Hijab: ಹಿಜಾಬ್ ಧರಿಸಲು ಸೂಚಿಸಿದ್ದ ಶಾಲೆಯ ಕಟ್ಟಡ ಧ್ವಂಸ
Team Udayavani, Jun 16, 2023, 7:42 AM IST
ಭೋಪಾಲ: ಹಿಂದೂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಬೇಕು ಎಂದು ಒತ್ತಾಯಿಸಿ ವಿವಾದಕ್ಕೆ ಗುರಿಯಾಗಿದ್ದ ಮಧ್ಯಪ್ರದೇಶದ ದಮೋಹ ಜಿಲ್ಲೆಯ ಶಾಲೆಯ ಒಂದು ಭಾಗವನ್ನು ಕೆಡವಿ ಹಾಕಲಾಗಿದೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ಜೆಸಿಬಿ ಮೂಲಕ ಕಟ್ಟಡವನ್ನು ಕೆಡವಿ ಹಾಕಲು ಪ್ರಯತ್ನ ನಡೆಸಲಾಯಿತು. ನಿಗದಿಯಾಗಿರುವ ಸ್ಥಳದ ಮೂಲಕ ಜೆಸಿಬಿ ಶಾಲೆಯ ಆವರಣದೊಳಕ್ಕೆ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಹೀಗಾಗಿ, 40 ಮಂದಿ ಕಾರ್ಮಿಕರು ಎರಡನೇ ಮಹಡಿಯಿಂದ ಕಡೆವಿ ಹಾಕುವ ಕಾರ್ಯ ನಡೆಸಿದ್ದಾರೆ.
ಕೆಡವಿ ಹಾಕಲಾಗಿರುವ ಭಾಗವನ್ನು ಶಾಲೆಯ ಆಡಳಿತ ಮಂಡಳಿ ಒತ್ತುವಾರಿ ಮಾಡಿಕೊಂಡ ಜಾಗದಲ್ಲಿ ನಿರ್ಮಿಸಿದೆ. ಈ ಬಗ್ಗೆ ನೋಟಿಸ್ ಕೂಡ ನೀಡಲಾಗಿತ್ತು ಎಂದು ದಮೋಹ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ. ಮಧ್ಯಪ್ರದೇಶ ಬಿಜೆಪಿ ಘಟಕದ ಅಧ್ಯಕ್ಷ ವಿ.ಡಿ.ಶರ್ಮಾ ಮಾತಾಡಿದ “ಶಾಲೆಯ ಆಡಳಿತ ಮಂಡಳಿ ಜೆಹಾದಿ ಸಾಮ್ರಾಜ್ಯ ಸ್ಥಾಪನೆಗೆ ಮುಂದಾಗಿದೆ” ಎಂದು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.