ಮದ್ಯ ಸೇವಿಸಿ ಮನವಿ ನೀಡಲು ಬಂದಿದ್ದ ಪ್ರಾಂಶುಪಾಲರ ನಶೆ ಇಳಿಸಿದ ಶಾಸಕ!
Team Udayavani, Jun 27, 2023, 7:31 AM IST
ಚಿಕ್ಕಮಗಳೂರು: ಮದ್ಯಪಾನ ಮಾಡಿ ಮನವಿ ನೀಡಲು ಬಂದಿದ್ದ ಪ್ರಾಂಶುಪಾಲರೊಬ್ಬರನ್ನು ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ನಡುರಸ್ತೆಯಲ್ಲೇ ತರಾಟೆಗೆ ತೆಗೆದುಕೊಂಡು ಆಸ್ಪತ್ರೆಗೆ ಕಳುಹಿಸಿದ ಘಟನೆ ನರಸಿಂಹರಾಜಪುರ ತಾಲೂಕಿನ ಸಿಂಸ ಗ್ರಾಮದಲ್ಲಿ ನಡೆದಿದೆ. ನರಸಿಂಹರಾಜಪುರ ತಾಲೂಕಿನ ಸಿಂಸ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ಲೋಕನಾಯಕ್ ಅವರು ವಸತಿ ಶಾಲೆ ಸಮಸ್ಯೆಗಳ ಬಗ್ಗೆ ಶಾಸಕ ಟಿ.ಡಿ.ರಾಜೇಗೌಡ ಅವರಿಗೆ ಮನವಿ ನೀಡಲು ಆಗಮಿಸಿದ್ದರು.
ಈ ವೇಳೆ ಪ್ರಾಂಶುಪಾಲರು ಮದ್ಯಪಾನ ಮಾಡಿರುವುದನ್ನು ಗಮನಿಸಿದ ಶಾಸಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸರನ್ನು ಕರೆಸಿ ಸರಕಾರಿ ಆಸ್ಪತ್ರೆಗೆ ಕಳುಹಿಸಿ ತಪಾಸಣೆ ನಡೆಸಿದರು. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 6ರಿಂದ 10ನೇ ತರಗತಿವರೆಗೆ 300 ಜನ ಬಾಲಕಿಯರಿದ್ದಾರೆ. ವಾರ್ಡನ್ ಹಾಗೂ ಪ್ರಾಂಶುಪಾಲ ಹುದ್ದೆಯನ್ನು ಲೋಕನಾಯಕ್ ಅವರೇ ನಿರ್ವಹಿಸುತ್ತಿದ್ದಾರೆ.
ಇಂತಹ ಪ್ರಿನ್ಸಿಪಾಲ್ ಇದ್ದರೆ ಹೆಣ್ಮಕ್ಕಳ ಗತಿ ಏನಾದೀತು ಎಂದು ಶಾಸಕರು ಆತಂಕ ವ್ಯಕ್ತಪಡಿಸಿದ್ದು, ಪ್ರಾಂಶುಪಾಲರನ್ನು ಕೂಡಲೇ ಅಮಾನತು ಮಾಡುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿ ಕಾರಿಗಳಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.