ಬೇಟಿ ಬಚಾವೋ ಬೇಟಿ ಪಡಾವೋ ಈಗ ಬೇಟಿ ಹಠಾವೋ: ಹೆಚ್ ಡಿಕೆ ಆಕ್ರೋಶ
Team Udayavani, Feb 5, 2022, 4:57 PM IST
ಬೆಂಗಳೂರು: ಕೇಂದ್ರ ಸರಕಾರದ ಬೇಟಿ ಬಚಾವೋ ಬೇಟಿ ಪಡಾವೋ ಘೋಷಣೆ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು; ” ಹೆಣ್ಣು ಮಕ್ಕಳ ಉದ್ಧಾರಕ್ಕಾಗಿ ಕೇಂದ್ರ ಸರಕಾರ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತಂದಿದೆ. ಆದರೆ ಈಗ ರಾಜ್ಯ ಸರಕಾರವು ಅನಗತ್ಯವಾಗಿ ಹಿಜಾಬ್ ವಿಷಯವನ್ನು ವಿವಾದ ಮಾಡುವ ಮೂಲಕ ಭೇಟಿ ಹಠಾವೋ ಮಾಡಲು ಹೊರಟಿದೆ ” ಎಂದರು.
ಕೋವಿಡ್ ಸಂಕಷ್ಟದ ಸಮಯದಲ್ಲಿ ಸರಿಯಾಗಿ ಶಾಲೆ ಕಾಲೇಜುಗಳು ನಡೆಯದೇ ವಿಧ್ಯಾರ್ಥಿಗಳು ಮತ್ತು ಪೋಷಕರು ಒದ್ದಾಡುತ್ತಿದ್ದಾರೆ. ಇಂಥ ಕಷ್ಟದ ಸಮಯದಲ್ಲಿ ಹಿಜಾಬ್ ವಿವಾದವನ್ನು ಸೃಷ್ಟಿ ಮಾಡಲಾಗಿದೆ. ಇದು ಅನಗತ್ಯವಾಗಿತ್ತು. ರಾಜ್ಯದ ಸಾಮರಸ್ಯವನ್ನು ಹಾಳು ಮಾಡಲಾಗುತ್ತಿದೆ. ಶಾಂತಿಗೆ ಮತ್ತು ಪ್ರಗತಿಗೆ ಹೆಸರಾದ ರಾಜ್ಯದಲ್ಲಿ ಸಾಮರಸ್ಯ ನೆಲೆಸಬೇಕು ಎನ್ನುವ ಮನಸ್ಸಿದ್ದರೆ ರಾಷ್ಟ್ರೀಯ ಪಕ್ಷಗಳ ನಾಯಕರು ಹಿಜಾಬ್ ಮತ್ತು ಕೇಸರಿ ಶಾಲುಗಳ ವಿಷಯವನ್ನು ಇಲ್ಲಿಗೆ ಬಿಡಲಿ ಎಂದು ಕುಮಾರಸ್ವಾಮಿ ಅವರು ಕಿವಿಮಾತು ಹೇಳಿದರು.
ಯಾವುದೇ ಅಸೂಯೆ, ದ್ವೇಷ ಇಲ್ಲ ನಿರ್ಮಲ ಮನಸಿನ ಮಕ್ಕಳಲ್ಲಿ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ವಿಷ ತುಂಬುವುದು ಬೇಡ. ಕಳೆದ ಹದಿನೈದು ದಿನಗಳಿಂದ ಕೇಳಿ ಬರುತ್ತಿರುವ ಈ ವಿಷಯವನ್ನು ಇಲ್ಲಿಗೇ ಬಿಡುವುದು ಉತ್ತಮ. ಮುಖ್ಯಮಂತ್ರಿಗಳು ಇಂಥ ಸೂಕ್ಷ್ಮ ವಿಷಯಗಳನ್ನು ಬೆಳೆಯಲು ಬಿಡದೇ ಸರಿಯಾಗಿ ನಿಭಾಯಿಸಬೇಕು. ಯಾವುದೇ ಕಾರಣಕ್ಕೂ ಸಮಾಜದ ವಾತಾವರಣ ಕಲುಷಿತ ಆಗದ ರೀತಿ ನೋಡಿಕೊಳ್ಳಬೇಕು ಎಂದರು.
ಕರಾವಳಿ ಪ್ರದೇಶದಲ್ಲಿ ಕೆಲ ಕಡೆ ಈ ರೀತಿಯ ಹಿಜಾಬ್ ವ್ಯವಸ್ಥೆ ಇತ್ತು ಅನ್ನುವುದು ಗಮನಕ್ಕೆ ನನ್ನ ಗಮನಕ್ಕೆ ಬಂದಿದೆ. ಸೂಕ್ಷ್ಮವಾದ ಇಂಥ ನಂಬಿಕೆಗಳ ಬಗ್ಗೆ ಯಾರೂ ಕೆರಳಿಸುವ ರೀತಿಯಲ್ಲಿ ವರ್ತಿಸಬಾರದು. ಯಾವ ಶಾಲೆಯಲ್ಲಿ ಹಿಜಾಬ್ ಗೆ ಅನುಮತಿ ಕೊಟ್ಟಿದ್ದಾರೋ ಅವರು ಮುಂದುವರೆಸಿಕೊಂಡು ಹೋಗಲಿ. ಹೊಸದಾಗಿ ಈಗ ಕೆಲವರು ಇಂಥವಕ್ಕೆ ಯಾಕೆ ಅನುಮತಿ ಕೊಟ್ಟರು?ಹಿಂದು-ಮುಸ್ಲಿಮ್ ಅನ್ನುವುದಕ್ಕಿಂತ ಹೆಚ್ಚಾಗಿ ಮಕ್ಕಳಲ್ಲಿ ಇಂತ ಸಂಕುಚಿತ ಭಾವನೆ ಬೆಳೆಯಲು ಯಾರೂ ಅವಕಾಶ ಕೊಡಬಾರದು ಎಂದು ಆಗ್ರಹಿಸಿದರು.
ಒಂದೆಡೆ ಕೋವಿಡ್, ನಿರುದ್ಯೋಗ, ಬೆಲೆ ಏರಿಕೆ ಇತ್ಯಾದಿ ಸಮಸ್ಯೆಗಳಿಂದ ಜನರು ನರಳುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಭಯದ ವಾತಾವರಣ ಉಂಟು ಮಾಡುವುದು ಬೇಡ. ರಾಷ್ಟ್ರೀಯ ಪಕ್ಷಗಳಿಗೆ ಶೋಭೆ ತರುವ ಕೆಲಸ ಇದಲ್ಲ. ಹಿಂದಿನಿಂದ ಶಾಲೆಗಳು ಯಾವ ರೀತಿ ನಡೆಯುತ್ತಿದ್ದವೋ ಹಾಗೆ ನಡೆಯಲಿ. ಇರುವ ಉತ್ತಮ ವ್ಯವಸ್ಥೆಯನ್ನು ಯಾರು ಹಾಳು ಮಾಡುವುದು ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಪರಿಷತ್ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ
ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!
“ನಿಮ್ಹಾನ್ಸ್ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು
10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.