Congress ನೀಡಿದ್ದ ಗ್ಯಾರಂಟಿಗಳೇ ವಿಪಕ್ಷಗಳಿಗೆ ಅಸ್ತ್ರ


Team Udayavani, May 26, 2023, 8:05 AM IST

CONGRESS GUARENTEE

ವಿಧಾನಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸುವಂತೆ ಜೆಡಿಎಸ್‌ ಹಾಗೂ ಬಿಜೆಪಿ ನಾಯಕರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಗ್ಯಾರಂಟಿ ಯೋಜನೆ ಜಾರಿಗೆ ವಿಪಕ್ಷಗಳು ಒಗ್ಗೂಡಿವೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಡಾ| ಅಶ್ವತ್ಥ ನಾರಾಯಣ, ಸಂಸದ ಪ್ರತಾಪಸಿಂಹ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ ಮುಂತಾದವರು ಕಾಂಗ್ರೆಸ್‌ ಗ್ಯಾರಂಟಿಗಾಗಿ ಗಟ್ಟಿ ಧ್ವನಿ ಎತ್ತಿದ್ದಾರೆ.

ಅಭಿವೃದ್ಧಿ ರಥಕ್ಕೆ ಅಡ್ಡಿಪಡಿಸಿದರೆ ಯಾರಪ್ಪನನ್ನೂ ಕೇಳೆವು
ಶಿಗ್ಗಾವಿ: ಸರಕಾರವನ್ನು ಯಾರಧ್ದೋ ಒಂದು ಸಮುದಾಯಕ್ಕೆ ಮೀಸಲಾಗಲು ಬಿಡುವುದಿಲ್ಲ. ಇದು ಯಾವುದೋ ಒಂದು ಪಕ್ಷ ಹಾಗೂ ವ್ಯಕ್ತಿಯ ಸರಕಾರವಲ್ಲ. ರಾಜ್ಯದ ಅಭಿವೃದ್ಧಿ ರಥಕ್ಕೆ ಅಡ್ಡಿಪಡಿಸಿದರೆ ಯಾರಪ್ಪನನ್ನೂ ಕೇಳುವುದಿಲ್ಲ. ಜನರು ಮೆಚ್ಚುವ ರಾಜಕಾರಣ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪಟ್ಟಣದಲ್ಲಿ ಗುರುವಾರ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ ಹಾಗೂ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇವಲ ಆಡಳಿತ ಪಕ್ಷದ ಶಾಸಕರು ತೆರಿಗೆ ಕಟ್ಟುವುದಲ್ಲ. ರಾಜ್ಯದ ಪ್ರತಿಯೊಬ್ಬ ವ್ಯಕ್ತಿಯೂ ತೆರಿಗೆ ಕಟ್ಟುತ್ತಾನೆ. ಅಕ್ಕಿ, ವಿದ್ಯುತ್‌ ನನಗೂ, ನಿಮಗೂ ಸಿಗುತ್ತದೆ ಎಂದಿದ್ದರು. ಈಗ ಷರತ್ತು ಹಾಕುತ್ತಿದ್ದಾರೆ. ಈಗ ಅವರ ಬಣ್ಣ ಏನು ಎಂಬುದು ಗೊತ್ತಾಗುತ್ತಿದೆ. ಅದಕ್ಕೆ ಅಂದೇ ನಾನು ಹೇಳಿದ್ದೆ. ಮೇ 10ರ ವರೆಗೂ ಗ್ಯಾರಂಟಿ, ಆಮೇಲೆ ಗಳಗಂಟಿ ಅಂತಾ. ಈಗ ಅದು ಆರಂಭವಾಗಿದೆ. ಇನ್ನು ಸ್ವಲ್ಪ ದಿನದಲ್ಲಿ ಮಹಿಳೆಯರು ಕಾರ್ಡ್‌ ಹಿಡಿದುಕೊಂಡು ರಸ್ತೆಗೆ ಬರುತ್ತಾರೆ. ಆಮೇಲೆ ಗೊತ್ತಾಗು ತ್ತದೆ. ಆಸ್ಪತ್ರೆ, ರಸ್ತೆ, ನೀರಿನ ಅಭಿವೃದ್ಧಿ ಕೆಲಸ ನಿಲ್ಲಿಸಿದ್ದಾರೆ ಎಂದರು.

