ವಿದ್ಯಾರ್ಥಿಗಳಲ್ಲಿ ಸಮಸಮಾಜದ ಹೆಮ್ಮೆ ಮೂಡಿಸುವುದು ಅಗತ್ಯ: ಸಿಎಂಗೆ ಸುರೇಶ್ ಕುಮಾರ್‌ ಮನವಿ


Team Udayavani, Feb 18, 2022, 10:21 AM IST

2minister

ಬೆಂಗಳೂರು: ಹಿಜಾಬ್-ಸಮವಸ್ತ್ರಗಳ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಕಾಯುವ ಕೆಲಸಕ್ಕೆ ಶಿಕ್ಷಣ ಇಲಾಖೆ ಹೊಸ ಕಾಯಕಲ್ಪದೊಂದಿಗೆ ಕೆಲಸ‌ ಮಾಡಬೇಕಿದೆ ಎಂದು ಮಾಜಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ‌ ಸಚಿವ ಬಿಸಿ. ನಾಗೇಶ್ ಅವರುಗಳಿಗೆ ಪತ್ರ ಬರೆದಿರುವ ಅವರು ಶಾಲೆ ಕಾಲೇಜುಗಳ ಆವರಣದಲ್ಲಿ ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ‌ ಆರೋಪ ಪ್ರತ್ಯಾರೋಪಗಳನ್ನು ಮೀರುವ, ಶಿಕ್ಷಣದ‌ ಕಡೆಗೆ ಒಲವು ಹೆಚ್ಚುವ ಸಕಾರಾತ್ಮಕವಾದ ಕಾರ್ಯಕ್ರಮಗಳನ್ನು ರೂಪಿಸುವ ಕುರಿತಂತೆ ನಾವು ಹೆಚ್ಚಾಗಿ ಆಲೋಚಿಸಬೇಕಿದೆ ಎಂದು ಹೇಳಿದ್ದಾರೆ.

ಹಿಜಾಬ್ ಅಥವಾ ಸಮವಸ್ತ್ರ, ಅದರ ಸುತ್ತಲೂ ಭುಗಿಲೇಳುತ್ತಿರುವ ವಿವಾದ ಮೇಲ್ನೋಟದ್ದಲ್ಲ. ಅಲ್ಲಿನ ಆಂತರಿಕ ಸಂಘರ್ಷ, ಅದನ್ನು ಹುಟ್ಟುಹಾಕುತ್ತಿರುವವರ ಮನೋಧರ್ಮ, ಮೂಲಭೂತ ಅವಶ್ಯಕತೆಗಳನ್ನು ಮೀರಿರುವುದು ಗಮನೀಯವೆಂದು ನೆನಪಿಸಿದ್ದಾರೆ.

ಘನ ನ್ಯಾಯಾಲಯವು ಸಾಂವಿಧಾನಿಕ‌ ಅವಕಾಶಗಳನ್ನು ಅವಲೋಕಿಸುತ್ತಿರುವಾಗಲೂ ಶಾಂತಿ‌ ಕದಡುವ ಪ್ರಯತ್ನಗಳಾಗುತ್ತಿರುವುದು ಇದರ‌ ಹಿಂದಿನ‌ ಉದ್ದೇಶವನ್ನು ಸ್ಪಷ್ಟ ಪಡಿಸುತ್ತದೆ ಎಂದಿರುವ ಸುರೇಶ್ ಕುಮಾರ್, ಶಿಕ್ಷಣ‌ ಇಲಾಖೆ ಕೂಡಲೇ‌ ಕೆಲವು ಕ್ರಮಗಳಿಗೆ ಮುಂದಾಗಬೇಕೆಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ:ತ್ರಿವಳಿ ತಲಾಖ್ ನಿಷೇಧ-ಮುಸ್ಲಿಮ್ ಸಹೋದರಿಯರಿಂದ ಆಶೀರ್ವಾದ ಸ್ವೀಕರಿಸುತ್ತಿದ್ದೇನೆ; ಮೋದಿ

