ಮುಂದಿನ 1 ತಿಂಗಳು ನಿರ್ಣಾಯಕ : ಕೊರೊನಾ ಸ್ಥಿತಿ ಬಗ್ಗೆ ಕೇಂದ್ರದ ಎಚ್ಚರಿಕೆ
Team Udayavani, Apr 7, 2021, 7:05 AM IST
ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಪರಿಸ್ಥಿತಿ ಗಂಭೀರವಾಗಿದೆ ಮತ್ತು ಮುಂದಿನ 1 ತಿಂಗಳ ಅವಧಿ ಪ್ರಮುಖವಾದದ್ದು ಎಂದು ಕೇಂದ್ರ ಸರಕಾರ ಹೇಳಿದೆ. ಮಂಗಳವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮತ್ತು ನೀತಿ ಆಯೋಗದ ಸದಸ್ಯ ಕಾರ್ಯದರ್ಶಿ ಡಾ| ವಿ.ಕೆ.ಪೌಲ್ ಮೊದಲ ಅವ ಧಿಯ ಸೋಂಕಿಗಿಂತ 2ನೇ ಅವಧಿಯಲ್ಲಿ ಹೆಚ್ಚು ವ್ಯಾಪಕವಾಗಿ ಹಬ್ಬುತ್ತಿದೆ ಎಂದು ಹೇಳಿದ್ದಾರೆ. ಸೋಂಕಿನ ನಿಯಂತ್ರಣದಲ್ಲಿ ಜನರು ಸ್ವಇಚ್ಛೆಯಿಂದ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.
3-4 ದಿನ ಲಾಕ್‌ಡೌನ್ ಮಾಡಬಹುದೇ?
ಗುಜರಾತ್‌ನಲ್ಲಿ ಕೊರೊನಾ ಸ್ಥಿತಿ ಕೈಮೀರುತ್ತಿರುವ ಹಿನ್ನೆಲೆಯಲ್ಲಿ 3-4 ದಿನ ಲಾಕ್‌ಡೌನ್ ಅಥವಾ ಕರ್ಫ್ಯೂ ಜಾರಿ ಮಾಡಲು ಸಾಧ್ಯವಿ ಲ್ಲವೇ ಎಂದು ಹೈಕೋರ್ಟ್ ಪ್ರಶ್ನಿಸಿದೆ. ಅರ್ಜಿಯೊಂದರ ವಿಚಾ ರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ನ್ಯಾಯಪೀಠ ಸೋಂಕು ನಿಯಂತ್ರಣಕ್ಕೆ ಇಂಥ ಕ್ರಮ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟಿತು. ಗುಜ ರಾತ್ ನಲ್ಲಿ ಎಲ್ಲ ರೀತಿಯ ಸಾರ್ವಜನಿಕ ಕಾರ್ಯಕ್ರಮ ಗಳನ್ನು ಸೋಂಕು ನಿಯಂತ್ರಣ ಆಗುವವರೆಗೆ ನಿಷೇಧಿಸ ಬೇಕು ಎಂದು ಮುಖ್ಯ ನ್ಯಾಯ ಮೂರ್ತಿ ಅಭಿಪ್ರಾಯ ಪಟ್ಟರು.
ಪ್ರಧಾನಿಗೆ ಸಿಎಂ ಉದ್ಧವ್ ಪತ್ರ
ಮಹಾರಾಷ್ಟ್ರದಲ್ಲಿ 25 ವರ್ಷಕ್ಕಿಂತ ಮೇಲ್ಪಟ್ಟ ವರಿಗೆ ಲಸಿಕೆ ನೀಡುವ ಬಗ್ಗೆ ಅನುಮತಿ ನೀಡಬೇಕು. ಹೀಗೆಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಈ ಕ್ರಮದಿಂದಾಗಿ ಯುವ ಜನತೆಯನ್ನು ಸೋಂಕಿನಿಂದ ರಕ್ಷಿಸಿದಂತಾ ಗುತ್ತದೆ ಎಂದು ಹೇಳಿದ್ದಾರೆ. ಈ ಮನವಿಯನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ.
