Biparjoy: ಮತ್ತಷ್ಟು ತೀವ್ರಗೊಂಡ ಚಂಡಮಾರುತ
Team Udayavani, Jun 11, 2023, 7:25 AM IST
ಅಹ್ಮದಾಬಾದ್: ಅರಬಿ ಸಮುದ್ರದಲ್ಲಿ ಎದ್ದಿರುವ ಬೈಪರ್ಜಾಯ್ ಚಂಡಮಾರುತವು ರವಿವಾರ ಮುಂಜಾನೆ ವೇಳೆಗೆ ತೀವ್ರತೆ ಪಡೆದುಕೊಳ್ಳಲಿದ್ದು, ಪ್ರಸ್ತುತ ಅಂದಾಜಿನ ಪ್ರಕಾರ ಗುಜರಾತ್ ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆ ಕಡಿಮೆ ಎಂದು ಶನಿವಾರ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಗುಜರಾತ್ನ ಪೋರಬಂದರ್ ಕರಾವಳಿಯಿಂದ 200-300ಕಿ.ಮೀ. ದೂರದಿಂದಲೇ ಚಂಡಮಾರುತ ಹಾದುಹೋಗಲಿದೆ. ಆದರೆ ಇದರ ಪರಿಣಾಮ ವೆಂಬಂತೆ, ಮುಂದಿನ 5 ದಿನಗಳ ಕಾಲ ಗುಜರಾತ್ನಲ್ಲಿ ಗುಡುಗು-ಮಿಂಚು, ಬಿರುಗಾಳಿಯಿಂದ ಕೂಡಿದ ಮಳೆಯಾಗಲಿದೆ. 24 ಗಂಟೆಗಳಲ್ಲಿ ಚಂಡ ಮಾರುತವು ಉತ್ತರ-ವಾಯವ್ಯದತ್ತ ಸಂಚರಿಸುವ ಸಾಧ್ಯತೆಯಿದೆ ಎಂದೂ ಇಲಾಖೆ ತಿಳಿಸಿದೆ.
ಹಲವು ರಾಜ್ಯಗಳಲ್ಲಿ ಮಳೆ: ಚಂಡಮಾರುತದ ಪರಿಣಾಮವಾಗಿ ಕರ್ನಾಟಕ, ಕೇರಳ, ಲಕ್ಷದ್ವೀಪ, ಮಹಾರಾಷ್ಟ್ರ ಹಾಗೂ ಗೋವಾದಲ್ಲಿ ಭಾರೀ ಮಳೆ ಯಾಗುವ ಸಾಧ್ಯತೆಯಿದೆ. ಕರ್ನಾಟಕ, ಗೋವಾ, ಮಹಾರಾಷ್ಟ್ರಕ್ಕೆ ಹೈಅಲರ್ಟ್ ಘೋಷಿಸಲಾಗಿದ್ದು, ಕೇರಳದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂಬಯಿಯಲ್ಲಿ ಶನಿವಾರ ಭಾರೀ ಬಿರುಗಾಳಿ ಬೀಸಿದ್ದು, ಪಶ್ಚಿಮ ರೈಲ್ವೇ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.