ಕಾಂಗ್ರೆಸ್‌ ಅಧಿ ಕಾರಕ್ಕೆ ಬಂದ ಬಳಿಕ ಮೊನ್ನೆ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್‌ ನೀಡಿದ್ದ ಎಲ್ಲ ಗ್ಯಾರಂಟಿಗಳಿಗೆ ಆದೇಶ ಮಾಡುತ್ತೇವೆ ಎಂದಿದ್ದರು. ಇವರು ಜನರಿಗೆ ಏನಾದರೂ ಮಾಡಲಿ ಎಂದು ನಾನು ಖುಷಿಯಾಗಿದ್ದೆ. ಆದರೆ ಸಂಪುಟ ಸಭೆ ಬಳಿಕ ಪತ್ರಕರ್ತರು ಪ್ರಶ್ನೆ ಕೇಳಿದರೆ, ತಡಬಡಿಸಿ ಹಿಂದಿನ ಇತಿಹಾಸ ಹೇಳಿ ಸಮಾಧಾನ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದರು.

ಕಾಂಗ್ರೆಸ್‌ನದ್ದು ರಿವರ್ಸ್‌ ಗೇರ್‌ ಸರಕಾರ
ಹುಬ್ಬಳ್ಳಿ: ಅಧಿಕಾರವಿದೆ ಎಂದು ಸ್ವೇಚ್ಛಾಚಾರವಾಗಿ ಎಲ್ಲವನ್ನೂ ಬದಲಾವಣೆ ಮಾಡುತ್ತೇನೆ ಎಂಬುದು ದುರಹಂಕಾರದ ಮಾತು. ಇದೊಂದು ರಿವರ್ಸ್‌ ಗೇರ್‌ ಸರಕಾರವಾಗಿದೆ. ಎಲ್ಲದರಲ್ಲೂ ಪುನರ್‌ ಪರಿಶೀಲನೆ ಮಾಡುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರವಿದೆ ಎಂದು ಬೇಡವಾದ್ದನ್ನು ಮಾಡಿದರೆ ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಹೋರಾಟ ಮಾಡುತ್ತೇವೆ. ಚುನಾವಣೆ ಸಂದರ್ಭದಲ್ಲಿ ಇದೊಂದು ರಿವರ್ಸ್‌ ಗೇರ್‌ ಸರಕಾರ ಎಂದು ಹೇಳಿದ್ದೆವು. ಅದು ಗ್ಯಾರಂಟಿ ಅನುಷ್ಠಾನ ವಿಚಾರದಲ್ಲಿ ನಿಜವಾಗುತ್ತಿದೆ ಎಂದು ಹೇಳಿದರು.

5 ತಿಂಗಳಲ್ಲಿ ರಾಜ್ಯ ರಾಜಕೀಯ ಬದಲು
ಮುಂದಿನ 5 ತಿಂಗಳಲ್ಲಿ ರಾಜ್ಯ ರಾಜಕಾರಣದ ಚಿತ್ರಣ ಬದಲಾಗಲಿದೆ. ಸರಕಾರ ಹೋಗುತ್ತಿರುವ ರೀತಿ ನೋಡಿದರೆ ದ್ವೇಷ ರಾಜಕಾರಣಕ್ಕೆ ಮುನ್ನುಡಿ ಬರೆದಂತಿದೆ ಎಂದು ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಅಷ್ಟು ಸುಲಭವಾಗಿ ಪರಿಗಣಿಸಬೇಡಿ. ಇವರು ಮತ್ತೆ ಅ ಧಿಕಾರಕ್ಕೆ ಬರುವುದಿಲ್ಲ ಎಂದುಕೊಂಡರೆ ಅದು ನಿಮ್ಮ ಭ್ರಮೆ. ಯಾವುದೇ ಹಂತಕ್ಕೂ, ಯಾವುದೇ ಮಟ್ಟಕ್ಕೂ ಬರುವುದಕ್ಕೆ ನಾನು ತಯಾರಿದ್ದೇನೆ. ನಾನು ಯಾವುದೇ ಭೇದ-ಭಾವ ಮಾಡುವುದಿಲ್ಲ ಎಂದರು. ನಮ್ಮ ಕಾರ್ಯಕರ್ತರ ಮೇಲೆ ಕೇಸ್‌ ಹಾಕಲು ಆರಂಭಿಸಿದ್ದಾರೆ. ಅವರು ನಿಷೇಧಿಸುವುದಿದ್ದರೆ ಅದು ಎಸ್‌ಡಿಪಿಐಯಿಂದ ಆರಂಭವಾಗಲಿ. ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ನಾವು ಸುಮ್ಮನೆ ಕುಳಿತಿಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಮುಂದಿನ ಲೋಕಸಭಾ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಸ್ಥಾನಗಳನ್ನು ಕರ್ನಾಟಕದಲ್ಲಿ ಗೆಲ್ಲುತ್ತೇವೆ. ಮೋದಿ ಮತ್ತೂಮ್ಮೆ ದೇಶದ ಪ್ರಧಾನಿ ಆಗಬೇಕಿದೆ ಎಂದರು.

