ಪವಿತ್ರವಾದ ಕೇಸರಿ ಪಾವಿತ್ರ್ಯತೆ ಹಾಳು ಮಾಡುವುದು ಬೇಡ: ಹೆಚ್ ಡಿಕೆ ಆಕ್ರೋಶ
ಕಲಾಪ ಹಾಳು , ದಿನಕ್ಕೆ 1.5ರಿಂದ 2 ಕೋಟಿ ರೂಪಾಯಿ ಪೋಲು
Team Udayavani, Feb 17, 2022, 6:24 PM IST
ಬೆಂಗಳೂರು: ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಹಾಗೂ ಕಲಾಪವನ್ನು ಹಾಳು ಮಾಡುತ್ತಿರುವವರನ್ನು ಕೂಡಲೇ ಸದನದಿಂದ ಹೊರಹಾಕಿ.ಕಲಾಪವನ್ನು ನಡೆಸುವ ಶಕ್ತಿ ಸರಕಾರಕ್ಕೆ ಇಲ್ಲದಿದ್ದರೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಸರಕಾರವನ್ನು ಒತ್ತಾಯಿಸಿದ್ದಾರೆ.
ವಿಧಾನಸಭೆ ಕಲಾಪವನ್ನು ಮುಂದೂಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿ, ಕಲಾಪವನ್ನು ಹಾಳು ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಹಾಗೂ ರೈತರು, ಕಾರ್ಮಿಕರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಚರ್ಚೆ ಮಾಡುವುದು ಬಿಟ್ಟು ಕೇಸರಿ ಬಾವುಟದ ವಿಷಯ ಇಟ್ಟುಕೊಂಡು ಎರಡು ದಿನಗಳ ಕಲಾಪವನ್ನು ಹಾಳು ಮಾಡಿದರು. ಸಚಿವರೊಬ್ಬರ ರಾಜೀನಾಮೆ ಪಡೆಯಬೇಕು ಎಂಬುದನ್ನೇ ಪ್ರತಿಷ್ಠೆ ಮಾಡಿಕೊಂಡು ಜನರ ನಿರೀಕ್ಷೆಗಳನ್ನು ಅವಹೇಳನ ಮಾಡುತ್ತಿದ್ದಾರೆ ಎಂದು ಗುಡುಗಿದರು.
ಹತ್ತು ನಿಮಿಷ ಧರಣಿ ಮಾಡುವುದು, ಆಮೇಲೆ ಸದನವನ್ನು ಮುಂದಕ್ಕೆ ಹಾಕುವುದು, ಕಲಾಪ ನಡೆಸುವ ರೀತಿ ಇದಲ್ಲ. ಯಾವ ಪುರುಷಾರ್ಥಕ್ಕೆ ಅಧಿವೇಶನವನ್ನು ಕರೆದಿದ್ದೀರಿ. ಸರಕಾರಕ್ಕೆ ಸದನವನ್ನು ಸಕ್ರಮವಾಗಿ ನಡೆಸುವ ಶಕ್ತಿ ಮತ್ತು ಬದ್ಧತೆ ಇಲ್ಲದಿದ್ದರೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದಕ್ಕೆ ಹಾಕಿ. ಸುಖಾ ಸುಮ್ಮನೆ ದಿನಕ್ಕೆ 1.5ಯಿಂದ 2 ಕೋಟಿ ರೂಪಾಯಿಯಷ್ಟು ಜನರ ತೆರಿಗೆಯನ್ನು ಯಾಕೆ ಪೋಲು ಮಾಡುತ್ತೀರಿ. ಕೇವಲ ಟಿಎ, ಡಿಎ ಪಡೆಯಲು ಕಲಾಪ ನಡೆಸಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ : ಹಿಜಾಬ್ ವಿವಾದ: ಕೈ ಮುಸ್ಲಿಂ ಶಾಸಕರೊಂದಿಗೆ ಸಚಿವ ನಾಗೇಶ್ ಊಟ, ಚರ್ಚೆ
ಹಿಜಾಬ್ ಮತ್ತು ಕೇಸರಿ ಶಾಲುಗಳ ವಿವಾದದಿಂದ ಶಿಕ್ಷಣ ವ್ಯವಸ್ಥೆ ಹಾಳಾಗಿದೆ. ಅಲ್ಲೆಲ್ಲಾ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಮಕ್ಕಳು ಹೊಡೆದಾದಿಕೊಳ್ಳುವ ಸನ್ನಿವೇಶ ಉಂಟಾಗಿದೆ. ಈ ವಿಷಯವನ್ನು ಸದನದಲ್ಲಿ ಚರ್ಚೆ ನಡೆಸಬೇಕಿತ್ತು ಎಂದರು.
