ಕೇಂದ್ರ-ರಾಜ್ಯ ನಾಯಕರ ನಡುವೆ ಇನ್ನೂ ಮುಗಿಯದ ಅಕ್ಕಿ ಜಗಳ
ಅಕ್ಕಿ ವಿಚಾರಕ್ಕೆ ಕಾಂಗ್ರೆಸ್ -ಬಿಜೆಪಿ ನಡುವೆ ಮುಂದುವರಿದ ವಾಕ್ಸಮರ
Team Udayavani, Jun 30, 2023, 7:42 AM IST
ಹೊಸದಿಲ್ಲಿ: ಅನ್ನಭಾಗ್ಯ ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಜಗಳ ಮತ್ತಷ್ಟು ಜೋರಾಗಿದೆ.
ದಿಲ್ಲಿಯಲ್ಲಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಾಕ್ಸಮರ ನಡೆಸಿದ್ದಾರೆ. ಕೇಂದ್ರದಲ್ಲಿನ ಪ್ರಧಾನಿ ನರೇಂದ್ರ ಮೋದಿ ಸರಕಾರವು ಪಕ್ಷಪಾತ ಧೋರಣೆ ಮತ್ತು ಸಣ್ಣತನದಿಂದಾಗಿ ಕರ್ನಾಟಕಕ್ಕೆ ಅಕ್ಕಿ ಕೊಡಲಿಲ್ಲ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ, ಜನರಿಗೆ ನೀಡಿರುವ ಗ್ಯಾರಂಟಿ ಈಡೇರಿಸಲಾಗದೇ ಕಾಂಗ್ರೆಸ್ ನಾಟಕವಾಡುತ್ತಿದೆ ಎಂದಿದೆ.
ಕರ್ನಾಟಕದಲ್ಲಿನ ಕಾಂಗ್ರೆಸ್ ಸರಕಾರ ಭಾರತ ಆಹಾರ ನಿಗಮದಿಂದ ಪ್ರತಿ ಕೆಜಿಗೆ 34 ರೂ. ಕೊಟ್ಟು ಅಕ್ಕಿ ಖರೀದಿಸಿ ಬಡವರಿಗೆ ಹಂಚಲು ಯೋಜನೆ ಹಾಕಿಕೊಂಡಿತ್ತು. ಆದರೆ ಕೇಂದ್ರ ಸರಕಾರವು ಇದಕ್ಕೆ ತಡೆಯೊಡ್ಡಿದೆ. ಅಲ್ಲದೆ, ಎಥೆನಾಲ್ ಉತ್ಪಾದನೆಗಾಗಿ ಪ್ರತಿ ಕೆಜಿಗೆ 20 ರೂ.ನಂತೆ ಎಫ್ಸಿಐ ಅಕ್ಕಿ ನೀಡುತ್ತಿದೆ. ಹೀಗಾಗಿ, ಕರ್ನಾಟಕ ಸರಕಾರ ಪ್ರತಿ ಕೆಜಿಗೆ ಅಕ್ಕಿಗೆ 34 ರೂ.ಗಳಂತೆ ಬಿಪಿಎಲ್ ಕಾರ್ಡ್‌ದಾರರಿಗೆ ಹಣ ನೀಡಲು ಮುಂದಾಗಿದೆ ಎಂದಿದ್ದಾರೆ.
ಇದಕ್ಕೆ ತಿರುಗೇಟು ನೀಡಿರುವ ಅಮಿತ್ ಮಾಳವೀಯ, ಈ ವಿಚಾರದಲ್ಲಿ ಕಾಂಗ್ರೆಸ್ ಸರಕಾರವು ಕೇಂದ್ರವನ್ನು ತೆಗಳುವುದನ್ನು ಬಿಡಬೇಕು. ಜತೆಗೆ, ಜನರಿಗೆ ಕೊಟ್ಟಿರುವ ಗ್ಯಾರಂಟಿಯನ್ನು ಈಡೇರಿಸುವ ಬಗ್ಗೆ ಚಿಂತನೆ ನಡೆಸಲಿ ಎಂದಿದ್ದಾರೆ. ಅಲ್ಲದೆ, ಕೇಂದ್ರ ಸರಕಾರ ಈಗಾಗಲೇ ಕರ್ನಾಟಕವೂ ಸೇರಿ ದೇಶದ 80 ಕೋಟಿ ಜನರಿಗೆ ಉಚಿತವಾಗಿ ಅಕ್ಕಿ ಮತ್ತು ಆಹಾರ ಧಾನ್ಯ ನೀಡುತ್ತಿದೆ ಎಂದೂ ತಿಳಿಸಿದ್ದಾರೆ. ಜತೆಗೆ ಬಿಪಿಎಲ್ ಫಲಾನುಭವಿಗಳಿಗೆ ಹಣ ನೀಡಲು ಹೊರಟಿರುವ ಸರಕಾರ, ಇದಕ್ಕೆ ಯಾವ ಮಾನದಂಡ ಅನುಸರಿಸಲಿದೆ? ಇದಕ್ಕೆ ಬೇಕಾದ ಹಣ ಎಲ್ಲಿದೆ? ಪ್ರತಿ ಮಹಿಳೆಗೆ 2000 ರೂ. ನೀಡುತ್ತೇವೆ ಎಂದು ನೀಡಿದ್ದ ಭರವಸೆ ಏನಾಯಿತು ಎಂದು ಸರಣಿ ಪ್ರಶ್ನೆ ಕೇಳಿದ್ದಾರೆ.
