ಅಕ್ರಮ ಮರಳು ಸಾಗಾಣಿಕೆಯಲ್ಲಿ ಶಾಮೀಲು : ಡಿವೈಎಸ್‌ಪಿ ಮೋಹನ್ ಅಮಾನತು
Team Udayavani, Sep 3, 2020, 6:19 PM IST
ಚಾಮರಾಜನಗರ: ಅಕ್ರಮ ಮರಳು ಸಾಗಾಣಿಕೆದಾರರೊಂದಿಗೆ ಶಾಮೀಲಾಗಿ, ಅಕ್ರಮ ಮರಳು ಸಾಗಾಣಿಕೆಗೆ ಅನುವು ಮಾಡಿಕೊಟ್ಟು, ಅಕ್ರಮ ಮರಳಿನ ಟಿಪ್ಪರ್ ಅಪಘಾತಕ್ಕೀಡಾದರೂ ಮೇಲಧಿಕಾರಿಗಳಿಗೆ ಮಾಹಿತಿ ನೀಡದ ಕಾರಣ ಚಾಮರಾಜನಗರ ಡಿವೈಎಸ್ಪಿ ಜೆ. ಮೋಹನ್ ಅವರನ್ನು ಸರ್ಕಾರ ಅಮಾನತುಗೊಳಿಸಿದೆ.
ಕಳೆದ ಮೇ 15ರ ಮಧ್ಯರಾತ್ರಿ, ನಗರದ ಸಂತೆಮರಹಳ್ಳಿ ರಸ್ತೆಯಲ್ಲಿ ಮರಳು ಸಾಗಿಸುತ್ತಿದ್ದ ಟಿಪ್ಪರ್‌ಗೆ ಲಾರಿ ಡಿಕ್ಕಿಯಾಗಿ ಕ್ಲೀನರ್ ಮೃತಪಟ್ಟಿದ್ದ. ಚಾಮರಾಜನಗರ ಡಿವೈಎಸ್ಪಿ ಜೆ. ಮೋಹನ್, ಗ್ರಾಮಾಂತರ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಕೆ.ಎಂ. ಮಂಜು ಹಾಗೂ ಪೂರ್ವ ಠಾಣೆ ಎಸ್‌ಐ ಸುನೀಲ್ ಅಕ್ರಮ ಮರಳು ಸಾಗಾಣಿಕೆಗೆ ಅವಕಾಶ ಮಾಡಿಕೊಟ್ಟಿದ್ದರು. ಅಪಘಾತದ ವಿಷಯವನ್ನು ಮೇಲಧಿಕಾರಿಗಳ ಗಮನಕ್ಕೆ ತಂದರೆ ಅಕ್ರಮ ಮರಳು ದಂಧೆಗೆ ಸಹಕರಿಸುತ್ತಿರುವ ವಿಷಯ ತಿಳಿಯುತ್ತದೆಂದು, ಅಲ್ಲಿದ್ದ ಮರಳನ್ನು ಬೇರೆಡೆಗೆ ಸಾಗಿಸಲಾಗಿತ್ತು. ಆ ಟಿಪ್ಪರ್‌ಗೆ ಎಂ ಸ್ಯಾಂಡ್ ತುಂಬಿ ಪ್ರಕರಣವನ್ನು ತಿರುಚಲು ಪ್ರಯತ್ನಿಸಲಾಗಿತ್ತು.
ದಕ್ಷಿಣ ವಲಯ ಐಜಿಪಿ ಅವರು ಈ ಪ್ರಕರಣದ ತನಿಖೆಗೆ ಆದೇಶಿಸಿದ್ದರು. ಎಎಸ್‌ಪಿಯವರ ತನಿಖಾ ವರದಿಯಲ್ಲಿ ಪ್ರಕರಣ ನಡೆದಿರುವುದು ದೃಢಪಟ್ಟು, ಕರ್ತವ್ಯ ಲೋಪ ಎಸಗಿದ ಕಾರಣ ಡಿವೈಎಸ್‌ಪಿ ಅವರನ್ನು ಅಮಾನತುಪಡಿಸಲಾಗಿದೆ.
ಡಿವೈಎಸ್‌ಪಿ ಜೆ. ಮೋಹನ್ ಅವರನ್ನು ಮೈಸೂರಿನ ದಕ್ಷಿಣ ವಲಯ ಐಜಿಪಿ ಕಚೇರಿಗೆ ಬುಧವಾರ ವರ್ಗಾವಣೆ ಮಾಡಲಾಗಿತ್ತು. ಅವರು ರಿಲೀವ್ ಆಗುವ ಮುನ್ನವೇ ಅಮಾನತು ಆದೇಶ ಬಂದಿದೆ.
ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಸಿಪಿಐ ಮಂಜು, ಪಿಎಸ್‌ಐ ಸುನೀಲ್ ಹಾಗೂ ಎಚ್‌ಸಿ ನಾಗನಾಯ್ಕ ಅವರನ್ನು ಈಗಾಗಲೇ ಅಮಾನತು ಮಾಡಲಾಗಿತ್ತು.
ಪ್ರಿಯದರ್ಶಿನಿ ನೂತನ ಡಿವೈಎಸ್ಪಿ: ಚಾಮರಾಜನಗರ ಉಪ ವಿಭಾಗದ ನೂತನ ಡಿವೈಎಸ್‌ಪಿ ಆಗಿ, ಲೋಕಾಯುಕ್ತದಲ್ಲಿ ಪ್ರೊಬೆಷನರಿ ಡಿವೈಎಸ್ಪಿ ಆಗಿದ್ದ ಪ್ರಿಯದರ್ಶಿನಿ ಸಾಣಿಕೊಪ್ಪ ಅವರನ್ನು ನೇಮಕ ಮಾಡಲಾಗಿದೆ.
ಕೊಳ್ಳೇಗಾಲ ಡಿವೈಎಸ್‌ಪಿ ಎನ್. ನವೀನ್‌ಕುಮಾರ್ ಅವರನ್ನು ಮೈಸೂರಿನ ಪೊಲೀಸ್ ಅಕಾಡೆಮಿಗೆ ವರ್ಗಾಯಿಸಲಾಗಿದೆ. ಅವರ ಜಾಗಕ್ಕೆ ಬೆಂಗಳೂರಿನ ಸಿಐಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ. ನಾಗರಾಜು ಅವರನ್ನು ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.