ಬೊಮ್ಮಾಯಿ ಭಾವುಕ ನುಡಿ
ಕ್ಷೇತ್ರದ ಜನರ ಜತೆ ಕಾಲ ಕಳೆಯಲು ಅವಕಾಶ ಸಿಕ್ಕಿದೆ. ನಿಮ್ಮ ಜತೆ ಕಾಲ ಕಳೆಯುವುದಕ್ಕೆ ಆಗಿರಲಿಲ್ಲ. ಅದಕ್ಕೆ ದೇವರು ಸ್ವಲ್ಪ ವಿಶ್ರಾಂತಿ ಕೊಟ್ಟಿದ್ದಾನೆ. ಅಂತಹ ಶಕ್ತಿ ನಿಮ್ಮಲ್ಲಿದೆ. ಅಲ್ಲಿ ಬೇಡ, ಇಲ್ಲಿಗೆ ಬನ್ನಿ ಎಂದು ಕರೆಸಿಕೊಂಡಿದ್ದೀರಿ. ನಿಮಗೆ ಬೇಸರ ಆಗುವ ಹಾಗೆ ನಿಮ್ಮ ಊರು, ಕೇರಿಗಳಲ್ಲಿ ಓಡಾಡುತ್ತೇನೆ. ನಿಮ್ಮನ್ನು ನೀವು ಈ ಚುನಾವಣೆಯಲ್ಲಿ ಗೆಲ್ಲಿಸಿಕೊಂಡಿದ್ದೀರಿ ಎಂದು ಭಾವುಕರಾಗಿ ಬೊಮ್ಮಾಯಿ ಹೇಳಿದರು.

ಗ್ಯಾರಂಟಿಗಳೇ ನಮಗೆ ಅಸ್ತ್ರ: ಎಚ್ಡಿಕೆ
ಬೆಂಗಳೂರು: ಕಾಂಗ್ರೆಸ್‌ ಘೋಷಿಸಿರುವ ಐದು ಗ್ಯಾರಂಟಿಗಳನ್ನೇ ಅಸ್ತ್ರವಾಗಿಸಿಕೊಂಡು ಹೋರಾಟ ಮಾಡುವಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಜೆಡಿಎಸ್‌ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಪಕ್ಷದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಜನರಿಗೆ ಕೊಟ್ಟ ಭರವಸೆ ಈಡೇರಿಸುವಂತೆ ನಾವು ಹೋರಾಟ ಮಾಡಬೇಕಾಗಿದೆ. ಕಾಂಗ್ರೆಸ್‌ ಗ್ಯಾರಂಟಿಗಳಿಂದಲೇ ನಾವು ಸೋತಿದ್ದೇವೆ. ಈಗ ನುಡಿದಂತೆ ನಡೆಯದಿದ್ದರೆ ಅದನ್ನೇ ಅಸ್ತ್ರವಾಗಿಸಿಕೊಂಡು ಹೋರಾಟ ಮಾಡಬೇಕಾಗಿದೆ. ಸಂಪುಟ ಪುನಾರಚನೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಕಾದು ನೋಡೋಣ. ಅನಂತರ ಹೋರಾಟಕ್ಕೆ ಇಳಿಯೋಣ ಎಂದು ಕುಮಾರಸ್ವಾಮಿ ತಿಳಿಸಿದರು.

ಯಾಕೆ ಎಫ್‌ಐಆರ್‌ ದಾಖಲಿಸಿದ್ದೀರಿ?
ಕ್ಯಾಂಪಸ್‌ ಫ್ರಂಟ್‌, ಪಿಎಫ್‌ಐ, ಎಸ್‌ಡಿಪಿಐ ಕಾರ್ಯಕರ್ತರ ಮೇಲಿದ್ದ ಕೇಸು ರದ್ದು ಮಾಡುವ ನೀವು ನಮ್ಮ ಶಾಸಕರ ಮೇಲೆ ಯಾಕೆ ಎಫ್‌ಐಆರ್‌ ದಾಖಲಿಸಿದ್ದೀರಿ? ಎಂತಹ ಸರಕಾರ ನಿಮ್ಮದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್‌ ಸದಸ್ಯ ಎನ್‌. ರವಿಕುಮಾರ್‌ ಆಕ್ರೋಶ ಹೊರಹಾಕಿದ್ದಾರೆ. ಶಾಸಕ ಹರೀಶ್‌ ಪೂಂಜ, ಮಾಜಿ ಸಚಿವ ಡಾ| ಅಶ್ವತ್ಥನಾರಾಯಣ್‌ ಅವರ ವಿರುದ್ಧ ಯಾವ ಕಾರಣಕ್ಕೆ ಎಫ್‌ಐಆರ್‌ ಮಾಡಿದ್ದೀರಿ ಎಂದು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳನ್ನು ಪ್ರಶ್ನಿಸಲಾಗುವುದು ಎಂದು ತಿಳಿಸಿದರು.