18 ಮೇಲ್ಪಟ್ಟ ಎಲ್ಲರಿಗೂ ಲಸಿಕೆ: ಐಎಂಎ ಮನವಿ
18 ವರ್ಷ ದಾಟಿದ ಎಲ್ಲರಿಗೂ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಅವಕಾಶ ನೀಡಬೇಕು ಎಂಬುದಾಗಿ ಐಎಂಎ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದೆ. ಜತೆಗೆ, ಸಾರ್ವಜನಿಕ ಸ್ಥಳಗಳನ್ನು ಪ್ರವೇಶಿಸಲು ಲಸಿಕೆ ಹಾಕಿಸಿಕೊಂಡಿರುವ ಪ್ರಮಾಣಪತ್ರ ಕಡ್ಡಾಯಗೊಳಿಸ ಬೇಕು. ಲಸಿಕೆ ಹಾಕಿಸುವುದನ್ನು ಯುದ್ದೋಪಾದಿಯಲ್ಲಿ ನಡೆಸಬೇಕು ಎಂದು ಐಎಂಎಯ ರಾಷ್ಟ್ರೀಯ ಅಧ್ಯಕ್ಷ ಡಾ| ಜೆ.ಎ. ಜಯಲಾಲ್ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಲಸಿಕೆ ಹಾಕಿಕೊಳ್ಳಿ: ಕೇಂದ್ರ ಸೂಚನೆ
45 ವರ್ಷಕ್ಕಿಂತ ಮೇಲ್ಪಟ್ಟ ಉದ್ಯೋಗಿಗಳು ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು. ಹೀಗೆಂದು ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಸೋಂಕು ಹರಡುವಿಕೆ ತಡೆಯಲು ನೆರವಾಗುವಂತೆ ಸೂಚಿಸಿದೆ. ಇದರ ಜತೆಗೆ ಲಸಿಕೆ ಹಾಕಿಸಿಕೊಂಡ ಬಳಿಕ ಮಾಸ್ಕ್ ಧರಿಸುವುದು, ಕೈಗಳನ್ನು ತೊಳೆಯುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸು ವಂತೆಯೂ ತಿಳಿಸಿದೆ.
96,982 ಕೇಸು ದಾಖಲು: ಸೋಮವಾರದಿಂದ ಮಂಗಳವಾರದ ಅವಧಿಯಲ್ಲಿ ದೇಶದಲ್ಲಿ 96,982 ಹೊಸ ಕೇಸುಗಳು ಮತ್ತು 446 ಮಂದಿ ಸೋಂಕಿನಿಂದ ಜೀವ ಕಳೆದುಕೊಂಡಿದ್ದಾರೆ. ಸಕ್ರಿಯ ಕೇಸುಗಳ ಸಂಖ್ಯೆ 7,88,223 ಆಗಿದೆ. ಚೇತರಿಕೆ ಪ್ರಮಾಣ ಶೇ.92.48ಕ್ಕೆ ಕುಸಿದಿದೆ.
ಬಾಲಿವುಡ್ ನಟಿ ಕತ್ರೀನಾಗೆ ಸೋಂಕು
ಬಾಲಿವುಡ್ ನಟಿ ಕತ್ರೀನಾ ಕೈಫ್ (37)ಗೆ ಸೋಂಕು ದೃಢಪಟ್ಟಿದೆ. ಹೀಗಾಗಿ ಅವರು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ಅವರು ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಕಿರುತೆರೆ ಹಾಸ್ಯ ನಟ ಕುನಾಲ್ ಕಾಮ್ರಾ ಮತ್ತು ಕುಟುಂಬ ಸದಸ್ಯರಿಗೆ ಸೋಂಕು ದೃಢಪಟ್ಟಿದ್ದು, ಕ್ವಾರಂಟೈನ್‌ನಲ್ಲಿ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.