ವಿಜಯಪುರ ಶತಕದತ್ತ ಧಾವಿಸುತ್ತಿರುವ ಸೋಂಕಿತರು
Team Udayavani, May 30, 2020, 6:37 PM IST
ವಿಜಯಪುರ : ಶನಿವಾರ ಪ್ರಕಟವಾದ ಕೋವಿಡ್ ಆರೋಗ್ಯ ವರದಿಯಲ್ಲಿ ವಿಜಯಪುರ ಜಿಲ್ಲೆಯ 11 ಜನರಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 96 ಕ್ಕೆ ಏರಿದ್ದು, ಶತಕದತ್ತ ಮುನ್ನುಗ್ಗುತ್ತಿದೆ.
96 ಸೊಂಕಿತರಲ್ಲಿ ಶನಿವಾರ ಓರ್ವ ವ್ಯಕ್ತಿ ಸೋಂಕು ಮುಕ್ತವಾಗಿ ಮನೆಗೆ ತೆರಳುವುದರೊಂದಿಗೆ 54 ಸೋಂಕಿತರು ರೋಗಮುಕ್ತರಾಗಿ ಮನೆಗೆ ಮರಳಿದ್ದಾರೆ. ಸೋಂಕಿತ 37 ರೋಗಿಗಳಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಸೋಂಕಿತರಲ್ಲಿ 5 ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ಈಚಲಕರಂಜಿ ಪಟ್ಟಣಕ್ಕೆ ಅಗಲಿದ ಬಂಧುವೊಬ್ಬರ ಅಂತ್ಯ ಸಂಸ್ಕಾರಕ್ಜೆ ಹೋಗಿ ಬಂದಿದ್ದ ವೃದ್ಧೆಯಲ್ಲಿ ಸೋಂಕು ದೃಢಪಡುವ ಮೂಲಕ ವಿಜಯಪುರ ಜಿಲ್ಲೆಯಲ್ಲಿ ಏಪ್ರಿಲ್ 12 ರಂದು ಮೊದಲ ಪ್ರಕರಣ ದಾಖಲಾಗಿತ್ತು.
ಇದಾದ ಬಳಿಕ ವೃದ್ದೆಯ ಕುಟುಂಬ ಹಾಗೂ ಆಕೆಯ ಸಂಪರ್ಕದಲ್ಲಿದ್ದ ಹಲವರಿಗೆ ಸೋಂಕು ತಗುಲಿತ್ತು. ಇದಲ್ಲದೆ ಮಹಾರಾಷ್ಟ್ರ ಪುಣೆ ನಗರದಿಂದ ತಂದೆಯ ಶವಸಂಸ್ಕಾರಕ್ಕೆ ಬಂದಿದ್ದ ಮಹಿಳೆಯ ಸಂಪರ್ಕ ದಿಂದ ಬಾಲಕನೊಬ್ಬನ ಮೂಲಕವೂ ಹಲವರಿಗೆ ಸೋಂಕು ಹರಡಿತ್ತು.
ಇದಾದ ಬಳಿಕ ಜಿಲ್ಲಾಡಳಿತ ರಾಜ್ಯಕ್ಕೆ ಮಾದರಿ ಆಗಬಹುದಾದ ಹಲವು ಕಠಿಣ ಕ್ರಮಗಳ ಮೂಲಕ ಸೋಂಕು ಹರಡದಂತೆ ತೀವ್ರ ನಿಗಾ ಇರಿಸಿದ್ದರು. ಹೀಗಾಗಿ ನಗರದ ನಿರ್ಧಿಷ್ಟ ಪ್ರದೇಶದ ಹೊರತಾಗಿ ಇತರೆಡೆ ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಸೋಂಕಿತರು ಮಾತ್ರ ಪತ್ತೆಯಾಗಿದ್ದರು. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಗ್ರಹಕ್ಕೆ ಬಂದಿತ್ತು. ಈ ಹಂತದಲ್ಲಿ ಮಹಾರಾಷ್ಟ್ರ ರಾಜ್ಯಕ್ಕೆ ವಲಸೆ ಹೋಗಿದ್ದವರು ಜಿಲ್ಲೆಗೆ ಮರಳುತ್ತಲೇ ಸೋಂಕಿತರ ಸಂಖ್ಯೆ ಅರ್ಧ ಶತಕ ದಾಟಿ, ಇದೀಗ ಶತಕದ ಗಡಿಗೆ ಬಂದು ನಿಂತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.