ನಾರಾಯಣ ಗುರುಗಳನ್ನು ಅವಮಾನಿಸಿದ್ದಕ್ಕೆ ಬಿಜೆಪಿ ಕ್ಷಮೆ ಯಾಚಿಸಲಿ : ಸಿದ್ದರಾಮಯ್ಯ ಕಿಡಿ
ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಪ್ರಾಧಾನ್ಯ ಕೊಟ್ಟು ಅವಕಾಶ ನೀಡಬೇಕು
Team Udayavani, Jan 16, 2022, 4:19 PM IST
ಬೆಂಗಳೂರು : ಈ ಬಾರಿಯ ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅವಕಾಶ ನಿರಾಕರಿಸಿರುವ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರ ಸಮಾಜ ಸುಧಾರಕನನ್ನು ಅವಮಾನಿಸಿದ ಕಾರಣಕ್ಕೆ ದೇಶದ ಜನರ ಕ್ಷಮೆ ಯಾಚಿಸಿ, ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ತಳಸಮುದಾಯದ ಮಹಾಪುರುಷರ ಬಗ್ಗೆ ಬಿಜೆಪಿ ಪಕ್ಷ ಮತ್ತು ಕೇಂದ್ರ ಸರ್ಕಾರಕ್ಕೆ ಇರುವ ಪೂರ್ವಗ್ರಹ ಮತ್ತು ತಿರಸ್ಕಾರಕ್ಕೆ ಸಾಕ್ಷಿ.ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಯಾವ ಕಾರಣಕ್ಕಾಗಿ ಅವಕಾಶ ನಿರಾಕರಿಸಲಾಗಿದೆ? ನಾರಾಯಣ ಗುರುಗಳು ಹಿಂದೂ ಧರ್ಮಕ್ಕೆ ಸೇರಿದವರಲ್ಲವೇ?
ಅಂತಹ ಅಭಿಪ್ರಾಯವನ್ನು ಬಿಜೆಪಿ ಪಕ್ಷ ಹೊಂದಿದ್ದರೆ ಹಾಗೆಂದು ಮುಕ್ತವಾಗಿ ಹೇಳುವ ಧೈರ್ಯ ತೋರಲಿ ಎಂದಿದ್ದಾರೆ.
ಹಿಂದೂ ಧರ್ಮದ ಸುಧಾರಕ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಅವಕಾಶ ನಿರಾಕರಿಸಿ ಅವಮಾನಿಸಿರುವುದು ‘ಹಿಂದು ಹೃದಯ ಸಾಮ್ರಾಟ’ ಎಂದು ಕರೆಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ಇನ್ನೂ ಬಂದಿಲ್ಲವೇ? ಶತಮಾನದ ಹಿಂದೆಯೇ ಅಸ್ಪೃಶ್ಯತೆ ಮತ್ತು ಪುರೋಹಿತಷಾಹಿ ವ್ಯವಸ್ಥೆ ವಿರುದ್ದ ಸಿಡಿದೆದ್ದು ಹಿಂದೂ ಧರ್ಮದ ಸುಧಾರಣೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದ ನಾರಾಯಣ ಗುರುಗಳಿಗೆ ಅವಮಾನಿಸಿರುವ ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.
ತಮ್ಮ ಮೂಗಿನಡಿಯಲ್ಲಿಯೇ ನಾರಾಯಣ ಗುರುಗಳಿಗೆ ಮಾಡಿರುವ ಅವಮಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇನ್ನೂ ಪ್ರತಿಕ್ರಿಯಿಸದೆ ಇರುವುದು ಆಶ್ಚರ್ಯಕರ.ಇದನ್ನು ಹೇಗೆ ಅರ್ಥೈಸಬೇಕು? ಈ ಅವಮಾನಕ್ಕೆ ಸಹಮತ ಇದೆಯೆಂದೇ? ನಾನು ಮುಖ್ಯಮಂತ್ರಿಯಾಗಿದ್ದಾಗ ನಾರಾಯಣ ಗುರುಗಳ ಜಯಂತಿಯನ್ನು ರಾಜ್ಯ ಸರ್ಕಾರವೇ ಅಧಿಕೃತವಾಗಿ ಆಚರಿಸಬೇಕೆಂಬ ನಿರ್ಧಾರ ಕೈಗೊಂಡೆ.ಇದರಿಂದಾಗಿ ಇಂದು ರಾಜ್ಯದ ಮೂಲೆಮೂಲೆಗೆ ಗುರುಗಳ ಚಿಂತನೆಯ ಸಂದೇಶ ತಲುಪುತ್ತಿದೆ ಎಂಬ ಹೆಮ್ಮೆ ಮತ್ತು ತೃಪ್ತಿ ನನ್ನದು.ನಾರಾಯಣ ಗುರುಗಳಿಗೆ ಮಾಡಿರುವ ಅವಮಾನಕ್ಕಾಗಿ ಕೇಂದ್ರ ಸರ್ಕಾರ ದೇಶದ ಕ್ಷಮೆ ಕೇಳಬೇಕು.ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಪ್ರಾಧಾನ್ಯ ಕೊಟ್ಟು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.