ಕನ್ನಡಿಗರ ಅಸ್ಮಿತೆ ಉಳಿವಿಗೆ JDS ಬೆಂಬಲಿಸಿ: ಎಚ್‌.ಡಿ. ದೇವೆಗೌಡ


Team Udayavani, May 5, 2023, 7:22 AM IST

devegouda

ಸಕಲೇಶಪುರ: ಕನ್ನಡಿಗರ ಅಸ್ಮಿತೆ ಉಳಿಯಬೇಕಾದಲ್ಲಿ ಜನ ಜೆಡಿಎಸ್‌ನಂತಹ ಪ್ರಾದೇಶಿಕ ಪಕ್ಷ ಬೆಂಬಲಿಸಬೇಕೆಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೆಗೌಡ ಹೇಳಿದರು.
ಜೆಡಿಎಸ್‌ ಅಭ್ಯರ್ಥಿ ಎಚ್‌.ಕೆ. ಕುಮಾರಸ್ವಾಮಿ ಪರ ಪಟ್ಟಣದ ಸಕಲೇಶ್ವರಸ್ವಾಮಿ ದೇಗುಲ ದಿಂದ ಹಳೇ ಬಸ್‌ ನಿಲ್ದಾಣದವರೆಗೆ ರೋಡ್‌ ಶೋ ನಡೆಸಿ ಮಾತನಾಡಿದ ಅವರು, ಪ್ರಾದೇಶಿಕ ಪಕ್ಷದ ಉಳಿವಿಗಾಗಿ ಈ ವಯಸ್ಸಿನಲ್ಲೂ ಚುನಾವಣ ಪ್ರಚಾರ ಮಾಡುತ್ತಿದ್ದೇನೆ. ರಾಜ್ಯದ ನೆಲ, ಜಲ ಸಂರಕ್ಷಣೆಗೆ ಪ್ರಾದೇಶಿಕ ಪಕ್ಷದ ಆವಶ್ಯಕತೆ ಇದೆ ಎಂದರು.
ರಾಜ್ಯದ ಜನರಿಗೆ ನೀರಿಲ್ಲದಿದ್ದರೂ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವ ಅನಿವಾರ್ಯತೆ ಸೃಷ್ಟಿಸಲಾಗಿದೆ. ಈ ಬಗ್ಗೆ ಲೋಕಸಭೆಯಲ್ಲಿ ಏಕಾಂಗಿ ಹೋರಾಟ ನಡೆಸಿದೆ. ಆದರೆ, ಬಿಜೆಪಿಯ 18 ಲೋಕಸಭಾ ಸದಸ್ಯರು ಕಾಂಗ್ರೆಸ್‌ನ ನಾಲ್ವರು ಸದಸ್ಯರಿದ್ದರೂ ನನಗೆ ಸಹಕಾರ ನೀಡಲಿಲ್ಲ. ನಮಗೆ ಮೇಕೆದಾಟಿನಲ್ಲಿ ಡ್ಯಾಂ ನಿರ್ಮಾಣ ಮಾಡುವ ಶಕ್ತಿ ಇಲ್ಲವಾ ಎಂದು ಪ್ರಶ್ನಿಸಿದರು. ಕನ್ನಡಿಗರು ಸ್ವಾಭಿಮಾನಿಗಳು, ತಮಿಳರಿಗೆ ಯಾವ ರೀತಿಯಲ್ಲೂ ಕಡಿಮೆಯಿಲ್ಲ. ಬಿಜೆಪಿ, ಕಾಂಗ್ರೆಸ್‌ನವರಿಗೆ ರಾಜ್ಯದ ಜನರ ಹಿತ ಬೇಕಾಗಿಲ್ಲ. ಈ ಬಾರಿ ರಾಜ್ಯದ ಜನತೆ ಬಿಜೆಪಿ, ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದರು.