ಇನ್ನು 3 ತಿಂಗಳಲ್ಲಿ ಅಕ್ಕಿ ಕೊಟ್ಟೇ ಕೊಡುತ್ತೇವೆ: ಪರಮೇಶ್ವರ್
ತುಮಕೂರು: ಬಡವರ ಹಸಿವಿನ ವಿಚಾರದಲ್ಲಿ ರಾಜಕೀಯ ಮಾಡಬಾರದು. ಆ ಕೆಲಸವನ್ನು ಕೇಂದ್ರ ಬಿಜೆಪಿ ಸರಕಾರ ಮಾಡುತ್ತಿದೆ. ಗೋಡನ್‌ನಲ್ಲಿ ಅಕ್ಕಿ ಇದ್ದರೂ ಕೊಡುತ್ತಿಲ್ಲ. ನಾವು ಜನರಿಗೆ ಮಾತು ಕೊಟ್ಟಿದ್ದೇವೆ. ಈಗ ತಾತ್ಕಾಲಿಕವಾಗಿ ಹಣ ನೀಡಿ ಇನ್ನು ಮೂರು ತಿಂಗಳಲ್ಲಿ ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ತಿಳಿಸಿದರು.
ಕೊರಟಗೆರೆಯ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯ ಕೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ನಾವು ರಾಜ್ಯದ ಜನರಿಗೆ ಅಕ್ಕಿ ಕೊಡಲೇಬೇಕು ಎಂದು ತೀರ್ಮಾನಿಸಿದ್ದೇವೆ. ಅಕ್ಕಿ ಕೊಟ್ಟೇ ಕೊಡುತ್ತೇವೆ. ಸದ್ಯಕ್ಕೆ ತಾತ್ಕಾಲಿಕವಾಗಿ ಅಕ್ಕಿ ಬದಲಿಗೆ ದುಡ್ಡು ಕೊಡುತ್ತಿದ್ದೇವೆ. ಅಕ್ಕಿ ಕೊಡುವ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಅಕ್ಕಿ ಬದಲಿಗೆ ದುಡ್ಡು ಕೊಡುವುದನ್ನು ಕೆಲವರು ಮಾತ್ರ ವಿರೋಧಿಸುತ್ತಾರೆ. ಆದರೆ ನಾವು ದುಡ್ಡು ಕೊಟ್ಟರೂ ಕೇಂದ್ರ ಸರಕಾರ ಅಕ್ಕಿ ಕೊಡುತ್ತಿಲ್ಲ. ದೇಶದ ಗೋದಾಮಿನಲ್ಲಿ ಅಕ್ಕಿ ಕೊಳೆಯುತ್ತಿದೆ. ರಾಜ್ಯದ ಎಫ್ಸಿಐನಲ್ಲಿ 7 ಲಕ್ಷ ಟನ್ ಅಕ್ಕಿ ದಾಸ್ತಾನಿದೆ. ಖಾಸಗಿಯವರಿಗೆ ಮಾರುತ್ತಿದ್ದಾರೆ. ನಮಗೆ ರಾಜಕೀಯ ಕಾರಣಕ್ಕೋಸ್ಕರ ಅಕ್ಕಿ ಕೊಡುತ್ತಿಲ್ಲ ಎಂದು ದೂರಿದರು.
ಇದು ಪ್ರತಿಷ್ಠೆಯ ವಿಚಾರ ಆಗಬಾರದು. ಬಡವರ ಹಸಿವಿನ ಪ್ರಶ್ನೆಯಾಗಬೇಕು. ಪ್ರತಿಷ್ಠೆಯಿಂದ ಹೊಟ್ಟೆ ತುಂಬುವುದಿಲ್ಲ. ಬಿಜೆಪಿಯವರೇ “ಹಣ ಕೊಡಿ ಹಣ ಕೊಡಿ’ ಎಂದು ಬೊಬ್ಬೆಯೊಡೆದರು. ಈಗ ಏಕಾಏಕಿ ಟೀಕಿಸುತ್ತಿದ್ದಾರೆ. ಬಡವರ ಹಸಿವಿನ ವಿಚಾರದಲ್ಲಿ ರಾಜಕೀಯ ಮಾಡಬಾರದು.
-ಡಾ| ಜಿ.ಪರಮೇಶ್ವರ್, ಗೃಹ ಸಚಿವ
ಅಕ್ಕಿ ಕೊಡಲು ಆಗದಿದ್ದರೆ ಹಣ ನೀಡಿ ಎಂದಿದ್ದ ಬಿಜೆಪಿಯವರು ಈಗ ಹಣ ಕೊಡುವ ಸರಕಾರ ನಿರ್ಧಾರವನ್ನೂ ಟೀಕಿಸುತ್ತಿದ್ದಾರೆ. ಎಲ್ಲದಕ್ಕೂ ಟೀಕಿಸುವ ಇವರ ಉದ್ದೇಶ ಏನೆಂಬುದೇ ಅರ್ಥವಾಗುತ್ತಿಲ್ಲ.
-ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.