ದುರುದ್ದೇಶಪೂರಿತ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ಉತ್ತರ: ಹೆಚ್‍ಡಿಕೆ
Team Udayavani, Nov 2, 2021, 2:31 PM IST
ಬೆಂಗಳೂರು: ಜೆಡಿಎಸ್ ಪಕ್ಷವು ಬಿಜೆಪಿ ಬಿ ಟೀಮ್ ಎಂದು ಕಾಂಗ್ರೆಸ್ ಪಕ್ಷದ ನಾಯಕರು ನಡೆಸಿದ ದುರುದ್ದೇಶಪೂರಿತ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ಉತ್ತರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷವು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಸ್ಫರ್ಧೆ ಮಾಡಿತ್ತು ಎಂದು ಹೇಳಿದ್ದ ಕಾಂಗ್ರೆಸ್ ಪಕ್ಷಕ್ಕೆ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳಲ್ಲಿ ಸಿಕ್ಕಿರುವ ಮತಗಳೇ ಉತ್ತರ ನೀಡಿವೆ ಎಂದರು.
ಸ್ಥಳೀಯ ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸಲಾಯಿತು. ಕಾಂಗ್ರೆಸ್-ಬಿಜೆಪಿ ಪಕ್ಷಗಳು ಹೇಳಿರುವಂತೆ ನಾನು ಉಪ ಚುನಾವಣೆ ಫಲಿತಾಂಶಕ್ಕೆ ಮಹತ್ವ ನೀಡುವುದಿಲ್ಲ. ನಮ್ಮ ಗುರಿ ಏನಿದ್ದರೂ 2023ರ ಚುನಾವಣೆ ಮೇಲೆ ಕೇಂದ್ರೀಕೃತವಾಗಿದೆ ಎಂದು ಹೇಳಿದರು.
ಸಿಂದಗಿ ವಿಧಾನಸಭೆ ಕ್ಷೇತ್ರಕ್ಕೆ ನಮ್ಮ ಪಕ್ಷ ಸಾಕಷ್ಟು ಕೊಡುಗೆ ನೀಡಿದೆ. ಪ್ರಚಾರದ ವೇಳೆ ನಾನು ಐವತ್ತಕ್ಕೂ ಹೆಚ್ಚು ಹಳ್ಳಿಗಳಿಗೆ ಭೇಟಿ ನೀಡಿದ್ದೆ. ಜನರ ಸ್ಪಂದನೆ ಉತ್ತಮವಾಗಿತ್ತು. ದೇವೇಗೌಡರು ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿ ನೀಡಿದ್ದ ನೀರಾವರಿ ಯೋಜನೆಗಳ ಬಗ್ಗೆ, ನಾನು ಮುಖ್ಯಮಂತ್ರಿ ಆಗಿದ್ದಾಗ ನೀಡಿದ ಕಾರ್ಯಕ್ರಮಗಳು ಹಾಗೂ ಸಾಲ ಮನ್ನಾ ಬಗ್ಗೆ ಪ್ರತಿ ಹಳ್ಳಿಯಲ್ಲೂ ಜನ ಮಾತನಾಡಿದ್ದರು. ಸ್ವತಃ ಜನರೇ ನನ್ನ ಬಳಿಗೆ ಬಂದು ಈ ಬಗ್ಗೆ ಮಾತನಾಡುತ್ತಿದ್ದರು. ಆದರೂ ಈ ರೀತಿಯ ಫಲಿತಾಂಶ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇದನ್ನೂ ಓದಿ:ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಮುಖಭಂಗ: ಕಾಂಗ್ರೆಸ್ ನ ಶ್ರೀನಿವಾಸ ಮಾನೆ ವಿಜಯ
