ಆದಷ್ಟು ಶೀಘ್ರದಲ್ಲಿ ಗ್ಯಾರಂಟಿ ಜಾರಿ ನಿಶ್ಚಿತ : CM ಸಿದ್ದರಾಮಯ್ಯ
Team Udayavani, May 28, 2023, 7:00 AM IST
ಬೆಂಗಳೂರು: ಈ ಚುನಾವಣೆಯಲ್ಲಿ ಜನ ನಮಗೆ ಸಂಪೂರ್ಣ ಬೆಂಬಲ ಕೊಟ್ಟಿರುವುದರಿಂದ ಅವರಿಗೆ ನೀಡಿರುವ ಭರವಸೆಯನ್ನು ಈಡೇರಿಸುತ್ತೇವೆ. ಆದಷ್ಟು ಶೀಘ್ರದಲ್ಲಿ ನಾವು ಕೊಟ್ಟ ಗ್ಯಾರಂಟಿ ಯೋಜನೆ ಜಾರಿ ಮಾಡುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮದ ಜತೆ ಮಾತನಾಡಿದ ಅವರು, ವಿರೋಧ ಪಕ್ಷಗಳು ತಾವು ಕೊಟ್ಟ ವಚನ ಈಡೇರಿಸಿಲ್ಲ. ನಾವು ಹಿಂದೆಯೂ ನಮ್ಮ ವಚನ ಈಡೇರಿಸಿದ್ದೇವೆ. ಈಗಲೂ ಈಡೇರಿಸುತ್ತೇವೆ. ಐದು ಗ್ಯಾರಂಟಿಗಳ ಕುರಿತು ಮುಂದಿನ ಸಚಿವ ಸಂಪುಟದಲ್ಲಿ ವಿವರಗಳನ್ನು ಮಂಡಿಸಲು ಸೂಚಿಸಲಾಗಿದೆ. ಈ ಕುರಿತು ಚರ್ಚಿಸಿ ಅನುಮೋದನೆ ನೀಡಿ ಶೀಘ್ರವೇ ಅವುಗಳನ್ನು ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು.
ಸಚಿವ ಸಂಪುಟದ ಎಲ್ಲ 34 ಸ್ಥಾನಗಳನ್ನು ಭರ್ತಿ ಮಾಡಲಾಗಿದ್ದು, ಆಡಳಿತಕ್ಕೆ ಹೊಸ ರೂಪ ಕೊಡುವ ತೀರ್ಮಾನ ಮಾಡಿದ್ದೇವೆ. ರಾಜ್ಯದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚಿಸಲಾಗಿದೆ. ಸಂಪುಟವು ಹೊಸ ಹಾಗೂ ಹಳೆ ಮುಖಗಳ ಸಮ್ಮಿಶ್ರಣವಾಗಿದೆ. ಮೊದಲ ಬಾರಿ ಗೆದ್ದವರನ್ನು ಮಂತ್ರಿ ಮಾಡಿಲ್ಲ. ಸರ್ಕಾರ ನಾವು ಕೊಟ್ಟಿರುವ ಭರವಸೆ ಈಡೇರಿಸಬೇಕು. ಜನ ಹೊಸ ಬದಲಾವಣೆ ಬಯಸಿದ್ದಾರೆ. ಅದರಿಂದ ಆಡಳಿತಕ್ಕೆ ಹೊಸ ರೂಪ ಕೊಡುವ ದೃಷ್ಟಿಯಿಂದ ಈ ಸಂಪುಟ ರಚಿಸಲಾಗಿದೆ ಎಂದು ತಿಳಿಸಿದರು.
ಕೊಡಗು, ಹಾವೇರಿ, ಹಾಸನ , ಚಿಕ್ಕಮಗಳೂರು ಮತ್ತಿತರ ಜಿಲ್ಲೆಗಳಿಗೆ ಪ್ರಾತಿನಿಧ್ಯ ಲಭಿಸಿಲ್ಲ. ಕೆಲವು ಮಾನದಂಡಗಳನ್ನು ಅನುಸರಿಸುವಾಗ ಕೆಲವು ಜಿಲ್ಲೆಗಳಿಗೆ ಪ್ರಾತಿನಿಧ್ಯ ದೊರೆತಿಲ್ಲ. ಉದಾಹರಣೆಗೆ ಕೊಡಗು ಜಿಲ್ಲೆಯಲ್ಲಿ ಇಬ್ಬರೂ ಮೊದಲ ಬಾರಿ ಶಾಸಕರಾಗಿದ್ದಾರೆ. ಹಾಗಾಗಿ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಲು ಸಾಧ್ಯವಾಗಿಲ್ಲ ಎಂದು ಹೇಳಿದರು.
ಪುಟ್ಟರಂಗಶೆಟ್ಟಿ ಅವರು ವಿಧಾನ ಸಭೆಯ ಉಪಾಧ್ಯಕ್ಷ ಹುದ್ದೆಯನ್ನು ಒಪ್ಪಿಕೊಂಡಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಅಸಮಾಧಾನ, ಸಮಾಧಾನ ಯಾವಾಗಲೂ ಇರುತ್ತದೆ. ಅಸಮಾಧಾನದಲ್ಲಿ ಸಮಾಧಾನವಿರುತ್ತದೆ. ಅವರೊಂದಿಗೆ ನಾನು ನಿನ್ನೆ ರಾತ್ರಿಯೇ ಮಾತನಾಡಿದ್ದೇನೆ. ಅವರು ಒಪ್ಪಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.