ತಮಿಳುನಾಡು: 27 ಜಿಲ್ಲೆಗಳಲ್ಲಿ Covid ನಿರ್ಬಂಧ ತೆರವು; ಸಲೂನ್ ಮದ್ಯದ ಅಂಗಡಿ ತೆರೆಯಲು ಅವಕಾಶ
ವಾಹನ ರಿಪೇರಿ ಅಂಗಡಿ, ಕೃಷಿ ಉಪಕರಣ ಅಂಗಡಿ, ಪಂಪ್ ಸೆಟ್ಸ್ ಅಂಗಡಿ ತೆರೆಯಲು ಅನುಮತಿ ನೀಡಲಾಗಿದೆ.
Team Udayavani, Jun 14, 2021, 1:25 PM IST
ಚೆನ್ನೈ: ಕೋವಿಡ್ 19 ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಸೋಮವಾರ(ಜೂನ್ 14) ಇನ್ನಷ್ಟು ನಿರ್ಬಂಧಗಳನ್ನು ಸಡಿಲಿಕೆ ಮಾಡುವ ಮೂಲಕ ಹೆಚ್ಚಿನ ಚಟುವಟಿಕೆಗೆ ಅವಕಾಶ ನೀಡಿರುವುದಾಗಿ ವರದಿ ತಿಳಿಸಿದೆ.
ರಾಜ್ಯದ 27 ಜಿಲ್ಲೆಗಳಲ್ಲಿ ಕೋವಿಡ್ ನಿರ್ಬಂಧದ ಸಡಿಲಿಕೆ ಮಾಡಿರುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಘೋಷಿಸಿದ್ದು, ಪಶ್ಚಿಮದ 7 ಹಾಗೂ ಕಾವೇರಿ ನದಿ ಪ್ರದೇಶವನ್ನೊಳಗೊಂಡ ನಾಲ್ಕು ಜಿಲ್ಲೆ ಸೇರಿದಂತೆ 11 ಜಿಲ್ಲೆಗಳಲ್ಲಿ ಕೋವಿಡ್ 19 ಪ್ರಕರಣ ಹೆಚ್ಚಳವಾಗಿದೆ.
ಸುಮಾರು 35 ದಿನಗಳ ಕೋವಿಡ್ ಲಾಕ್ ಡೌನ್ ತೆರವುಗೊಂಡ ನಂತರ 27 ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಸಲೂನ್, ಬ್ಯೂಟಿ ಪಾರ್ಲರ್ ಪಾರ್ಕ್ ಹಾಗೂ ರಾಜ್ಯ ಸ್ವಾಮಿತ್ವದ ಮದ್ಯದ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿದೆ.
27 ರಾಜ್ಯಗಳಲ್ಲಿ ಬೆಳಗ್ಗೆ 10ಗಂಟೆಯಿಂದ ಸಂಜೆ 5ರವರೆಗೆ ಮದ್ಯದ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಬೆಳಗ್ಗೆ 6ರಿಂದ ಸಂಜೆ 5ರವರೆಗೆ ಟೀ ಶಾಪ್ ತೆರೆಯಲು ಅವಕಾಶ ನೀಡಿದ್ದು, ಕೇವಲ ಪಾರ್ಸೆಲ್ ಸೇವೆಗೆ ಮಾತ್ರ ಅನುಮತಿ ನೀಡಿರುವುದಾಗಿ ತಿಳಿಸಿದೆ. ಕೇವಲ ಶೇ.20ರಷ್ಟು ಸಿಬಂದಿಯೊಂದಿಗೆ ಐಟಿ ಕ್ಷೇತ್ರ ಕಾರ್ಯನಿರ್ವಹಿಸಬಹುದಾಗಿದೆ. ದ್ವಿಚಕ್ರ ವಾಹನ ರಿಪೇರಿ ಅಂಗಡಿ, ಕೃಷಿ ಉಪಕರಣ ಅಂಗಡಿ, ಪಂಪ್ ಸೆಟ್ಸ್ ಅಂಗಡಿ ತೆರೆಯಲು ಅನುಮತಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.