ಯಜಮಾನಿ ಯಾರು?
ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಾತನಾಡಿ, ಕಾಂಗ್ರೆಸ್‌ನ ಯೋಜನೆಗಳು ಮನೆಯಲ್ಲೆ ಹುಳಿ ಹಿಂಡುವಂತಿದೆ. ಗೃಹಲಕ್ಷ್ಮೀ ಯೋಜನೆಯಲ್ಲಿ ಪ್ರತಿ ಕುಟುಂಬದ ಯಜಮಾನಿಗೆ 2000 ರೂ. ಕೊಡುತ್ತೇವೆ ಎನ್ನುತ್ತಾರೆ. ಇದನ್ನು ಯಾರಿಗೆ ಕೊಡುತ್ತಾರೆ? ಅತ್ತೆಗೆ ಕೊಡುತ್ತಾರೋ ಸೊಸೆಗೆ ಕೊಡುತ್ತಾರೋ? ಹಣಕ್ಕಾಗಿ ಕುಟುಂಬದಲ್ಲೆ ಜಗಳವಾಗುತ್ತದೆ. ಆದರೆ, ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆ ಜಾರಿಗೆ ಬರಲಿದ್ದು ಎಲ್ಲರಿಗೂ ಅನುಕೂಲವಾಗಲಿದೆ ಎಂದರು.

ಜೆಡಿಎಸ್‌ ಬಗ್ಗೆ ಲಘು ಹೇಳಿಕೆ ಶೋಭೆ ತರಲ್ಲ
ಅರಸೀಕೆರೆ: ಜೆಡಿಎಸ್‌ಗೆ ಮತ ಹಾಕಿದರೆ ಕಾಂಗ್ರೆಸ್‌ಗೆ ಹಾಕಿದಂತೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಅಸಮಾಧಾನ ಹೊರ ಹಾಕಿದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು, ಹಗುರ ಮಾತು ಬೇಡ, ಇದು ಅವರಿಗೆ ಶೋಭೆ ತರದು ಎಂದರು.
ತಾಲೂಕಿನ ಗಂಡಸಿಯಲ್ಲಿ ಪಕ್ಷದ ಅಭ್ಯರ್ಥಿ ಎನ್‌.ಆರ್‌. ಸಂತೋಷ್‌ ಪರ ಪ್ರಚಾರದಲ್ಲಿ ಮಾತನಾಡಿದ ಅವರು, ಕಳೆದ ಬಾರಿ ರಾಹುಲ್‌ಗಾಂಧಿ ಮಾಡಿದ್ದನ್ನು, ಈ ಬಾರಿ ಮೋದಿ ಮಾಡಿದ್ದಾರೆ. ಇದು ಸಲ್ಲದು ಎಂದರು.

ರಾಹುಲ್‌ಗಾಂಧಿಗೂ, ಇವರಿಗೂ ವ್ಯತ್ಯಾಸ ಇದೆ. ರಾಹುಲ್‌ ಗಾಂಧಿ ಅವರ ಮಟ್ಟಕ್ಕೆ ಮೋದಿ ಅವರನ್ನು ಇಳಿಸಬಾರದಿತ್ತು ಎಂದರು. ರಾಹುಲ್‌ ಗಾಂಧಿ ಈಸ್‌ ಆನ್‌ ಎ ಯಂಗ್‌ ಸ್ಟರ್‌, ಮೋದಿ ಇಸ್‌ ಎ ಮೆಚೂರ್ಡ್‌ ಲೀಡರ್‌. ಅವರಿಂದ ಇಂತಹ ಮಾತು ಬರುತ್ತೆ ಎಂದು ನಾನು ನಿರೀಕ್ಷೆ ಮಾಡಿರಲಿಲ್ಲ ಎಂದು ಬೇಸರ ಹೊರ ಹಾಕಿದರು. ಮೋದಿ ಅವರು ದೇಶದ ಪ್ರಧಾನಿಯಾಗಿ, ಜೆಡಿಎಸ್‌ ಪಕ್ಷದ ಬಗ್ಗೆ ಲಘು ವಾಗಿ ಮಾತನಾಡಬಾರದು ಎಂದು ದೇವೇಗೌಡ ಅವರು.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.