Karnataka: ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿ ವಿಚಾರ ಮತ್ತೆ ಮುನ್ನೆಲೆಗೆ
Team Udayavani, Jul 9, 2023, 7:29 AM IST
ಬೆಂಗಳೂರು: ರಾಜ್ಯದಲ್ಲಿ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ವೇಳೆ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ರಚಿಸಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸಿದ್ದರಾಮಯ್ಯ ಅವರು ಈಗ ಆ ಮಸೂದೆಗೆ ಮತ್ತೆ ಜೀವ ನೀಡುವುದಾಗಿ ಹೇಳಿರುವುದು ಕುತೂಹಲ ಮೂಡಿಸಿದೆ.
ರವಿವಾರ ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರ ಬೆಂಗಳೂರಿನ ದೇವ ರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ “ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದ’ದಲ್ಲಿ ಸಭಿಕರ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು.
ಹಿರಿಯ ಸಾಹಿತಿ ಜಿ.ರಾಮಕೃಷ್ಣ ಅವರು, ಈ ಹಿಂದೆ ನಿಮ್ಮದೇ ಸರಕಾರ ರಾಜ್ಯದಲ್ಲಿ ಮೂಢ ನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೆ ಮುಂದಾ ಗಿತ್ತು. ಆದರೆ ನಿಯಮಾವಳಿ ರೂಪಿಸಲಾಗದ ಹಿನ್ನೆಲೆಯಲ್ಲಿ ಜಾರಿಯಾಗಲೇ ಇಲ್ಲ. ಮತ್ತೆ ಆ ಕಾಯ್ದೆಗೆ ನಿಯಮಾವಳಿ ರಚಿಸಿ ಜಾರಿಗೆ ತರು ತ್ತೀರಾ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಈ ಹಿಂದೆ ನಮ್ಮ ಸರಕಾರವೇ ಆಡಳಿತ ಕೊನೆಯ ಅವಧಿಯಲ್ಲಿ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೆ ಮುಂದಾಗಿತ್ತು. ಆದರೆ ನಿಯಮಾವಳಿಗಳನ್ನು ರೂಪಿಸಲು ಸಾಧ್ಯವಾಗಿರಲಿಲ್ಲ. ಈಗ ಮತ್ತೆ ನಮ್ಮ ಸರಕಾರ ಅಧಿಕಾರದಲ್ಲಿದೆ. ಹಿರಿಯರಾದ ಜಿ.ರಾಮಕೃಷ್ಣ ಅವರ ಸಲಹೆ ಪರಿಶೀಲಿಸಿ ಮೂಢನಂಬಿಕ ಪ್ರತಿಬಂಧಕ ಕಾಯ್ದೆಗೆ ನಿಯಮ ರೂಪಿಸಿ ಜಾರಿಗೊಳಿಸುವ ಭರವಸೆ ನೀಡಿದರು.
ಪಠ್ಯಗಳಲ್ಲಿ ವೈಚಾರಿಕತೆ: ಶಿಕ್ಷಣದಲ್ಲಿ ವೈಚಾರಿ ಕೆಯತೆಯನ್ನು ತರಬೇಕಾಗಿದೆ. ಪಠ್ಯಗಳಲ್ಲಿ ವೈಚಾ ರಿಕತೆ ತರದೆ ಹೋದರೆ ಜಾತಿ, ವರ್ಗ ವ್ಯವಸ್ಥೆ ಹೋಗಲು ಸಾಧ್ಯವಿಲ್ಲ. ಆ ಹಿನ್ನೆಲೆಯಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ವೈಚಾರಿಕತೆ ಪ್ರಜ್ಞೆಯನ್ನು ಸರಕಾರ ಜಾರಿಗೊಳಿಸಲು ಬದ್ಧವಾ ಗಿದೆ. ಬಿಜೆಪಿ ಸರಕಾರದ ಆಡಳಿತದಲ್ಲಿ ಪಠ್ಯಗಳನ್ನು ತಿರುಚಲಾಗಿತ್ತು. ಆ ಪಾಠಗಳನ್ನು ಮಕ್ಕಳಿಗೆ ಬೋಧಿಸದಂತೆ ತಡೆಯಲಾಗಿದೆ. ಪಠ್ಯ ರಚನೆ ಸಂಬಂಧ ಸರಕಾರ ಸಮಿತಿ ರಚಿಸಲಿದೆ ಎಂದರು.
