ರಫೇಲ್ ಖರೀದಿ ವೇಳೆ ಮಧ್ಯವರ್ತಿಗೆ ಹಣ ನೀಡಿಕೆ ಆರೋಪ : ವಿಚಾರಣೆಗೆ ಸುಪ್ರೀಂ ಅಸ್ತು
Team Udayavani, Apr 12, 2021, 9:28 PM IST
ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ಸ್ವತಂತ್ರ ತನಿಖೆಗೆ ಆದೇಶಿಸಬೇಕೆಂದು ಕೋರಿ ವಕೀಲ ಎಂ.ಎಲ್.ಶರ್ಮಾ ಅವರು ಹೊಸದಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, 2 ವಾರಗಳ ಬಳಿಕ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.
ರಫೇಲ್ ಖರೀದಿ ವೇಳೆ ಭಾರತದ ಮಧ್ಯವರ್ತಿಗೆ ಫ್ರಾನ್ಸ್‌ನ ಡಸಾಲ್ಟ್ ಕಂಪನಿಯು 9 ಕೋಟಿ ರೂ. ನೀಡಿತ್ತು ಎಂಬ ಆರೋಪ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ವಕೀಲರಾದ ಎಂ.ಎಲ್. ಶರ್ಮಾ ಎಂಬುವರು ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ತನಿಖೆಗೊಳಪಡಿಸಬೇಕು ಎಂದು ಮನವಿ ಸಲ್ಲಿಸಿದ್ದರು.
ಮನವಿಯನ್ನು ಅವಗಾಹನೆ ಮಾಡಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬೆx ಅವರು ಅರ್ಜಿದಾರರಿಗೆ ವಿಚಾರಣೆ ಕೈಗೆತ್ತಿಗೊಳ್ಳುವ ಭರವಸೆ ನೀಡಿದರು.
ಇದನ್ನೂ ಓದಿ :ಕರ್ತವ್ಯದಲ್ಲಿದ್ದ ಚಾಲಕರ ಪಾದವನ್ನು ತಮ್ಮ ತಲೆಯ ಮೇಲಿಟ್ಟು ಸಾರಿಗೆ ನೌಕರರ ವಿಶೇಷ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.