ಪ್ರಿಯಾಂಕ್‌ ಖರ್ಗೆ ಅವರಿನ್ನೂ ಮಗು ಇರಬೇಕು. ಆರೆಸ್ಸೆಸ್‌ ಏನು ಮಾಡುತ್ತಿದೆ ಎಂದು ಅಧ್ಯಯನ ಮಾಡಬೇಕು. ಆರೆಸ್ಸೆಸ್‌ ಇರುವ ಕಾರಣ ಪ್ರಪಂಚದಲ್ಲಿ ಭಾರತದ ಗೌರವ ಹೆಚ್ಚಾಗಿದೆ. ಇಡೀ ಪ್ರಪಂಚಕ್ಕೆ ಆರೆಸ್ಸೆಸ್‌ ಕುರಿತು ಗೌರವ ಇದೆ. ಅವರೂ ಕೂಪ ಮಂಡೂಕರಾಗಿ ಆರೆಸ್ಸೆಸ್‌ ಕುರಿತು ಅಧ್ಯಯನ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ದ್ವೇಷ ಬಿಟ್ಟು ಒಳ್ಳೆ ಕೆಲಸ ಮಾಡಿ: ಅಶ್ವತ್ಥನಾರಾಯಣ
ಬೆಂಗಳೂರು : ಕಾಂಗ್ರೆಸ್‌ ಸರಕಾರ ತಮ್ಮ ಮೇಲೆ ಈಗ ಎಫ್‌ಐಆರ್‌ ದಾಖಲಿಸಿರುವುದರ ವಿರುದ್ಧ ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟ ನಡೆಸಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ, ಶಾಸಕ ಡಾ| ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ ಫೆಬ್ರವರಿಯಲ್ಲಿ ನೀಡಿದ್ದ ಹೇಳಿಕೆ ಸಂಬಂಧವಾಗಿ ನಾನು ಈಗಾಗಲೇ ಸದನದಲ್ಲೇ ಸ್ಪಷ್ಟನೆ ನೀಡಿದ್ದೇನೆ. ಈ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆಂದೂ ಹೇಳಿದ್ದೇನೆ. ಇಷ್ಟಾದರೂ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ ನಾಲ್ಕು ತಿಂಗಳ ಹಿಂದಿನ ಹೇಳಿಕೆಯನ್ನು ನೆಪವಾಗಿಸಿಕೊಂಡು ಎಫ್‌ಐಆರ್‌ ದಾಖಲಾಗುವಂತೆ ಮಾಡಿದೆ. ಇದನ್ನು ಕಾನೂನಾತ್ಮಕವಾಗಿಯೇ ಎದುರಿಸುತ್ತೇನೆ ಎಂದು ಹೇಳಿದರು.

ನನಗೇನೂ ಸಿದ್ದರಾಮಯ್ಯ ಅವರ ಬಗ್ಗೆ ವೈಯಕ್ತಿಕ ದ್ವೇಷವಿಲ್ಲ. ಅವರ ಬಗ್ಗೆ ಗೌರವ ಇದೆ. ಆದರೆ ಸೈದ್ಧಾಂತಿಕವಾಗಿ ನಮ್ಮ ಹಾಗೂ ಅವರ ಪಕ್ಷಗಳ ನಡುವೆ ವ್ಯತ್ಯಾಸಗಳಿವೆ. ಈ ಹಿನ್ನೆಲೆಯಲ್ಲಿ ನಾನು ಮಂಡ್ಯದಲ್ಲಿ ಚುನಾವಣ ಪ್ರಚಾರದ ವೇಳೆ ಹೇಳಿಕೆ ನೀಡಿದ್ದನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ. ನನ್ನ ಉದ್ದೇಶ ಅದಾಗಿರಲಿಲ್ಲ ಎಂದು ತಿಳಿಸಿದರು.
ಜನ ಕಾಂಗ್ರೆಸ್ಸಿಗೆ ಅಧಿಕಾರ ಕೊಟ್ಟಿದ್ದಾರೆ. ಅದನ್ನು ತಿಳಿದು ಸಮಯ ಮತ್ತು ಶ್ರಮವನ್ನು ಜನಪರ ಕೆಲಸಗಳಿಗೆ ಬಳಸಬೇಕು. ಅದಕ್ಕೆ ಬದಲಾಗಿ ದ್ವೇಷದ ರಾಜಕಾರಣ ಮಾಡುವುದು ಒಳ್ಳೆಯದಲ್ಲ. ಎರಡೇ ವಾರದಲ್ಲಿ ಕಾಂಗ್ರೆಸಿಗೆ ಅಧಿಕಾರ ನೆತ್ತಿಗೇರಿರುವುದನ್ನು ಇದು ತೋರಿಸುತ್ತದೆ ಎಂದು ಟೀಕಿಸಿದರು.

ಟಾಪ್ ನ್ಯೂಸ್

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.