ಬಿಜೆಪಿ ಬಿಟ್ಟಿದ್ದೇನೆ ಹೊರತು ಸಂಘದ ವಿಚಾರಧಾರೆ ಬಿಟ್ಟಿಲ್ಲ: ಮಾಜಿ ಸಿಎಂ ಪಾರ್ಸೇಕರ್
ಬಿಜೆಪಿ ಟಿಕೆಟ್ ನೀಡಿದ್ದರೆ ಖಂಡಿತವಾಗಿಯೂ ಜಯಗಳಿಸುತ್ತಿದ್ದೆ
Team Udayavani, Apr 7, 2022, 5:58 PM IST
ಪಣಜಿ: ನಾನು ಬಿಜೆಪಿ ಪಕ್ಷವನ್ನು ಬಿಟ್ಟಿದ್ದೇನೆ ಹೊರತು ಸಂಘ ಪರಿವಾರದ ವಿಚಾರಧಾರೆಯನ್ನು ಬಿಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಲಕ್ಷ್ಮೀಕಾಂತ ಪಾರ್ಸೇಕರ್ ಹೇಳಿದ್ದಾರೆ.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಂಘದ ಶಾಖೆಯಲ್ಲಿರುವಾಗ ಪಕ್ಷದ ಕೆಲಸ ಮಾಡಬೇಕು ಎಂದು ಸಂಘದ ವತಿಯಿಂದ ಹೇಳಲಾಗುತ್ತಿತ್ತು. ಈ ದೃಷ್ಟಿಯಿಂದ ನಾನು ಬಿಜೆಪಿಯ ಕೆಲಸ ಕಾರ್ಯ ನಿರ್ವಹಿಸಿದೆ. ಸಂಘ ಪರಿವಾರದ ವಿಚಾರಧಾರೆಯನ್ನು ನೋಡಿಯೇ ನಾನು ಬಿಜೆಪಿಗೆ ಬಂದಿದ್ದೆ. ಆದರೆ ಪಕ್ಷ ಬೆಳೆದಂತೆ ತಪ್ಪು ಕಲ್ಪನೆಗಳು ಕೂಡ ಬೆಳೆಯುತ್ತವೆ. ಕೆಲವು ವ್ಯಕ್ತಿಗಳು ನನ್ನನ್ನು ಪಕ್ಷದಿಂದ ದೂರವಿಡಲು ಪ್ರಯತ್ನ ನಡೆಸಿದರು ಎಂದು ಬೇಸರ ಹೊರ ಹಾಕಿದರು.
2017 ರ ವಿಧಾನಸಭಾ ಚುನಾವಣೆಯಲ್ಲಿಯೇ ನನ್ನನ್ನು ಪಕ್ಷದ ಸ್ಥಳೀಯ ಸಮಿತಿಯಿಂದ ದೂರವಿಡುವ ಪ್ರಯತ್ನ ನಡೆಸಲಾಯಿತು. ಇದರಿಂದಾಗಿ ನಾನು ದೂರವೇ ಉಳಿದೆ, ಪಕ್ಷಕ್ಕೆ ರಾಜೀನಾನೆಯನ್ನು ನೀಡಿದೆ ಎಂದರು.
2022 ರ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ನಾನು ಪಕ್ಷೇತರನಾಗಿ ಸ್ಫರ್ಧಿಸಿ ಪರಾಭವಗೊಂಡಿದ್ದರೂ ಸಹ ನನಗೆ 6,000 ಮತಗಳು ಬಿದ್ದಿವೆ, ಇದು ನನ್ನ ಗೆಲುವೇ ಆಗಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ನಾನು ಎಲ್ಲಿಯೂ ಕೂಡ ಬಹಿರಂಗ ಸಭೆ ನಡೆಸಿಲ್ಲ. ಆದರೂ ಕೂಡ ನನ್ನೊಂದಿಗೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಜನತೆ ಬೆಂಬಲ ನೀಡಿದ್ದಾರೆ. ಬಿಜೆಪಿ ನನಗೆ ಟಿಕೆಟ್ ನೀಡಿದ್ದರೆ ನಾನು ಖಂಡಿತವಾಗಿಯೂ ಜಯಗಳಿಸುತ್ತಿದ್ದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.