ಆರ್.ಡಿ.ಪಾಟೀಲ್ ಹೇಳಿಕೆ ಬಗ್ಗೆ ತನಿಖೆಗೆ ಸುರ್ಜೇವಾಲಾ ಆಗ್ರಹ
Team Udayavani, Jan 25, 2023, 7:41 PM IST
ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಸರಕಾರ ಎಂದರೆ ಸರಕಾರಿ ಹುದ್ದೆ ಮಾರಾಟ ಮಾಡುವ ಮಂಡಿಯಂತಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿ ಅಕ್ರಮದ ಕಿಂಗ್‌ಪಿನ್ ಆರ್. ಡಿ. ಪಾಟೀಲ್, ತಮ್ಮ ಪ್ರಕರಣ ಮುಚ್ಚಿಹಾಕಲು ಸಿಐಡಿ ಡಿವೈಎಸ್‌ಪಿ 3 ಕೋಟಿ ರೂ. ಲಂಚ ಕೇಳಿ 76 ಲಕ್ಷ ರೂ. ಪಡೆದಿದ್ದಾರೆ ಎಂದು ಸಾಕ್ಷ್ಯ ಸಮೇತ ಲೋಕಾಯುಕ್ತರಿಗೆ ದೂರು ನೀಡಿರುವುದು ಬಿಜೆಪಿ ಸರಕಾರದಲ್ಲಿ ನಡೆಯುತ್ತಿರುವ ಹಗರಣಕ್ಕೆ ಸಾಕ್ಷಿ ಎಂದು ದೂರಿದರು.
ಈ ಹಗರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್ ಪೊಲೀಸರನ್ನು ದಬ್ಬಿ ಬಂಧನದಿಂದ ತಪ್ಪಿಸಿಕೊಂಡಿದ್ದ. ಅಲ್ಲದೆ ಆತ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದ. ಈಗ ಒಂದು ಪತ್ರ ಬೆಳಕಿಗೆ ಬಂದಿದ್ದು, ಇದರಲ್ಲಿ ಪ್ರಕರಣದ ತನಿಖಾಧಿಕಾರಿ 3 ಕೋಟಿ ರೂ. ಲಂಚದ ಬೇಡಿಕೆ ಇಟ್ಟಿದ್ದು, ಅದರಲ್ಲಿ 76 ಲಕ್ಷ ರೂ. ಅನ್ನು ನೀಡಿದ್ದೇನೆ ಎಂದು ಹೇಳಿದ್ದಾನೆ. ಇಡೀ ಹಗರಣವನ್ನು ಮುಚ್ಚಲು ಈ ಬೇಡಿಕೆ ಇಡಲಾಗಿತ್ತು ಎಂದು ಲೋಕಾಯುಕ್ತಕ್ಕೆ ಬರೆದ ಪತ್ರದಲ್ಲಿ ಆರೋಪಿಸಲಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ಅವರ ಮೂಗಿನ ಕೆಳಗೆ ಇದೆಲ್ಲವೂ ಆಗುತ್ತಿದ್ದು ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿರುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಪ್ರಶ್ನಿಸಿದರು.
ಕರ್ನಾಟಕದಲ್ಲಿ ಸಿಎಂ ಹುದ್ದೆಯ ಹೆಸರನ್ನು ಬದಲಿಸಬೇಕಿದೆ. ರಾಜ್ಯದಲ್ಲಿ ಸರಕಾರಿ ಹುದ್ದೆಗಳನ್ನು ಹೆಚ್ಚು ಮೊತ್ತ ನೀಡಿದವರಿಗೆ ಹರಾಜು ಮಾಡಲಾಗುತ್ತಿದೆ. ಇದು ಸರಕಾರಿ ಉದ್ಯೋಗಗಳು ಮಾರಾಟವಾಗುವ ಮಂಡಿ ಮಾರುಕಟ್ಟೆಯಂತಾಗಿದೆ ಎಂದು ಆರೋಪಿಸಿದರು.
ರಾಜ್ಯ ಸರಕಾರದಿಂದ ನ್ಯಾಯಯುತ ತನಿಖೆ ಅಸಾಧ್ಯ. ಈ ಪ್ರಕರಣದ ತನಿಖಾಧಿಕಾರಿಗಳನ್ನು ತನಿಖೆ ನಡೆಸುವ ಅಗತ್ಯವಿರುವ ಹಿನ್ನೆಲೆಯಲ್ಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತದೆ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಮಾತನಾಡಿ, ಈ ಪ್ರಕರಣದ ಹಿಂದೆ ಕೇವಲ ಎಸ್‌ಐ ಅಥವಾ ಅಧಿಕಾರಿಗಳು ಮಾತ್ರವಲ್ಲ, ಇಡೀ ವ್ಯವಸ್ಥೆಯೇ ಭಾಗಿಯಾಗಿದೆ. ಈ ನೇಮಕಾತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದ್ದರು. ಈಗ ಪ್ರಮುಖ ಆರೋಪಿಯೇ ಪ್ರಕರಣದ ತನಿಖಾಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಯಾರೆಲ್ಲ ಆರೋಪಿಗಳನ್ನು ಮುಕ್ತಗೊಳಿಸಲು ಎಷ್ಟು ವಸೂಲಿ ಮಾಡಲಾಗಿದೆ ಎಂಬುದರ ಬಗ್ಗೆ ಲೋಕಾಯುಕ್ತದಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಈ ಪ್ರಕರಣದಲ್ಲಿ ಕೆಲವರು ಮಂತ್ರಿಗಳ ಹೆಸರು ಹೇಳಿದರೆ, ಮತ್ತೆ ಕೆಲವರು ಗೃಹ ಸಚಿವರು, ಮುಖ್ಯಮಂತ್ರಿಗಳು, ಡಿಜಿಪಿ ಹೆಸರು ಹೇಳುತ್ತಿದ್ದಾರೆ. ಬಂಧನವಾಗಿರುವ ಐಪಿಎಸ್ ಅಧಿಕಾರಿಗೆ ನ್ಯಾಯಾಲಯದ ಮುಂದೆ ಹೇಳಿಕೆ ನೀಡಲು ಅವಕಾಶ ನೀಡುತ್ತಿಲ್ಲ ಎಂದು ದೂರಿದರು.
ಆರ್.ಡಿ. ಪಾಟೀಲ್ ಲೋಕಾಯುಕ್ತಕ್ಕೆ ಪತ್ರ ಬರೆದಿದ್ದು ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರಕ್ಕೆ ಸಾಕ್ಷಿ. ಗೃಹಸಚಿವರು ಈ ಹುದ್ದೆಯಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಹೊಂದಿಲ್ಲ. ಹೀಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅಥವಾ ಅವರನ್ನು ವಜಾಗೊಳಿಸಬೇಕು.
– ರಣದೀಪ್ ಸಿಂಗ್ ಸುರ್ಜೇವಾಲಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.