ವಿದ್ಯಾವಂತರು ಜಾತಿ ಮತ್ತು ಮೌಡ್ಯವಂತರಾ ಗು ತ್ತಿರುವುದು ಬೇಸರದ ಸಂಗತಿ. ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧ ಗೊಳ್ಳುವ ನಿಟ್ಟಿನಲ್ಲಿ ನಮ್ಮ ಸರಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿ ದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ ಎಂದು ಹೇಳಿದರು.
ಕರ್ನಾಟಕ ಭಾಷಾ ನೀತಿ ಬಗ್ಗೆ ಸಂಪುಟದಲ್ಲಿ ಚರ್ಚೆ
ಕರ್ನಾಟಕ ಭಾಷಾ ನೀತಿ ಇನ್ನೂ ಆಗಿಲ್ಲ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಮುನ್ನಡೆಯಲಾಗುವುದು. ವಿವಿಧ ಕ್ಷೇತ್ರದ ಪರಿಣಿತರೊಂದಿಗೆ, ಸಾಹಿತಿಗಳೊಂದಿಗೆ ಹಾಗೂ ವಿಚಾರವಾದಿಗ ಳೊಂದಿಗೆ ಚರ್ಚಿಸಿ ಕರ್ನಾಟಕ ಭಾಷಾ ನೀತಿ ಜಾರಿ ಮಾಡುವ ಪ್ರಯತ್ನ ನಡೆಯಲಿದೆ. ಸಾಂಸ್ಕೃತಿಕ ನೀತಿ ಬಗ್ಗೆ ಈಗಾಗಲೇ ಬರಗೂರು ರಾಮಚಂದ್ರಪ್ಪ ಸಮಿತಿ ವರದಿ ನೀಡಿದೆ. ಆ ಬಗ್ಗೆ ಪರಿಶೀಲಿಸಿ ಸರಕಾರ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯ ಹೇಳಿದರು. ದುಡಿಯುವ ಮಹಿಳೆಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಮುಟ್ಟಿನ ರಜೆ ಘೋಷಣೆ ಮಾಡಲು ಸರಕಾರಕ್ಕೆ ಸಾಧ್ಯವೇ ಎಂಬ ಚಿಕ್ಕಮಗಳೂರು ಮೂಲದ ವಿದ್ಯಾರ್ಥಿನಿ ನಳಿನಿ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಪರಿಶೀಲಿಸಿ ಯೋಗ್ಯ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಹೊರಗುತ್ತಿಗೆ ಕ್ಷೇತ್ರದಲ್ಲಿ ಮೀಸಲಾತಿ
ರಾಜ್ಯದಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನಾವು ಪ್ರಣಾಳಿಕೆಯಲ್ಲಿ ಹೇಳಿದ್ದೆವು. ರಾಜ್ಯದಲ್ಲಿ 2.3 ಲಕ್ಷ ಹುದ್ದೆಗಳು ಖಾಲಿ ಇವೆ. ಶಿಕ್ಷಣ, ಪೊಲೀಸ್ ಮತ್ತು ಆರೋಗ್ಯಕ್ಷೇತ್ರದಲ್ಲಿ ಹೆಚ್ಚಿನ ಹುದ್ದೆಗಳು ಖಾಲಿಯಿದ್ದು ಹಂತ ಹಂತವಾಗಿ ಇವುಗಳನ್ನು ಭರ್ತಿ ಮಾಡಲಾಗುವುದು. ಜತೆಗೆ 75 ಸಾವಿರಕ್ಕೂ ಅಧಿಕ ಹುದ್ದೆಗಳಲ್ಲಿ ಹೊರಗುತ್ತಿಗೆ ನೌಕರರು ಕೆಲಸ ನಿರ್ವಹಿಸುತ್ತಿದ್ದಾರೆ. ಆ ಉದ್ಯೋಗಿಗಳಿಗೂ ಸಾಮಾಜಿಕ ನ್ಯಾಯ ಕೊಡುವ ನಿಟ್ಟಿನಲ್ಲಿ ಹೊರಗುತ್ತಿಗೆ ಕ್ಷೇತ್ರದಲ್ಲೂ ಮೀಸಲಾತಿ ತರುವ ಬಗ್ಗೆ ಸರಕಾರ ಆಲೋಚನೆ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.