ಅವರ ಅಭಿಪ್ರಾಯಗಳು ಕೆಳಕಂಡಂತಿವೆ

  1. ಪ್ರತಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ನಡುವೆ ಸೋದರತ್ವ, ಸೌಹಾರ್ದತೆಯನ್ನು ಕಾಪಾಡುವ, ಶೈಕ್ಷಣಿಕ‌ ವಾತಾವರಣವನ್ನು ಸಂರಕ್ಷಿಸುವ ನಿಟ್ಟಿನಲ್ಲಿ‌ ಶಾಲಾಭಿವೃದ್ದಿ ಮೇಲುಸ್ತುವಾರಿ ಸಮಿತಿಗಳಿಗೆ/ಶಾಲಾ, ಕಾಲೇಜು ಸಲಹಾ‌ ಸಮಿತಿಗಳಿಗೆ ಹಿಂದೆಂದಿಗಿಂತಲೂ ಹೆಚ್ಚಿನ‌ ಖಚಿತ ಜವಾಬ್ದಾರಿಯನ್ನು ನಿಗದಿ‌ ಪಡಿಸಬೇಕಿದೆ.
  2. ತರಗತಿವಾರು ಮಕ್ಕಳ ಸಭೆಗಳನ್ನು ನಿಗದಿಪಡಿಸಿ ಕೋಮುಸಾಮರಸ್ಯದ ಸಾಂಸ್ಕೃತಿಕ‌ ಕಾರ್ಯಕ್ರಮಗಳು, ಸಮವಸ್ತ್ರದ ಆಶಯ, ಅದನ್ನು ಧರಿಸಿದಾಗ ಮೂಡಬೇಕಾದ ಸಮಸಮಾಜದ ಹೆಮ್ಮೆಯ ಕುರಿತಂತೆ ಮಕ್ಕಳಲ್ಲಿ ಅರಿವು ಮೂಡಿಸುವ ಪ್ರಯತ್ನಗಳು ಆಗಬೇಕು. ಅದಕ್ಕಾಗಿ ದಿನದ‌ ಒಂದು ಅವಧಿ ಮೀಸಲಿಟ್ಟರೂ ತಪ್ಪಿಲ್ಲ.
  3. ಶಾಲಾಭಿವೃದ್ಧಿ ಸಮಿತಿಗಳು, ಶಾಲಾ,ಕಾಲೇಜು ಸಲಹಾ ಸಮಿತಿಗಳು, ಪೋಷಕರ ಸಭೆಗಳನ್ನು ವಾರಕ್ಕೊಮ್ಮೆ ಕರೆದು ಈ ಪರಿಸ್ಥಿತಿ ತಿಳಿಯಾಗುವವರೆಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಸಾಧ್ಯವಾಗಬೇಕು. ಮಕ್ಕಳ ಭವಿಷ್ಯ ಕಟ್ಟುವ ಅನಿವಾರ್ಯತೆಯ ಕುರಿತಂತೆ ಮನನ ಮಾಡಿಸಿ ಸೌಹಾರ್ದ ವಾತಾವರಣ ಸೃಷ್ಟಿಸಬೇಕು.
  4. ಶಾಲಾ ಮಟ್ಟದಲ್ಲಿ ಸ್ಥಳೀಯ ಕಲಾವಿದರ, ಸ್ಥಳೀಯ ಸಾಹಿತಿಗಳ, ಸಾಧಕರನ್ನು‌ ಆಹ್ವಾನಿಸಿ ಮಕ್ಕಳ ಆರೋಗ್ಯಕರ ಚರ್ಚೆಗೆ ವೇದಿಕೆ ಸೃಷ್ಟಿಸಬೇಕು. ವಿದ್ಯಾರ್ಥಿಗೆ ಅವರಿಂದ‌ ಒಳಿತಿನ‌ ಪಾಠ ಮಾಡಿಸಬೇಕು, ಪ್ರಭಾವಿತರನ್ನಾಗಿಸುವ ಪ್ರಯತ್ನ ಆಗಬೇಕು.
  5. ಸ್ಥಳೀಯವಾಗಿ ಇಂತಹ ವಿಭಿನ್ನ ಪ್ರಯತ್ನಗಳನ್ನು‌ ಕೈಗೊಂಡ ಶಾಲೆಗಳನ್ನು ಗುರುತಿಸಿ, ಅಭಿನಂದಿಸುವ,‌ಪ್ರಯತ್ನಗಳನ್ನು ದಾಖಲಿಸುವ ವ್ಯವಸ್ಥೆ ಆಗಬೇಕು.
  6. ರಾಜ್ಯಮಟ್ಟದ ಪ್ರಖ್ಯಾತ ಚಲನಚಿತ್ರ‌ಕಲಾವಿದರು, ವಿವಿಧ ಸಾಧಕರುಗಳನ್ನು ಪ್ರೇರೇಪಿಸಿ ಮಕ್ಕಳನ್ನು ಉದ್ದೇಶಿಸಿ ಸಮವಸ್ತ್ರದ ಪ್ರಾಮುಖ್ಯತೆಯನ್ನು ಅರ್ಥೈಸುವ ಕಿರುಚಿತ್ರಗಳನ್ನು ದೃಶ್ಯೀಕರಿಸಿ ವೈರಲ್ ಮಾಡಬಹುದು. ಅಂತೆಯೇ ಖ್ಯಾತ ಹಿನ್ನೆಲೆ ಗಾಯಕರಿಂದ, ಗೀತಸಾಹಿತಿಗಳ‌ ನೆರವನ್ನೂ ಪಡೆದು ವಿಶಿಷ್ಟ ಹಾಡುಗಳನ್ನು ರಚಿಸಿ ಚಿತ್ರೀಕರಿಸಬಹುದು.

ಒಟ್ಟಾರೆಯಾಗಿ ಇದು ನನ್ನ ಶಾಲೆ, ನನ್ನ ಕಾಲೇಜು, ನನ್ನ ಹೆಮ್ಮೆ, ನನ್ನ‌ ಶಿಕ್ಷಣ, ನನ್ನ ಸಮವಸ್ತ್ರ‌ ಮತ್ತು‌ ನನ್ನದೇ ಭವಿಷ್ಯವೆನ್ನುವ ಭಾವನೆ‌ ಪ್ರತಿ ವಿದ್ಯಾರ್ಥಿಯಲ್ಲಿಯೂ ಮೂಡುವ ಪ್ರಯತ್ನ‌ ನಡೆಸಿ ಭಾವೈಕ್ಯತೆಯ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯ ವಿಶೇಷ ಪ್ರಯತ್ನದ‌ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ತಾವು ಸಂಬಂಧಿತರಿಗೆ ಸೂಕ್ತ ನಿರ್ದೇಶನವನ್ನು ನೀಡುವ ಮೂಲಕ ಸರ್ಕಾರದ ಜನಪರ‌ ನಿಲುವನ್ನು ಸಾರ್ವತ್ರೀಕರಣಗೊಳಿಸಲು ಮುಂದಾಗಬೇಕೆಂದು ಕೋರುತ್ತೇನೆ ಎಂದು ಅವರು ಮುಖ್ಯಮಂತ್ರಿಗಳಲ್ಲಿ ಹಾಗೂ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.