ಎಲ್ಲ ತರಗತಿಗಳ ಶೇ.30ರಷ್ಟು ಪಠ್ಯಕ್ರಮ ಕಡಿತ!: ಈ ತಿಂಗಳ ಅಂತ್ಯಕ್ಕೆ ಆದೇಶ ಸಾಧ್ಯತೆ
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕುಂದಾಗದಂತೆ ಇಳಿಕೆ
Team Udayavani, Jul 16, 2020, 7:05 AM IST
ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಈ ಶೈಕ್ಷಣಿಕ ವರ್ಷದ ಒಂದರಿಂದ ಹತ್ತನೇ ತರಗತಿಯವರೆಗೆ ಅನ್ವಯವಾಗುವಂತೆ ಪಠ್ಯವನ್ನು ಶೇ.30ರಷ್ಟು ಕಡಿತಗೊಳಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಈ ತಿಂಗಳ ಅಂತ್ಯದೊಳಗೆ ಆದೇಶ ಹೊರಬೀಳುವ ಸಾಧ್ಯತೆಯಿದೆ.
ಶೈಕ್ಷಣಿಕ ವರ್ಷದ ಆರಂಭದ ಬಗ್ಗೆ ಆ.15ರ ಅನಂತರ ಕೇಂದ್ರದ ಮಾರ್ಗಸೂಚಿಯನ್ವಯ ರಾಜ್ಯ ಸರಕಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.
ಈ ವರ್ಷ ಪೂರ್ಣ ಪಠ್ಯ ಬೋಧನೆ ಅಸಾಧ್ಯವಿರುವುದರಿಂದ ಶೇ.30ರಷ್ಟು ಕಡಿತಗೊಳಿಸಲು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ)ಗೆ ಸೂಚನೆ ನೀಡಲಾಗಿತ್ತು.
ಡಿಎಸ್‌ಇಆರ್‌ಟಿ ತನ್ನ ವಿಷಯ ತಜ್ಞರ ಸಮಿತಿಯ ಮೂಲಕ ಪಠ್ಯ ಕಡಿತ ಬಹುತೇಕ ಪೂರ್ಣಗೊಳಿಸಿ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸಲ್ಲಿಸಲಿದೆ.
ಅಲ್ಲಿಂದ ಈ ತಿಂಗಳ ಅಂತ್ಯದೊಳಗೆ ಪೂರ್ಣ ವರದಿ ಸರಕಾರಕ್ಕೆ ಸಲ್ಲಿಕೆಯಾಗಲಿದೆ. ಸರಕಾರದ ಒಪ್ಪಿಗೆ ಪಡೆದು, ಶಾಲೆಗಳಿಗೆ ಕಡಿತವಾದ ಪಠ್ಯದ ಮಾಹಿತಿಯನ್ನು ರವಾನಿಸಲಾಗುತ್ತದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಪಠ್ಯ ಕಡಿತ ಹೇಗೆ?
ಒಂದರಿಂದ 10ನೇ ತರಗತಿವರೆಗೆ ಪಠ್ಯದಲ್ಲಿ ಕಡಿತ ಮಾಡಲಾಗುತ್ತದೆ. ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಪಠ್ಯ ಕ್ರಮದ ಕೆಲವು ವಿಷಯಗಳಿಗೆ ಸಂಬಂಧಿಸಿ ಎನ್‌ಸಿಇಆರ್‌ಟಿ ಸೂಚನೆ ಅನುಸರಿಸಲಾಗುತ್ತದೆ. ರಾಜ್ಯ ಪಠ್ಯಕ್ರಮದ ವಿಷಯಗಳ ಪಠ್ಯ ಕಡಿತವನ್ನು ಡಿಎಸ್‌ಇಆರ್‌ಟಿ ಮಾಡಲಿದೆ.
ವ್ಯಾಕರಣ, ಅಕ್ಷರಮಾಲೆ ಮತ್ತು ಶಿಕ್ಷಣದ ಮೂಲ ತತ್ವಗಳು ಹಾಗೂ ಕಲಿಸಲೇಬೇಕಾದ ಅಗತ್ಯ ವಿಷಯಗಳನ್ನು ಹೊರತುಪಡಿಸಿ, ಉಳಿದ ಅಂಶಗಳನ್ನು ಕ್ರೋಡೀಕರಿಸಿ, ಉಳಿಸಿಕೊಳ್ಳಲೇಬೇಕಾದವು ಮತ್ತು ತೆಗೆಯಬಹುದಾದುವನ್ನು ವಿಂಗಡಿಸಿ, ಒಂದು ವರ್ಷ ಬೋಧನೆ ಮಾಡದಿದ್ದರೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕುಂದಾಗದ ಅಂಶಗಳನ್ನು ಮಾತ್ರ ತೆಗೆಯಲಾಗುತ್ತದೆ ಎಂದು ಡಿಎಸ್‌ಇಆರ್‌ಟಿ ಅಧಿಕಾರಿಯೊಬ್ಬರು ವಿವರ ನೀಡಿದರು. ಪಠ್ಯ ಕಡಿತ ಪೂರ್ಣವಾಗಿದೆ. ಕಡಿತ ಮತ್ತು ಉಳಿಸಿದ ಪಠ್ಯದ ಸಮಗ್ರ ಮಾಹಿತಿಯನ್ನು ಸರಕಾರ ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.
ಪುಸ್ತಕದಲ್ಲಿ ಬದಲಾವಣೆಯಿಲ್ಲ
2020-21ನೇ ಸಾಲಿಗೆ ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕ ಮುದ್ರಣ ಮತ್ತು ಸರಬರಾಜು ಬಹುತೇಕ ಪೂರ್ಣಗೊಂಡಿದೆ. ಹೀಗಾಗಿ ಪ್ರತ್ಯೇಕ ಪುಸ್ತಕ ಇರುವುದಿಲ್ಲ. ಯಾವುದೆಲ್ಲ ಕಡಿತವಾಗಿದೆ, ಯಾವುದನ್ನೆಲ್ಲ ಬೋಧಿಸಬೇಕಿಲ್ಲ ಎಂಬ ಆದೇಶ ನೀಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಖಚಿತಪಡಿಸಿದ್ದಾರೆ.
ಶೈಕ್ಷಣಿಕ ವರ್ಷ ಆರಂಭ ಯಾವಾಗ ಎಂಬುದು ಸ್ಪಷ್ಟವಾಗಿಲ್ಲ. ಆದರೂ ಶೇ.30ರಷ್ಟು ಪಠ್ಯ ಕಡಿತಕ್ಕೆ ಡಿಎಸ್‌ಇಆರ್‌ಟಿಗೆ ಸೂಚನೆ ನೀಡಿದ್ದೇವೆ. ಅಲ್ಲಿನ ತಜ್ಞರ ಸಮಿತಿಯು ಪಠ್ಯ ಕಡಿತ ಮಾಡಿ ವರದಿ ಸಲ್ಲಿಸಲಿದೆ. ಸರಕಾರ ವರದಿ ಪರಿಶೀಲಿಸಿ ಮುಂದಿನ ಆದೇಶ ನೀಡಲಿದೆ.
– ಎಸ್. ಸುರೇಶ್ ಕುಮಾರ್, ಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: ಇನ್ನು 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು
Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ
Mulki: ಉಗುಳಿದರೆ ದಂಡ; ಹಾಕುವವರು ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.