ಫುಟ್ ಬಾಲ್ ಪಂದ್ಯದ ವೇಳೆ ಕುಸಿದ ಗ್ಯಾಲರಿ: ನೂರಕ್ಕೂ ಅಧಿಕ ಮಂದಿಗೆ ಗಾಯ
ಕೇರಳದ ಮಲಪ್ಪುರಂ ನಲ್ಲಿ ನಡೆದ ದುರ್ಘಟನೆ; 15 ಕ್ಕೂ ಹೆಚ್ಚು ಮಂದಿ ಗಂಭೀರ
Team Udayavani, Mar 20, 2022, 11:36 AM IST
ಮಲಪ್ಪುರಂ: ಇಲ್ಲಿನ ಪೂನ್ ಗೋಡ್ ಎಂಬಲ್ಲಿ ಶನಿವಾರ ರಾತ್ರಿ ನಡೆಯುತ್ತಿದ್ದ ಫುಟ್ ಬಾಲ್ ಪಂದ್ಯಾವಳಿಯ ವೇಳೆ ತಾತ್ಕಾಲಿಕ ವಾಗಿ ನಿರ್ಮಿಸಲಾಗಿದ್ದ ಪ್ರೇಕ್ಷಕರ ಗ್ಯಾಲರಿ ಕುಸಿದು ಬಿದ್ದು ಕನಿಷ್ಠ 100 ಮಂದಿ ಗಾಯಗೊಂಡಿದ್ದಾರೆ.
ಜಿದ್ದಾಜಿದ್ದಿನ ಪಂದ್ಯಾವಳಿಯ ಫೈನಲ್ ಪಂದ್ಯ ಆರಂಭಕ್ಕೂ ಮುನ್ನ ಪ್ರೇಕ್ಷಕರು ಕಿಕ್ಕಿರಿದು ನೆರೆದಿದ್ದ ವೇಳೆ ಗ್ಯಾಲರಿ ಏಕಾಏಕಿ ಕುಸಿದು ಬಿದ್ದಿದ್ದು, ಪಂದ್ಯಾವಳಿ ವೀಕ್ಷಣೆಗೆ ಬಂದಿದ್ದವರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ 15 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳೀಯ ಯುವಕರ ಸಂಘಟನೆ ಪಂದ್ಯಾವಳಿಯನ್ನು ಆಯೋಜಿಸಿದ್ದು, ನೀರಿಕ್ಷೆಗೂ ಮೀರಿ ಜನ ಸೇರಿದ್ದರು ಎಂದು ಹೇಳಲಾಗಿದೆ. ಗಾಯಾಳುಗಳಿಗೆ ತಕ್ಷಣ ಪೊಲೀಸರು ಮತ್ತು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಹಲವರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚುಕಿತ್ಸೆ ನೀಡಲಾಗುತ್ತಿದೆ.
Temporary gallery collapsed during a #football match in Poongod at Malappuram yesterday; Police say around 200 people suffered injuries including five with serious injuries (ANI)
Track updates – https://t.co/jgVRMaKDLc #Kerala pic.twitter.com/69efx8gHMK
— Hindustan Times (@htTweets) March 20, 2022
ಪೊಲೀಸರು ಪಂದ್ಯಾವಳಿ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.