಲಿ ಶುಕ್ರವಾರ ಆರೋಪಿಸಿದ್ದ ವ್ಯಕ್ತಿಯೊಬ್ಬ, ಪತ್ನಿ ಮತ್ತು ಇಬ್ಬರು ಚಿಕ್ಕ ಮಕ್ಕಳನ್ನು ಹತ್ಯೆ ಮಾಡಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಮೃತ ಇಂದ್ರಪಾಲ್ ನಿಶಾದ್ ಗುಜರಾತ್ನ ಕೈಗಾರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ರಜೆ ಹಿನ್ನೆಲೆಯಲ್ಲಿ ಕಾನ್ಪುರಕ್ಕೆ ಆಗಮಿಸಿದ್ದ.
ಕಾನ್ಪುರದ ಮನೆಯಲ್ಲಿ ಪತ್ನಿ, ಇಬ್ಬರು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಶುಕ್ರವಾರ ಫೇಸ್ಬುಕ್ ಲೈವ್ಗೆ ಬಂದಿದ್ದ ನಿಶಾದ್, ತನ್ನ ಪತ್ನಿಗೆ ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿದ್ದ. ಶನಿವಾರ ಸಂಜೆ ಜಗಳ ನಡೆದು, ಪತ್ನಿ ಮತ್ತು ಮಕ್ಕಳನ್ನು ಥಳಿಸಿ, ತೀವ್ರವಾಗಿ ಹಲ್ಲೆ ನಡೆಸಿ, ಹತ್ಯೆ ಮಾಡಿದ್ದಾನೆ. ನಂತರ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.