ಮನಗೂಳಿ ಮಗನ ಹೈಜಾಕ್:
ಮಾಜಿ ಸಚಿವ ಎಂ.ಸಿ.ಮನಗೂಳಿ ಮರಣದ ನಂತರ ಅವರ ಪುತ್ರ ಅಶೋಕ್ ಮನಗೂಳಿ ಅವರನ್ನು ಕಾಂಗ್ರೆಸ್ ಹೈಜಾಕ್ ಮಾಡಿತು. ಜತೆಗೆ, ನಮ್ಮ ಸಂಘಟನೆಯನ್ನೂ ದುರ್ಬಲ ಮಾಡಲಾಗಿತ್ತು. ಇದು ನನ್ನ ಗಮನದಲ್ಲಿತ್ತು. ಮತಗಟ್ಟೆಗಳಲ್ಲಿ ಕಾರ್ಯಕರ್ತರನ್ನು ಗುರುತಿಸುವುದೇ ದೊಡ್ಡ ಸವಾಲಾಗಿತ್ತು. ಈ ಕಾರಣಕ್ಕೆ ನಮಗೆ ಹಿನ್ನಡೆ ಉಂಟಾಯಿತು. ಆದರೂ ಈ ಫಲಿತಾಂಶದಿಂದ ನಾನು ಅಧೀರನೂ ಆಗಿಲ್ಲ, ನನಗೆ ಆತಂಕವೂ ಇಲ್ಲ ಎಂದು ಹೇಳಿದರು.
ಹಾನಗಲ್ʼನಲ್ಲಿ ನಮಗೆ ನೆಲೆ ಇರಲಿಲ್ಲ. ಆದರೆ, ಸಿಂದಗಿಯಲ್ಲಿ ನಮ್ಮವರೇ ಶಾಸಕರಿದ್ದರು. ಯಾವ ಚುನಾವಣೆಯಲ್ಲೂ ಕಾಂಗ್ರೆಸ್ ಎರಡನೇ ಸ್ಥಾನಕ್ಕೆ ಬಂದಿರಲಿಲ್ಲ. ಯಾವಾಗಲೂ ಇಲ್ಲಿ ಜೆಡಿಎಸ್-ಬಿಜೆಪಿ ನಡುವೆ ಸ್ಪರ್ಧೆ ಇರುತ್ತಿತ್ತು ಎಂದರು.
ಹಣದಿಂದಲೇ ಚುನಾವಣೆ ನಡೆದಿದೆ:
ಈ ಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿ ಅಲ್ಲ. ಹೀಗಾಗಿ ಇದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲಾರೆ. ಹಣದಿಂದಲೇ ಈ ಚುನಾವಣೆ ನಡೆದಿದೆ ಎಂದು ಹೇಳಿದರು.
8ರಿಂದ ಜಿಲ್ಲಾವಾರು ಸಭೆ:
ಇದೇ ನವೆಂಬರ್ 8 ರಿಂದ 16 ರವರೆಗೆ ಪಕ್ಷದ ಕಚೇರಿಯಲ್ಲಿ ಪ್ರತಿ ಜಿಲ್ಲಾವಾರು ಸಭೆಗಳನ್ನು ಕರೆಯಲಾಗಿದೆ. ಪ್ರತಿದಿನ ನಾಲ್ಕು ಜಿಲ್ಲೆಗಳ ಮುಖಂಡರ ಜತೆ ಸಮಾಲೋಚನೆ ನಡೆಸಲಿದ್ದೇನೆ. ಪದಾಧಿಕಾರಿಗಳು ಹಾಗೂ ಸಂಭನೀಯ ಅಭ್ಯರ್ಥಿಗಳು ಈ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ. ತಳಮಟ್ಟದಿಂದ ಪಕ್ಷವನ್ನು ಕಟ್ಟುವುದು ಹಾಗೂ ವಿಷಯಾಧಾರಿತವಾಗಿ ಹೋರಾಟ ನಡೆಸುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ 2023ಕ್ಕೆ ಪಕ್ಷವನ್ನು ಸಜ್ಜುಗೊಳಿಸುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.