Sullia: ಕಾಂಗ್ರೆಸ್ ಬಿಕ್ಕಟ್ಟು ವರದಿ ನೀಡಲು ಸೂಚನೆ
Team Udayavani, Apr 15, 2023, 6:52 AM IST
ಸುಳ್ಯ: ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಜಿ. ಹಾಗೂ ಟಿಕೆಟ್ ವಂಚಿತ ಎಚ್.ಎಂ. ನಂದಕುಮಾರ್ ಮಧ್ಯೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತುಕತೆ ನಡೆಸಿದ್ದು, ಕ್ಷೇತ್ರದ ಪಕ್ಷದಲ್ಲಿನ ಗೊಂದಲ ನಿವಾರಣೆಗೆ ಸಭೆ ನಡೆಸಿ ವರದಿ ನೀಡುವಂತೆ ಮಾಜಿ ಸಚಿವ ಬಿ. ರಮಾನಾಥ ರೈ ಅವರಿಗೆ ಸೂಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೃಷ್ಣಪ್ಪ ಜಿ. ಅವರಿಗೆ ಟಿಕೆಟ್ ಘೋಷಣೆಯಾದ ಮೇಲೆ ನಂದಕುಮಾರ್ ಅಭಿಮಾನಿಗಳು ಪಕ್ಷೇತರರಾಗಿ ಸ್ಪರ್ಧಿಸುವಂತೆ ಆಗ್ರಹಿಸಿದ್ದರು. ಪಕ್ಷದಲ್ಲಿನ ಈ ಭಿನ್ನಮತ ಚುನಾವಣೆಯಲ್ಲಿ ಹಿನ್ನಡೆ ಒದಗಿಸಬಹುದೆನ್ನಲಾಗಿತ್ತು. ಈ ಹಿನ್ನಲೆಯಲ್ಲಿ ಶುಕ್ರವಾರ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಧನಂಜಯ ಅಡ³ಂಗಾಯ, ಪ್ರಮುಖರಾದ ಎಂ. ವೆಂಕಪ್ಪ ಗೌಡ, ಭರತ್ ಮುಂಡೋಡಿ ಮತ್ತಿತರರ ಸಮ್ಮುಖದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ವಿವರಗಳನ್ನು ಪಡೆದ ಡಿ.ಕೆ. ಶಿವಕುಮಾರ್, ಮಾಜಿ ಸಚಿವ ಬಿ ರಮಾನಾಥ ರೈ ಅವರಿಗೆ ದೂರವಾಣಿ ಕರೆ ಮಾಡಿ ಸುಳ್ಯದ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವೆ. ಅಲ್ಲಿಯವರೆಗೆ ಬಿ. ಫಾರಂ ವಿತರಿಸುವುದಿಲ್ಲ ಎಂದು ಹೇಳಿದ ಡಿಕೆ ಶಿವಕುಮಾರ್ ಹೇಳಿದ ಹಿನ್ನೆಲೆಯಲ್ಲಿ ನಂದಕುಮಾರ್ ಸಹ ಎ.15ರಂದು ಪಕ್ಷೇತರವಾಗಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Thalapathy69: ಕಾಲಿವುಡ್ ಸ್ಟಾರ್ ದಳಪತಿ ವಿಜಯ್ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟನೆ
Chennai; ಆಸ್ಪತ್ರೆಯಲ್ಲಿ ವೈದ್ಯರಿಗೆ ಮನಬಂದಂತೆ ಇರಿದ ರೋಗಿಯ ಪುತ್ರ!!
Mangaluru: ಬಸ್‌ಗಳ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಕಣ್ಮರೆ!
15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.