ತರುಣ್ ತೇಜ್‍ಪಾಲ್ ಲೈಂಗಿಕ ದೌರ್ಜನ್ಯ ಕೇಸ್: ವಿಚಾರಣೆ ಏಪ್ರಿಲ್ 11 ಕ್ಕೆ ಮುಂದೂಡಿಕೆ
Team Udayavani, Mar 31, 2022, 5:58 PM IST
ಪಣಜಿ: ಸಹುದ್ಯೋಗಿ ಪತ್ರಕರ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಹಲ್ಕಾ ಪತ್ರಿಕೆಯ ಮಾಜಿ ಸಂಪಾದಕ ತರುಣ್ ತೇಜ್‍ಪಾಲ್ ರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ನ ಗೋವಾ ಪೀಠ ಏಪ್ರಿಲ್ 11 ಕ್ಕೆ ಮುಂದೂಡಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದ ತೇಜ್‍ಪಾಲ್ ರವರ ಅರ್ಜಿಯ ವಿಚಾರಣೆ ಏಪ್ರಿಲ್ 1 ರಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ. ಇನ್ ಕ್ಯಾಮರಾ ವಿಚಾರಣೆಗಾಗಿ ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದ ನಂತರ ತೇಜ್‍ಪಾಲ್ ರವರು ಸುಪ್ರಿಂ ಕೋರ್ಟ್ ನ ಮೆಟ್ಟಿಲೇರಿದ್ದರು.
ಏಪ್ರಿಲ್ 1 ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ನಲ್ಲಿ ವಿಚಾರಣೆ ಆರಂಭಗೊಳ್ಳಲಿದೆ. ಇದರಿಂದಾಗಿ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಮುಂದೂಡಬೇಕು ಎಂದು ತರುಣ್ ತೇಜ್‍ಪಾಲ್ ಪರ ವಕೀಲರು ಬಾಂಬೆ ಹೈಕೋರ್ಟ್ ಗೋವಾ ಪೀಠದಲ್ಲಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಬಾಂಬೆ ಹೈಕೋರ್ಟ್ ನ ಗೋವಾ ಪೀಠವು ಈ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 11 ಕ್ಕೆ ಮುಂದೂಡಿದೆ.
ಸಂತ್ರಸ್ತೆ ಯ ದೂರಿನ ಪ್ರಕಾರ ತೇಜ್‍ಪಾಲ್ ರವರು ಗೋವಾದ ಪಂಚತಾರಾ ಹೋಟೆಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮ್ಮ ಕಚೇರಿಯ ಮಹಿಳಾ ಪತ್ರಕರ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಸಾಕ್ಷಾಧಾರಗಳ ಕೊರತೆಯಿಂದ ಮಾಪ್ಸಾ ಜಿಲ್ಲಾ ಸತ್ರ ನ್ಯಾಯಾಲಯವು ತೇಜ್‍ಪಾಲ್ ರವರನ್ನು ಖುಲಾಸೆಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಗೋವಾ ಸರ್ಕಾರ ಬಾಂಬೆ ಹೈಕೋರ್ಟ್ ಗೋವಾ ಪೀಠದ ಮೆಟ್ಟಿಲೇರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.