ಸುಳ್ಯ: ಸಾರ್ವಜನಿಕ ಸ್ಥಳದಲ್ಲಿ ಹಲ್ಲೆ- ವಿಡಿಯೋ ವೈರಲ್
Team Udayavani, Apr 28, 2023, 11:18 PM IST
ಸುಳ್ಯ: ಸುಳ್ಯದ ಸರಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಕೂಲಿ ಕಾರ್ಮಿಕರಿಬ್ಬರನ್ನು ವ್ಯಕ್ತಿಯೋರ್ವರು ಥಳಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ.
ವಿಡಿಯೋದಲ್ಲಿ ಸುಳ್ಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಮುಂಭಾಗದಲ್ಲಿರುವ ನಂದಿನಿ ಮಿಲ್ಕ್ ಸ್ಟೋರ್ ಬಳಿ ಇಬ್ಬರು ಕಾರ್ಮಿಕರು ಕುಳಿತಿದ್ದು ಓರ್ವ ವ್ಯಕ್ತಿ ಅಲ್ಲೆ ಪಕ್ಕದಲ್ಲಿರುವ ಬ್ಯಾಗ್ ಒಂದನ್ನು ತೋರಿಸಿ ಇದನ್ನು ಓಪನ್ ಮಾಡಿದವರು ಯಾರು ಎಂದು ಪ್ರಶ್ನಿಸಿ ಥಳಿಸುತ್ತಿರುವ ದೃಶ್ಯದಲ್ಲಿದೆ. ಕೆಲವು ಸಮಯದ ಬಳಿಕ ಓರ್ವ ಅಲ್ಲಿಂದ ತಪ್ಪಿಸಿದ್ದು, ಮತ್ತೋರ್ವ ವ್ಯಕ್ತಿಯನ್ನು ಥಳಿಸುತ್ತಿದ್ದ ವ್ಯಕ್ತಿ ಅಲ್ಲೇ ಕುಳ್ಳಿರಿಸಿ ತಮ್ಮ ಮೊಬೈಲ್ ಮೂಲಕ ಯಾರಿಗೋ ಮಾಹಿತಿ ನೀಡುವ ರೀತಿಯಲ್ಲಿ ಕಂಡು ಬರುತ್ತಿದೆ.
ಘಟನೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಮಿಕರ ಮೇಲೆ ವ್ಯಕ್ತಿಯೊಬ್ಬ ಅನಗತ್ಯವಾಗಿ ಹಲ್ಲೆ ಮಾಡಿದ್ದಾನೆ. ಕೂಲಿ ಕೆಲಸಕ್ಕಾಗಿ ದೂರ ಊರಿಂದ ಬಂದಿರುವ ಕಾರ್ಮಿಕರಿಗೆ ಈ ರೀತಿಯಾಗಿ ಹಲ್ಲೆ ಮಾಡಿದರುವುದು ಖಂಡನಿಯ. ಹಲ್ಲೆ ಮಾಡಿದ ವ್ಯಕ್ತಿಯ ಮೇಲೆ ಕಾನೂನು ಕ್ರಮ ಕೈಗೊಂಡು
ಕೂಲಿ ಕಾರ್ಮಿಕರಿಗೆ ಸೂಕ್ತ ರಕ್ಷಣೆ ನೀಡಲು ಈ ಮೂಲಕ ವಿನಂತಿ ಎಂದೂ ಹರಿದಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.