Hindenburg Case:ಅದಾನಿಗೆ ಸೆಬಿ ಕ್ಲೀನ್ ಚಿಟ್ ಎತ್ತಿಹಿಡಿದ ಸುಪ್ರೀಂ, SIT ತನಿಖೆಗೆ ನಕಾರ
ಸುಪ್ರೀಂಕೋರ್ಟ್ ಪೀಠ ಕಳೆದ ವರ್ಷ ನವೆಂಬರ್ 24ರಂದು ತೀರ್ಪನ್ನು ಕಾಯ್ದಿರಿಸಿತ್ತು.
Team Udayavani, Jan 3, 2024, 11:52 AM IST
ನವದೆಹಲಿ: ಅದಾನಿ-ಹಿಂಡನ್ ಬರ್ಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಬಿ ತನಿಖೆಯಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ಬುಧವಾರ (ಜನವರಿ 03) ನಿರಾಕರಿಸುವ ಮೂಲಕ ಸೆಬಿ ಕ್ಲೀನ್ ಚಿಟ್ ಅನ್ನು ಎತ್ತಿಹಿಡಿದಿದೆ. ಈ ಪ್ರಕರಣದಲ್ಲಿ ತನಿಖೆಯನ್ನು ಸೆಬಿಯಿಂದ ಎಸ್ ಐಟಿಗೆ ವರ್ಗಾಯಿಸಲು ಯಾವುದೇ ಆಧಾರವಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.
ಇದನ್ನೂ ಓದಿ:Belagavi: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆಗೈದ ಕೀಚಕರು! ತಡವಾಗಿ ಬೆಳಕಿಗೆ ಬಂದ ಘಟನೆ
ಅದಾನಿ ಸಮೂಹ ಸಂಸ್ಥೆಗಳ ಷೇರುದರದಲ್ಲಿ ವಂಚನೆ ನಡೆದಿದೆ ಎಂಬ ಹಿಂಡನ್ ಬರ್ಗ್ ವರದಿಯ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಸಲ್ಪಟ್ಟ ಹಲವು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿತ್ತು.
ಅದಾನಿ-ಹಿಂಡನ್ ಬರ್ಗ್ ಪ್ರಕರಣದ ಕುರಿತು ನಾಲ್ಕು ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಿಜೆಐ ಡಿ.ವೈ ಚಂದ್ರಚೂಡ್, ಜಸ್ಟೀಸ್ ಜೆಬಿ ಪಾರ್ಡಿವಾಲಾ ಮತ್ತು ಜಸ್ಟೀಸ್ ಮನೋಜ್ ಮಿಶ್ರಾ ನೇತೃತ್ವದ ಪೀಠ ಈ ತೀರ್ಪನ್ನು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರಾದ ವಿಶಾಲ್ ತಿವಾರಿ, ಎಂ.ಎಲ್.ಶರ್ಮಾ ಮತ್ತು ಕಾಂಗ್ರೆಸ್ ಮುಖಂಡ ಜಯ ಠಾಕೂರ್ ಮತ್ತು ಅನಾಮಿಕಾ ಜೈಸ್ವಾಲ್ ಸಲ್ಲಿಸಿದ್ದ ಪಿಐಎಲ್ ನ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಪೀಠ ಕಳೆದ ವರ್ಷ ನವೆಂಬರ್ 24ರಂದು ತೀರ್ಪನ್ನು ಕಾಯ್ದಿರಿಸಿತ್ತು.
ಅದಾನಿ ಸಮೂಹ ಸಂಸ್ಥೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಜೊತೆ ನಿಕಟ ಸಂಪರ್ಕ ಹೊಂದಿದ್ದು, ಹಿಂಡನ್ ಬರ್ಗ್ ವರದಿ ಬಹಿರಂಗದ ನಂತರ ಅದಾನಿ ಗ್ರೂಪ್ ನ ಷೇರುಗಳ ಬೆಲೆ ಭಾರೀ ಕುಸಿತ ಕಂಡಿರುವುದಾಗಿ ಪಿಐಎಲ್ ನಲ್ಲಿ ಆರೋಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.