ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ
Team Udayavani, Feb 2, 2023, 7:00 AM IST
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಈ ಬಾರಿ ತಾಲೂಕು ಮಟ್ಟದಲ್ಲಿ ತಯಾರಾಗಲಿದೆ. ಈವರೆಗೆ ರಾಜ್ಯ ಮಟ್ಟದಲ್ಲಿ ನಡೆಯುತ್ತಿದ್ದ ಪ್ರಶ್ನೆ ಪತ್ರಿಕೆ ತಯಾರಿಯ ಜವಾಬ್ದಾರಿಯನ್ನು 2022-23ರ ಸಾಲಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ. ಈ ತಿಂಗಳು ಪರೀಕ್ಷೆ ನಡೆಯಲಿದ್ದು ವೇಳಾಪಟ್ಟಿ ಇನ್ನಷ್ಟೆ ಪ್ರಕಟಗೊಳ್ಳಬೇಕಿದೆ.
ಪೂರ್ವ ಸಿದ್ಧತಾ ಪರೀಕ್ಷೆಯನ್ನು ಬಿಇಒಗಳ ಹಂತದಲ್ಲೇ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಅನುಮೋದನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿಯಿಂದ ಮಾದರಿ ಪ್ರಶ್ನೆ ಪತ್ರಿಕೆಯನ್ನು ರಾಜ್ಯದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ಗೆ ಅಪ್‌ಲೋಡ್ ಮಾಡಲಾಗುವುದು. ಆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಅನುಸರಿಸಿ ಬಿಇಒಗಳು ತಮ್ಮ ಹಂತದಲ್ಲಿಯೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಮುದ್ರಣ ಮಾಡಿ ತಾಲೂಕು ಹಂತದ ಸ್ಟ್ರಾಂಗ್ ರೂಂನಲ್ಲಿ ಗೌಪ್ಯತೆ ಮತ್ತು ಸುರಕ್ಷಿತವಾಗಿಡಬೇಕು. ಆಯಾ ವಿಷಯದ ಪರೀಕ್ಷಾ ದಿನದಂದು ಅವುಗಳನ್ನು ಬಿಗಿ ಭದ್ರತೆಯಲ್ಲಿ ಶಾಲೆಗಳಿಗೆ ವಿತರಣೆ ಮಾಡಬೇಕು. ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪರೀಕ್ಷೆ ನಡೆಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚಿಸಿದೆ.
ಪರೀಕ್ಷಾ ಶುಲ್ಕವಾಗಿ ಪ್ರತೀ ವಿದ್ಯಾರ್ಥಿಗಳಿಂದ 60 ರೂ.ಗಳನ್ನು ಮಾತ್ರ ಸಂಗ್ರಹಿಸಲು ಸೂಚಿಸಿದೆ. ಈ ಶುಲ್ಕವನ್ನು ಶಾಲಾ ಮುಖ್ಯೋಪಾಧ್ಯಾಯರು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು. ಬಿಇಒಗಳು ಪರೀಕ್ಷಾ ಶುಲ್ಕ ಸ್ವೀಕರಿಸಿದ ಮತ್ತು ಪರೀಕ್ಷಾ ಖರ್ಚು ವೆಚ್ಚಗಳ ಕುರಿತು ಲೆಕ್ಕಪತ್ರ ನಿರ್ವಹಿಸಿ ತಪಾಸಣಾ ಸಮಯದಲ್ಲಿ ಹಾಜರುಪಡಿಸಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚನೆ ನೀಡಿದೆ.
2018ಕ್ಕೆ ಮೊದಲು ಶಿಕ್ಷಕರ ಸಂಘದಿಂದ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲಾಗುತ್ತಿತ್ತು. ನಂತರ ಅದನ್ನು ಶಿಕ್ಷಕರ ಒತ್ತಾಯದ ಮೇರೆಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದಲೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ನೀಡಲು ಕ್ರಮ ಕೈಗೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.