ಬೇಸಿಗೆ ಬರುವುದಕ್ಕೆ ಮುನ್ನವೇ ರಾಜ್ಯದಲ್ಲಿ ದಿನಕ್ಕೆ ಎರಡೂವರೆ ಗಂಟೆ ಕಾಲ ಲೋಡ್ ಶೆಡ್ಡಿಂಗ್ ಶುರುವಾಗಿದೆ. ವಿದ್ಯುತ್ ಕಡಿತದಿಂದ ರೈತರು ಬೆಳೆಗಳಿಗೆ ರಾತ್ರಿ ಹೊತ್ತು ನೀರು ಹರಿಸಬೇಕಾದ ಕಷ್ಟದ ಸ್ಥಿತಿ ಎದುರಾಗಿದೆ. ಆಡಳಿತಾರೂಢ ಪಕ್ಷಕ್ಕೆ ಮತ್ತು ಅಧಿಕೃತ ವಿರೋಧ ಪಕ್ಷಕ್ಕೆ ಇದರ ಬಗ್ಗೆ ಕಾಳಜಿ ಇಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳು ಕಲಾಪವನ್ನು ಹಾಳು ಮಾಡಿ ಜನರ ನಿರೀಕ್ಷೆಗಳನ್ನು ಕಾಲ ಕಸದಂತೆ ನೋಡುತ್ತಿವೆ. ಈ ವಿಷಯಗಳನ್ನು ಪ್ರಸ್ತಾಪ ಮಾಡಲು ಉದ್ದೇಶಿಸಿದ್ದೆ. ಆದರೆ ಅವಕಾಶ ಸಿಗಲಿಲ್ಲ ಎಂದು ಕಿಡಿಕಾರಿದರು.
ಕೇಸರಿ ಪವಿತ್ರ ವಸ್ತ್ರ
ಹಿಂದೂಗಳ ಪಾಲಿಗೆ ಕೇಸರಿ ಪವಿತ್ರ ವಸ್ತ್ರವಾಗಿದ್ದು ಅದರ ಪಾವಿತ್ರ್ಯತೆಯನ್ನು ಯಾರು ಕೂಡ ಹಾಳು ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
ಹಿಂದೂ ಸಂಸ್ಕೃತಿ, ಪರಂಪರೆಯಲ್ಲಿ ಕೇಸರಿ ಬಣ್ಣ ಹಾಗೂ ಕೇಸರಿ ವಸ್ತ್ರಕ್ಕೆ ಪೂಜ್ಯ ಸ್ಥಾನವಿದೆ. ನಮ್ಮ ಪೂರ್ವಿಕರ ಕಾಲದಿಂದ ಇದು ನಡೆದುಕೊಂಡು ಬಂದಿದೆ. ಸರ್ವಸಂಗ ಪರಿತ್ಯಾಗಿಗಳು, ಸಂತರು, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಮಾಡುತ್ತಿರುವ ಪೂಜ್ಯರು ಕೇಸರಿ ವಸ್ತ್ರಗಳನ್ನು ಧರಿಸುತ್ತಾರೆ. ಆದರೆ ಬಿಜೆಪಿ, ಆರ್ ಎಸ್ ಎಸ್ ಮತ್ತದರ ಸಹ ಸಂಘಟನೆಗಳು ಕೇಸರಿ ಬಾವುಟವನ್ನು ಇಟ್ಟುಕೊಂಡೇ ಹೋರಾಟ ಮಾಡುತ್ತಿವೆ.
ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು ಎನ್ನುವುದು ಆ ಸಂಘಟನೆಗಳ ಮಹದಾಸೆ. ಅವರ ಅಜೆಂಡಾ ಕೂಡ ಅದೇ. ಆ ಹಿನ್ನೆಲೆಯೊಳಗೆ ಸಚಿವ ಈಶ್ವರಪ್ಪ ಅವರು ಮುಂದೊಂದು ದಿನ ಕೆಂಪುಕೋಟೆ ಮೇಲೂ ಕೇಸರಿ ಭಾವುಟವನ್ನು ಯಾರಾದರೂ ಹಾರಿಸಬಹುದು ಎಂದು ಹೇಳಿದ್ದರು. ನಾನೇ ಹಾರಿಸುತ್ತೇನೆ ಎಂದು ಅವರೇನೂ ಹೇಳಿಲ್ಲ. ಹೀಗಿದ್ದರೂ ಕಾಂಗ್ರೆಸ್ ಪ್ರತಿಷ್ಠೆಗೆ ಬಿದ್ದು ಕಲಾಪವನ್ನು ಹಾಳು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
ಕರ್ನಾಟಕ ಸೇರಿದಂತೆ ದಕ್ಷಿಣದ ಎಲ್ಲ ರಾಜ್ಯಗಳಲ್ಲಿಯೂ ಧ್ವಜ ಸ್ತಂಭಗಳನ್ನು ನೆಡುವ, ಅವುಗಳಲ್ಲಿ ತಮ್ಮ ಸಂಘಟನೆಗಳ ಬಾವುಟ ಹಾರಿಸುವುದು ಇದೆ. ನಮ್ಮಲ್ಲೂ ಕನ್ನಡ ಸಂಘಟನೆಗಳು ಕನ್ನಡ ಭಾವುಟವನ್ನು ಹಾರಿಸುತ್ತವೆ. ತಮಿಳುನಾಡಿನಲ್ಲಿಯೂ ಇಂಥ ದೃಶ್ಯಗಳನ್ನು ಕಾಣಬಹುದು. ಖಾಲಿ ಇರುವ ಧ್ವಜ ಸ್ತಂಭಗಳಲ್ಲಿ ಕೇಸರಿ ಭಾವುಟ ಹಾರಿಸುವುದನ್ನು ನೋಡಿದ್ದೇವೆ. ಈ ವಿಷಯವನ್ನು ದೊಡ್ಡದು ಮಾಡಿ ಸದನದ ಕಲಾಪವನ್ನು ಹಾಳು ಮಾಡುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು.
ಎರಡೂ ರಾಷ್ಟ್ರೀಯ ಪಕ್ಷಗಳು ಜನರ ಹಿತ ಮರೆತು ವರ್ತಿಸುತ್ತಿವೆ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಮೈಕ್ರೋಫೈನಾನ್ಸ್ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು
Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.