ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ಕುಂಡಿಕೆಯಲ್ಲಿ ಸ್ನಾನಕ್ಕಿರಲಿಲ್ಲ ಅವಕಾಶ
Team Udayavani, Oct 17, 2021, 3:22 PM IST
ಮಡಿಕೇರಿ: ನಾಡಿನ ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ತುಲಾಸಂಕ್ರಮಣದ ಭಾನುವಾರ ಮಧ್ಯಾಹ್ನ1.11ಕ್ಕೆ ಪವಿತ್ರ ತೀರ್ಥೋದ್ಭವವಾಗಿದೆ.
ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದಲ್ಲಿ ಕಾವೇರಿ ಪವಿತ್ರ ತೀರ್ಥೋದ್ಭವಕ್ಕೆ ತೆರಳಲು ಕೋವಿಡ್ ನಿಯಮಗಳನ್ನು ಪಾಲಿಸಲು ಸೂಚಿಸಿ ಭಕ್ತರಿಗೆ ಅವಕಾಶ ನೀಡಲಾಗಿತ್ತು.
ತಲಕಾವೇರಿಯ ಕುಂಡಿಕೆಯಲ್ಲಿ ಸ್ನಾನ ಮಾಡಲು ಯಾರಿಗೂ ಅವಕಾಶ ನೀಡಲಾಗಿಲ್ಲ.ಸ್ವಯಂ ಸೇವಕರು ತೀರ್ಥ ವಿತರಿಸಿದರು.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮ ದತ್ತಿಗಳ ಇಲಾಖೆ, ಪೊಲೀಸ್ ಇಲಾಖೆ ಮತ್ತು ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದರು.
ರಜಾ ದಿನಗಳಿರುವುದರಿಂದ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿದ್ದ ಹಿನ್ನಲೆಯಲ್ಲಿ ಭಾಗಮಂಡಲದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಕಾಟಕೇರಿ ಬಳಿ ಏಕಮುಖ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಈ ಬಾರಿ ತಲಕಾವೇರಿಯಲ್ಲಿ ಸಂಜೆ 6 ಗಂಟೆಯ ನಂತರ ಪೂಜಾ ಕಾರ್ಯಗಳು ಇರುವುದಿಲ್ಲವೆಂದು ಆಡಳಿತ ಮಂಡಳಿ ತಿಳಿಸಿದೆ.
ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯ ನಿರ್ಮಾಣ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.