ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಕೇಸ್; ಸಲ್ಮಾನ್ ಖಾನ್ ಸೇರಿ 8ಮಂದಿ ವಿರುದ್ಧ ಕ್ರಿಮಿನಲ್ ದೂರು
ಸಲ್ಮಾನ್ ಖಾನ್, ನಿರ್ದೇಶಕ, ನಿರ್ಮಾಪಕ ಕರಣ ಜೋಹರ್ ಸೇರಿದಂತೆ ಎಂಟು ಮಂದಿ ವಿರುದ್ಧ ಪ್ರಕರಣ
Team Udayavani, Jun 17, 2020, 8:19 PM IST
ಪಾಟ್ನ:ಇತ್ತೀಚೆಗಷ್ಟೇ ಆತ್ಮಹತ್ಯೆಗೆ ಶರಣಾಗಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಾನಸಿಕ ಒತ್ತಡದ ಜತೆಗೆ ಕೆಲವು ಅನುಮಾನಗಳು ಬಿ ಟೌನ್ ನಲ್ಲಿ ವ್ಯಕ್ತವಾಗತೊಡಗಿದೆ. ಮತ್ತೊಂದೆಡೆ ಸುಶಾಂತ್ ಘಟನೆಗೆ ಸಂಬಂಧಿಸಿದಂತೆ ಬಾಲಿವುಡ್ ಸ್ಟಾರ್ ನಟ ಸಲ್ಮಾನ್
ಖಾನ್ ಸೇರಿದಂತೆ ಎಂಟು ಮಂದಿ ವಿರುದ್ಧ ಬಿಹಾರ್ ಕೋರ್ಟ್ ನಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.
ಬಿಹಾರದ ಸ್ಥಳೀಯ ಕೋರ್ಟ್ ನಲ್ಲಿ ಸಲ್ಮಾನ್ ಖಾನ್, ನಿರ್ದೇಶಕ, ನಿರ್ಮಾಪಕ ಕರಣ ಜೋಹರ್ ಸೇರಿದಂತೆ ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಕೋರ್ಟ್ ಮುಂದಿನ ವಿಚಾರಣೆಯನ್ನು ಜುಲೈ 3ಕ್ಕೆ ನಿಗದಿಪಡಿಸಿರುವುದಾಗಿ ವರದಿ ವಿವರಿಸಿದೆ.
ಸುಶಾಂತ್ ಸಿಂಗ್ ರಜಪೂತ್ ಅವರಿಗೆ ಮಾನಸಿಕ ಒತ್ತಡ ನೀಡಿರುವ ಆರೋಪದಡಿ ಸಲ್ಮಾನ್, ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ಏಕ್ತಾ ಕಪೂರ್ ಸೇರಿದಂತೆ ಎಂಟು ಮಂದಿ ವಿರುದ್ಧ ವಕೀಲ ಸುಧೀರ್ ಕುಮಾರ್ ಓಝಾ ಅವರು ಐಪಿಸಿ ಸೆಕ್ಷನ್ 306, 109, 504 ಮತ್ತು 506ರ ಅಡಿ ಮೊಕದ್ದಮೆ ದಾಖಲಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.