World’s Highest Shiva Temple; ವಾಲುತ್ತಿದೆ ವಿಶ್ವದ ಅತಿ ಎತ್ತರದ ಶಿವ ದೇಗುಲ!
6-10 ಡಿಗ್ರಿ ಬಾಗಿದ ರುದ್ರಪ್ರಯಾಗ್‌ನ ತುಂಗನಾಥ ದೇವಾಲಯ:ಸಂರಕ್ಷಿತ ಸ್ಮಾರಕ ಎಂದು ಘೋಷಿಸಲು ಒತ್ತಾಯ
Team Udayavani, May 19, 2023, 7:38 AM IST
ಡೆಹ್ರಾಡೂನ್: ಜಗತ್ತಿನಲ್ಲೇ ಅತಿ ಎತ್ತರದಲ್ಲಿರುವ ಶಿವ ದೇಗುಲ ಎಂದೇ ಖ್ಯಾತಿ ಪಡೆದಿರುವ ತುಂಗನಾಥ ದೇವಾಲಯವು 5ರಿಂದ 6 ಡಿಗ್ರಿಯಷ್ಟು ವಾಲಿದೆಯಂತೆ!
ಭಾರತೀಯ ಪುರಾತತ್ವ ಇಲಾಖೆ ನಡೆಸಿದ ಅಧ್ಯಯನದಿಂದ ಈ ಅಚ್ಚರಿಯ ಅಂಶ ಬೆಳಕಿಗೆ ಬಂದಿದೆ. ಉತ್ತರಾಭಿಮುಖವಾಗಿ ಮತ್ತು ಸಮುದ್ರಮಟ್ಟದಿಂದ ಬರೋಬ್ಬರಿ 12,800 ಅಡಿ ಎತ್ತರದಲ್ಲಿ ತುಂಗನಾಥ ದೇಗುಲವಿದೆ. ಗವ್ಹಾಲ್ ಹಿಮಾಲಯದ ರುದ್ರಪ್ರಯಾಗ್ ಜಿಲ್ಲೆಯಲ್ಲಿರುವ ಈ ಶಿವ ದೇವಸ್ಥಾನವು 5ರಿಂದ 6 ಡಿಗ್ರಿಯಷ್ಟು ವಾಲಿದರೆ, ದೇಗುಲದ ಸಂಕೀರ್ಣದಲ್ಲಿರುವ ಇತರೆ ಸಣ್ಣಪುಟ್ಟ ಕಟ್ಟಡಗಳು 10 ಡಿಗ್ರಿಗಳಷ್ಟು ವಾಲಿದೆ ಎಂದು ವರದಿ ತಿಳಿಸಿದೆ.
ಈ ವರದಿ ಕುರಿತು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿರುವ ಪುರಾತತ್ವ ಅಧಿಕಾರಿಗಳು, ಆದಷ್ಟು ಹೇಗ ತುಂಗನಾಥ ದೇಗುಲವನ್ನು ಸಂರಕ್ಷಿತ ಸ್ಮಾರಕ ಎಂದು ಘೋಷಿಸುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ, ಇದನ್ನು ರಾಷ್ಟ್ರೀಯ ಮಹತ್ವ ಹೊಂದಿರುವ ಸಂರಕ್ಷಿತ ಸ್ಮಾರಕ ಎಂದು ಘೋಷಿಸುವ ಪ್ರಕ್ರಿಯೆ ಆರಂಭಿಸಿದೆ. ಜತೆಗೆ, ಈ ಕುರಿತು ಸಾರ್ವಜನಿಕರ ಅಭಿಪ್ರಾಯಗಳನ್ನೂ ಆಹ್ವಾನಿಸಿದೆ.
ಹಾನಿಗೆ ಕಾರಣ?
ದೇವಾಲಯವು ಏಕಾಏಕಿ ವಾಲಲು ಕಾರಣವೇನು ಎಂಬುದರ ಬಗ್ಗೆ ಪರಿಶೀಲಿಸಲು ಕ್ರಮ ಕೈಗೊಳ್ಳುತ್ತೇವೆ. ಸಂರಕ್ಷಣೆ ಅಗತ್ಯವಿದೆಯೇ, ಸ್ಮಾರಕದ ಪುನಸ್ಥಾಪನೆ ಮಾಡಬೇಕೇ, ಮಾಡುವುದಿದ್ದರೆ ಎಷ್ಟನ್ನು ಮಾಡಬೇಕು, ದೇಗುಲ ಮತ್ತಷ್ಟು ವಾಲುವ ಸಾಧ್ಯತೆಯಿದೆಯೇ ಎಂಬ ಬಗ್ಗೆ ಪರಿಶೀಲಿಸಲಾಗುತ್ತದೆ ಎಂದು ಪುರಾತತ್ವ ಸರ್ವೇ ಅಧಿಕಾರಿಗಳು ಹೇಳಿದ್ದಾರೆ.
ತುಂಗನಾಥ ಎನ್ನುವುದು 8ನೇ ಶತಮಾನದಲ್ಲಿ ನಿರ್ಮಿಸಲಾದ ಜಗತ್ತಿನ ಅತಿ ಎತ್ತರದ ಶಿವ ದೇಗುಲ. ಪ್ರತಿ ವರ್ಷ ಇಲ್ಲಿಗೆ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಾರೆ. ಕೇದಾರನಾಥ ಮತ್ತು ಬದ್ರಿನಾಥ ದೇಗುಲಗಳನ್ನು ನಿರ್ವಹಿಸುತ್ತಿರುವ ಬದ್ರಿ-ಕೇದಾರ ದೇಗುಲ ಸಮಿತಿಯೇ ಈ ದೇಗುಲದ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.