Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ
ಆರು ಮಂದಿಯ ಅಪರಿಚಿತ ವ್ಯಕ್ತಿಗಳ ಗುಂಪಿನಿಂದ ದಾಳಿ
Team Udayavani, Jul 5, 2024, 11:17 PM IST
ಚೆನ್ನೈ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತಮಿಳುನಾಡು ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ರನ್ನು ಶುಕ್ರವಾರ (ಜು.5) ಪೆರಂಬೂರ್‌ನಲ್ಲಿರುವ ಅವರ ನಿವಾಸದ ಬಳಿ 6 ಮಂದಿಯ ಅಪರಿಚಿತ ವ್ಯಕ್ತಿಗಳ ಗುಂಪೊಂದು ಬರ್ಬರವಾಗಿ ಕೊಲೆ ಮಾಡಿದೆ ಎಂದು ಚೆನ್ನೈ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕೊಲೆಯ ಹಿಂದಿನ ಉದ್ದೇಶ ಈ ವರೆಗೆ ತಿಳಿದು ಬಂದಿಲ್ಲ.
ಸೇಂಬಿಯಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ಸಂಭವಿಸಿದೆ. ದುಷ್ಕರ್ಮಿಗಳ ಬಂಧಿಸಲು ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ವರದಿಗಳ ಪ್ರಕಾರ, ಅಪರಿಚಿತ ಗ್ಯಾಂಗ್ ಪೆರಂಬೂರಿನ ಸದಾಯಪ್ಪನ್ ಸ್ಟ್ರೀಟ್‌ನಲ್ಲಿರುವ ಅವರ ಮನೆಯ ಸಮೀಪವೇ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ, ಪರಾರಿಯಾಗಿದೆ. ತಕ್ಷಣ ಬಿಎಸ್‌ಪಿ ರಾಜ್ಯಾಧ್ಯಕ್ಷರನ್ನು ಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ.
#WATCH | Tamil Nadu: Bahujan Samaj Party (BSP) workers and supporters block a road in Chennai as they protest against the murder of Tamil Nadu BSP president Armstrong
They are demanding immediate arrest of the accused. Armstrong was hacked to death by an unidentified mob of 6… https://t.co/gXaM31gUBL pic.twitter.com/FkMwCbryyY
— ANI (@ANI) July 5, 2024
ಬಿಎಸ್‌ಪಿ ಕಾರ್ಯಕರ್ತರಿಂದ ರಸ್ತೆ ತಡೆ, ಪ್ರತಿಭಟನೆ:
ಸದ್ಯ ಪೊಲೀಸರು ಈ ಕೊಲೆಯ ತನಿಖೆ ನಡೆಸುತ್ತಿದ್ದಾರೆ. ತನ್ನ ಪಕ್ಷದ ಅಧ್ಯಕ್ಷನ ಹತ್ಯೆಯ ಖಂಡಿಸಿ ಬಿಎಸ್‌ಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರೆ, ಪೊಲೀಸರು ನಿಯಂತ್ರಿಸಲು ಹರಸಾಹಸಪಟ್ಟರು. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಪಳನಿಸ್ವಾಮಿ ಈ ಹತ್ಯೆಯ ಖಂಡಿಸಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ತಮ್ಮ ಅಧಿಕೃತ ಎಕ್ಸ್ ಖಾತೆಯನ್ನು ಈ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
Rajasthan:ಪೊಲೀಸ್ ಭದ್ರತೆಗೆ ಆದ 9 ಲಕ್ಷ ರೂ.ಬಿಲ್ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್
ED: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಫ್ಲ್ಯಾಟ್ ಇ.ಡಿ.ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.